July 16, 2024

ವಿದ್ಯಾರ್ಥಿಗಳಲ್ಲಿ ರಾಷ್ಟ್ರಭಕ್ತಿ ತುಂಬಲು ಭಾರತ ಸೇವಾದಳ ಸಹಕಾರಿ

0
ಭಾರತ ಸೇವಾದಳ ತರಬೇತಿ ಪಡೆದ ಶಿಕ್ಷಕರ ಪುನಃಶ್ಚೇತನ ಶಿಬಿರ

ಭಾರತ ಸೇವಾದಳ ತರಬೇತಿ ಪಡೆದ ಶಿಕ್ಷಕರ ಪುನಃಶ್ಚೇತನ ಶಿಬಿರ

ಚಿಕ್ಕಮಗಳೂರು: ಸೇವಾದಳ, ಎನ್‌ಎಸ್‌ಎಸ್, ಎನ್‌ಸಿಸಿ ಈ ಮೂರು ಸಂಸ್ಥೆಗಳು ರಾಷ್ಟ್ರವನ್ನು ಏಕತೆಗೆ ಒಗ್ಗೂಡಿಸುವ ಜೊತೆಗೆ ರಾಷ್ಟ್ರ ಕಟ್ಟಲು ನೆರವಾಗುತ್ತವೆ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಪುಟ್ಟರಾಜು ತಿಳಿಸಿದರು.

ಅವರು ಇಂದು ಭಾರತ ಸೇವಾದಳ ಜಿಲ್ಲಾ ಸಮಿತಿ ಹಾಗೂ ಶಾಲಾ ಶಿಕ್ಷಣ ಇಲಾಖೆ ಇವರುಗಳ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾಗಿದ್ದ ಭಾರತ ಸೇವಾದಳ ತರಬೇತಿ ಪಡೆದ ಶಿಕ್ಷಕರ ಪುನಃಶ್ಚೇತನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.

ಸ್ವಾತಂತ್ರ್ಯಕ್ಕಾಗಿ ಹೋರಾಡಿದವರ ಬಗ್ಗೆ ಈ ಮೂರು ಸಂಸ್ಥೆಗಳು ಅವರ ಜೀವನ ಚರಿತ್ರೆ ಹಾಗು ಹೋರಾಟದ ಬಗ್ಗೆ ಹೆಚ್ಚಿನ ಕಾರ್ಯಕ್ರಮ ರೂಪಿಸಿ ದೇಶಾದ್ಯಂತ ಭಾರತೀಯರೆಲ್ಲಾ ಒಂದಾಗಿ ಸೇರಿ ಬಾಳಲು ಮಾಡಿದ ಕೀರ್ತಿ ಸ್ವಯಂ ಸೇವಕರಿಗೆ ಸಲ್ಲುತ್ತದೆ ಎಂದರು.

ಪ್ರಸ್ತುತ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಲ್ಲಿ ಈ ಬಗ್ಗೆ ಪುನಃಶ್ಚೇತನ ತರಬೇತಿ ಮೂಲಕ ವಿದ್ಯಾರ್ಥಿಗಳಲ್ಲಿ ರಾಷ್ಟ್ರಭಕ್ತಿಯ ಕರಿತು ಅರಿವು ಮೂಡಿಸುವ ಕೆಲಸವನ್ನು ಶಿಕ್ಷಕರು ಮಾಡಬೇಕೆಂದು ಕರೆ ನೀಡಿದರು.

ಈಗಾಗಲೇ ಪುನಃಶ್ಚೇತನ ತರಬೇತಿ ಕಾರ್ಯಾಗಾರವನ್ನು ಐದು ತಾಲೂಕಿನಲ್ಲಿ ಮುಕ್ತಾಯಗೊಳಿಸಲಾಗಿದೆ. ಉಳಿದ ತಾಲೂಕುಗಳಲ್ಲಿ ಹಂತ ಹಂತವಾಗಿ ಕಾರ್ಯಕ್ರಮವನ್ನು ಆಯೋಜಿಸಿ ರಾಷ್ಟ್ರಭಕ್ತಿ ಮತ್ತು ಸ್ವತಂತ್ರ ಹೋರಾಟಗಾರರ ಬಗ್ಗೆ ಆಂದೋಲನ ಮಾಡಲಾಗುವುದೆಂದರು.
ಭಾರತ ಸೇವಾದಳ, ಎನ್‌ಎಸ್‌ಎಸ್, ಎನ್‌ಸಿಸಿ ವಿದ್ಯಾರ್ಥಿಗಳಲ್ಲಿ ದೇಶ ಸೇವೆ ಕುರಿತು ನಿಯಮಗಳನ್ನು ತಿಳಿದುಕೊಳ್ಳಲು ಸಹಕಾರಿಯಾಗಲಿ ಎಂದು ಹಾರೈಸಿದರು.

ಈ ಸಂದರ್ಭದಲ್ಲಿ ಸೇವಾದಳ ಜಿಲ್ಲಾಧ್ಯಕ್ಷ ನರೇಂದ್ರ ಪೈ, ದೈಹಿಕ ಶಿಕ್ಷಣ ಅಧೀಕ್ಷಕ ಜ್ಞಾನಮೂರ್ತಿ, ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಬಿ.ಎಸ್ ಪರಮೇಶ್, ಸೇವಾದಳ ಕಾರ್ಯದರ್ಶಿ ಹಂಪಯ್ಯ, ಸದಸ್ಯ ಬಿ.ಆರ್ ಜಗದೀಶ್, ಶೇಖ್ ಅಲಿ, ಕಿರಣ್ ಕುಮಾರ್, ಶಿವಪ್ಪ, ಶಂಕರ, ಕಾಳಯ್ಯ, ಮಹೇಶಪ್ಪ, ಲೋಕೇಶ್ವರಾಚಾರ್, ಜಿಲ್ಲಾ ಸಂಘಟಕರಾದ ಚಂದ್ರಕಾಂತ್ ಮತ್ತಿತರರು ಉಪಸ್ಥಿತರಿದ್ದರು.

Bharat Seva Dal Trained Teachers Rehabilitation Camp

About Author

Leave a Reply

Your email address will not be published. Required fields are marked *