ಚಿಕ್ಕಮಗಳೂರು: ನಗರದ ಪ್ರತಿಷ್ಠಿತ ಆದಿಚುಂಚನಗಿರಿ ತಾಂತ್ರಿಕ ಮಹಾವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್ ವಿಭಾಗದ ವತಿಯಿಂದ ‘ಮಾಹಿತಿ ತಂತ್ರಜ್ಞಾನದಲ್ಲಿ ಆಗುತ್ತಿರುವ ಅಭಿವೃದ್ಧಿ ಹಾಗೂ ಬೆಳವಣಿಗೆಗಳು’ ಕುರಿತು ಎರಡನೇ ಅಂತರಾಷ್ಟ್ರೀಯ ಮಟ್ಟದ ಸಮ್ಮೇಳನವನ್ನು ಇದೇ ಜು.೨೪ ರಿಂದ ೨೭ ರವರೆಗೆ ಆಯೋಜಿಸಲಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲ ಡಾ. ಸಿ.ಟಿ ಜಯದೇವ ತಿಳಿಸಿದರು.
ಅವರು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮಹಾ ವಿದ್ಯಾಲಯದ ಬಿಜಿಎಸ್ ಸಭಾಂಗಣದಲ್ಲಿ ನಡೆಯಲಿರುವ ಈ ಸಮ್ಮೇಳನದ ಉದ್ಘಾಟನೆಯನ್ನು ಜು.೨೫ ರಂದು ಬೆಳಿಗ್ಗೆ ೯.೩೦ಕ್ಕೆ ಪ್ರತಿಷ್ಠಿತ ಬಾಹ್ಯಾಕಾಶ ಸಂಸ್ಥೆ ಇಸ್ರೋ ಅಧ್ಯಕ್ಷ ಡಾ. ಎಸ್.ಸೋಮನಾಥ ಅವರು ನೆರವೇರಿಸಲಿದ್ದಾರೆ. ದಿವ್ಯ ಸಾನಿಧ್ಯವನ್ನು ಆದಿಚುಂಚನಗಿರಿ ಮಹಾ ಸಂಸ್ಥಾನದ ಪೀಠಾಧ್ಯಕ್ಷ ಡಾ. ಶ್ರೀಶ್ರೀ ನಿರ್ಮಲಾನಂದನಾಥ ಮಹಾ ಸ್ವಾಮಿಗಳು ವಹಿಸಲಿದ್ದು, ಶೃಂಗೇರಿ ಶಾಖಾ ಮಠದ ಕಾರ್ಯದರ್ಶಿ ಶ್ರೀ ಗುಣನಾಥ ಸ್ವಾಮೀಜಿಯವರು ಭಾಗವಹಿಸಲಿದ್ದಾರೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ವಿದ್ಯಾಶಂಕರ, ಬೆಂಗಳೂರಿನ ಐಇಇಇ ಅಧ್ಯಕ್ಷ ಡಾ. ಟಿ.ಶ್ರೀನಿವಾಸ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಎನ್.ಎಸ್ ರಾಮೇಗೌಡ, ಎಐಟಿ ರಿಜಿಸ್ಟ್ರರ್ ಡಾ. ಸಿ.ಕೆ ಸುಬ್ಬರಾಯ ಇವರುಗಳು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದು, ನವದೆಹಲಿಯ ಣesಣ ಠಿಚಿಟಿ iಟಿಜiಚಿ ಠಿvಣ. ಐಣಜ ಇದರ ಸಿಇಓ ರಾಜೇಶ್ ಸೇಠಿಯಾ ಮುಖ್ಯ ಭಾಷಣಕಾರರಾಗಿ ಮಾತನಾಡಲಿದ್ದಾರೆ ಎಂದು ತಿಳಿಸಿದರು.
ಆದಿಚುಂಚನಗಿರಿ ತಾಂತ್ರಿಕ ಮಹಾವಿದ್ಯಾಲಯವು ಕಳೆದ ೪೪ ವರ್ಷಗಳಿಂದ ಮಲೆನಾಡಿನ, ಅರೆಮಲೆನಾಡಿನ, ಬಯಲು ಸೀಮೆಯ ವಿದ್ಯಾರ್ಥಿಗಳಿಗೆ ತಾಂತ್ರಿಕ ಶಿಕ್ಷಣ ನೀಡುವುದರ ಜೊತೆಗೆ ಈ ಭಾಗದ ಸರ್ವತೋಮುಖ ಅಭಿವೃದ್ಧಿಗೆ ತನ್ನದೇ ಆದ ಕೊಡುಗೆಯನ್ನು ನೀಡಿದೆ. ೧೯೮೦ ರಲ್ಲಿ ಎಐಟಿ ಪೀಠಾಧ್ಯಕ್ಷರಾದ ಪರಮಪೂಜ್ಯ ಪದ್ಮಭೂಷಣ ಡಾ. ಶ್ರೀಶ್ರೀ ಬಾಲಗಂಗಾಧರನಾಥ ಸ್ವಾಮೀಜಿಯವರ ದೂರದೃಷ್ಟಿತ್ವದಿಂದ ಪ್ರಾರಂಭಗೊಂಡಿತ್ತು ಎಂದು ತಿಳಿಸಿದರು.
ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥೆ ಹಾಗೂ ಸಮ್ಮೇಳನದ ಸಂಘಟಕರಾದ ಡಾ. ಪುಷ್ಪ ರವಿಕುಮಾರ್ ಮಾತನಾಡಿ, ಈ ಸಮ್ಮೇಳನದಲ್ಲಿ ತಮ್ಮ ಸಂಶೋಧನಾ ಲೇಖನಗಳನ್ನು ಮಂಡಿಸಲು ಅಮೇರಿಕಾ, ಆಸ್ಟ್ರೇಲಿಯಾ, ನಾರ್ವೆ, ಇರಾನ್, ಇರಾಕ್ ದೇಶಗಳಿಂದ ಸಂಶೋಧನಾ ಲೇಖನಗಳು ಬಂದಿದ್ದು ಭಾರತದ ವಿವಿಧ ರಾಜ್ಯಗಳಾದ ಕರ್ನಾಟಕ, ಪಂಜಾಬ್, ಉತ್ತರಪ್ರದೇಶ, ದೆಹಲಿ, ರಾಜಸ್ಥಾನ, ಗುಜರಾತ್, ಮಧ್ಯಪ್ರದೇಶ, ಒಡಿಸ್ಸಾ, ಮಹಾರಾಷ್ಟ್ರ, ಕೇರಳ, ತೆಲಂಗಾಣ, ಆಂದ್ರಪ್ರದೇಶ ಮುಂತಾದೆಡೆಗಳಿಂದ ಸುಮಾರು ೧೦೪೨ ಸಂಶೋಧನಾ ಲೇಖನಗಳು ಸಲ್ಲಿಕೆಯಾಗಿವೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಕಾಲೇಜು ಆಡಳಿತ ಮಂಡಳಿಯ ಕೆ.ಮೋಹನ್, ಸಾರ್ವಜನಿಕ ಸರ್ಪಕ ಅಧಿಕಾರಿ ಸಾಗರ್, ಅನ್ಸರ್ ಪಾಶ, ಅರ್ಪಿತ, ಸಂಗಾರೆಡ್ಡಿ ಮತ್ತಿತರರು ಉಪಸ್ಥಿತರಿದ್ದರು.
Second International Conference on Information Technology on June 28