ಚಿಕ್ಕಮಗಳೂರು: ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ ಅವರ ೫೭ ನೇ ಹುಟ್ಟು ಹಬ್ಬದ ಅಂಗವಾಗಿ ಜೀವನ ಸಂಧ್ಯಾ ವೃದ್ಧಾಶ್ರಮದಲ್ಲಿ ಅನ್ನಸಂತರ್ಪಣೆ ಮಾಡುವ ಮೂಲಕ ಹಿರಿಯರ ಆಶೀರ್ವಾದ ಪಡೆಯಲಾಗಿದೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಎಂ.ಆರ್ ದೇವರಾಜ್ ಶೆಟ್ಟಿ ತಿಳಿಸಿದರು.
ಅವರು ಇಂದು ಜೀವನ ಸಂಧ್ಯಾ ವೃದ್ಧಾಶ್ರಮದಲ್ಲಿ ನಗರ ಬಿಜೆಪಿ ಏರ್ಪಡಿಸಿದ್ದ ಅನ್ನಸಂತರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಸಿ.ಟಿ ರವಿ ಅವರ ಜನ್ಮದಿನದ ಅಂಗವಾಗಿ ಪ್ರತೀ ವರ್ಷ ಜಿಲ್ಲಾ ಬಿಜೆಪಿ ಜಿಲ್ಲೆಯಾದ್ಯಂತ ವಿವಿಧ ರೀತಿಯ ಜನಪರ ಕಾರ್ಯಕ್ರಮಗಳನ್ನು ಕೈಗೊಂಡು ನಡೆಸಿಕೊಂಡು ಬರುತ್ತಿದ್ದೇವೆ ಎಂದು ಹೇಳಿದರು.
ಮಾಜಿ ಸಚಿವ ಸಿ.ಟಿ ರವಿ ಅವರ ಮುಂದಿನ ರಾಜಕಾರಣದಲ್ಲಿ ಉನ್ನತ ಹುದ್ದೆಗಳು ದೊರೆಯಲಿ ಹಾಗೂ ಅವರ ಆರೋಗ್ಯದಲ್ಲಿ ಯಾವುದೇ ಸಮಸ್ಯೆಯಾಗಬಾರದೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದರು.
ಜಿಲ್ಲೆಯಾದ್ಯಂತ ಈ ವೃದ್ಧಾಶ್ರಮದಲ್ಲಿ ಆಶ್ರಯ ಪಡೆದಿರುವ ಸುಮಾರು ೭೦ಕ್ಕೂ ಹೆಚ್ಚು ವೃದ್ಧರಿಗೆ ಸಿ.ಟಿ ರವಿಯವರ ಹೆಸರಿನಲ್ಲಿ ಅನ್ನಸಂತರ್ಪಣೆಯನ್ನು ಏರ್ಪಡಿಸಲಾಗಿದೆ. ಇದರ ಅಂಗವಾಗಿ ಗಿಡ ನೆಡುವ ಕಾರ್ಯಕ್ರಮ, ದೇವಾಲಯಗಳಲ್ಲಿ ವಿಶೇಷ ಪೂಜೆ, ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ವಿತರಣೆ ಮಾಡುವ ಕಾರ್ಯಕ್ರಮಗಳು ಜರುಗಿದವು ಎಂದು ತಿಳಿಸಿದರು.
ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಜೆಸೆಂತ ಅನೀಲ್ಕುಮಾರ್ ಮಾತನಾಡಿ, ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿಯವರು ಅಭಿವೃದ್ಧಿ ಹರಿಕಾರರಾಗಿದ್ದಾರೆ. ನಾಲ್ಕು ಬಾರಿ ಶಾಸಕರಾಗಿ ಸಾಧನೆ ಮಾಡಿರುವ ಇವರ ಮುಂದಿನ ಭವಿಷ್ಯದಲ್ಲಿ ಉನ್ನತವಾದ ರಾಜಕೀಯ ಅಧಿಕಾರ ದೊರೆಯಲಿ ಹಾಗೂ ಅವರ ಆರೋಗ್ಯ ಚಿರಸ್ಥಾಯಿಯಾಗಿರಲಿ ಎಂದು ಹಾರೈಸಿದರು.
ಬಿಜೆಪಿ ಮುಖಂಡ ಕೋಟೆ ರಂಗನಾಥ್ ಮಾತನಾಡಿ, ಸಿ.ಟಿ ರವಿಯವರಿಗೆ ಆಯುಷ್ ಆರೋಗ್ಯ ನೀಡಲಿ, ರಾಜಕೀಯ ಉನ್ನತ ಸ್ಥಾನಮಾನಗಳು ದೊರೆಯಲಿ ಎಂದು ದೇವರಲ್ಲಿ ಪ್ರಾರ್ಥಿಸುವುದಾಗಿ ತಿಳಿಸಿದರು.
ನಗರ ಬಿಜೆಪಿ ಒ.ಬಿ.ಸಿ ಮೋರ್ಚ ಅಧ್ಯಕ್ಷರಾದ ಸಿ.ಟಿ.ಜಯವರ್ಧನ್ ಮಾತನಾಡಿ, ಜಿಲ್ಲಾ ಬಿಜೆಪಿ ಮತ್ತು ನಗರ ಮಂಡಲ ವತಿಯಿಂದ ವಿವಿಧ ಜನಪರ ಕಾರ್ಯಕ್ರಮಗಳ ಮೂಲಕ ಸಿ.ಟಿ ರವಿಯವರ ಜನ್ಮ ದಿನಾಚರಣೆ ಮಾಡುತ್ತಿರುವುದು ಶ್ಲಾಘನೀಯ ಎಂದರು.
ಈ ಸಂದರ್ಭದಲ್ಲಿ ಬಿಜೆಪಿ ನಗರ ಮಂಡಲ ಅಧ್ಯಕ್ಷ ಪುಷ್ಪರಾಜು, ಬಿಜೆಪಿ ಉಪಾಧ್ಯಕ್ಷೆ ವೀಣಾಶೆಟ್ಟಿ, ಕೌಶಿಕ್, ಬಸವರಾಜ್, ಪವಿತ್ರ ಸೇರಿದಂತೆ ಇಡೀ ಬಿಜೆಪಿ ತಂಡ ಭಾಗವಹಿಸಿದ್ದರು.
As a part of CT Ravi’s birth anniversary Jeevan Sandhya Vridashram was given food