ಚಿಕ್ಕಮಗಳೂರು: ಕರ್ನಾಟಕ ಆದಿವಾಸಿ ರಕ್ಷಣಾ ಪರಿಷತ್ನ ರಾಜ್ಯ ಪ್ರಧಾನ ಕಾರ್ಯದರ್ಶಿ ಯಾಗಿ ಪತ್ರಕರ್ತಪಿ. ರಾಜೇಶ್ ರವರನ್ನು ಆಯ್ಕೆ ಮಾಡಲಾಗಿದೆ ಎಂದು ರಾಜ್ಯಾಧ್ಯಕ್ಷ ಎಂಕೃಷ್ಣಯ್ಯ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ಇತ್ತೀಚೆಗೆ ಬೆಂಗಳೂರಿನ ಶಾಸಕರ ಭವನದಲ್ಲಿ ನಡೆದ ರಾಜ್ಯದ ೫೦ ಮೂಲಬುಡಕಟ್ಟುಗಳ ಮುಖಂಡರು ಮತ್ತು ಸಂಘದ ರಾಜ್ಯ ಪದಾಧಿಕಾರಿಗಳ ಸಭೆಯಲ್ಲಿ ಹಾಲಿ ಆದಿವಾಸಿರಕ್ಷಣಾ ಪರಿಷತ್ನ ಜಿಲ್ಲಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿರುವ ಪಿ. ರಾಜೇಶ್ ರವರನ್ನು ಸರ್ವಾನುಮತದಿಂದ ಅಂಗೀಕರಿಸಲಾಯಿತು ಎಂದಿದ್ದಾರೆ.
ಕಳೆದ ೬ವರ್ಷಗಳಿಂದ ಆದಿವಾಸಿ ರಕ್ಷಣಾ ರಿಷತ್ ನ ಜಿಲ್ಲಾಧ್ಯಕ್ಷರಾಗಿ ಜಿಲ್ಲೆಯ ಆದಿವಾಸಿಗಳ ಪರವಾಗಿ ಕಾರ್ಯನಿರ್ವಹಿಸುವುದರೊಂದಿಗೆ ರಾಜ್ಯ ಸಂಘಟನೆಯ ಕಾರ್ಯಕ್ರಮಗಳಲ್ಲಿಯೂ ಸಕ್ರಿಯವಾಗಿ ಭಾಗವಹಿಸುವ ಮೂಲಕ ಶಕ್ತಿ ತುಂಬಿರುವುದನ್ನು ಪರಿಗಣಿಸಿ ಈ ಆಯ್ಕೆ ಮಾಡಲಾಗಿದೆ ಎಂದಿದ್ದಾರೆ.
Karnataka Adivasi Rakshasa Parishad State General Secretary P. Rajesh’s choice