ALSO FEATURED IN

12ಕ್ಕೆ ಶಿಕ್ಷಕರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

Spread the love

ಚಿಕ್ಕಮಗಳೂರು: ಕಳೆದ ೨೦೧೭ನೇ ಸಾಲಿನವರೆಗೆ ನೇಮಕವಾದ ಪ್ರಾಥಮಿಕ ಶಾಲಾ ಶಿಕ್ಷಕರನ್ನು ೧ ರಿಂದ ೭ಕ್ಕೆ ನೇಮಕವಾದ ಶಿಕ್ಷಕರು ಎಂದು ಪರಿಗಣಿಸಿ, ಹೊಸ ವೃಂದ ಮತ್ತು ನೇಮಕಾತಿ ನಿಯಮಗಳು ೨೦೧೭ ರ ನಂತರ ನೇಮಕವಾದ ಶಿಕ್ಷಕರಿಗೆ ಅನ್ವಯಿಸಬೇಕು. ಪದವಿ ಪೂರೈಸಿದ ಎಲ್ಲರಿಗೂ ಸೇವಾ ಜೇಷ್ಠತೆಯೊಂದಿಗೆ ಪದವೀಧರ ಶಿಕ್ಷಕರು ಎಂದು ಪರಿಗಣಿಸಬೇಕು ಎಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಆಗ್ರಹಿಸಿದೆ.

ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಘದ ತಾಲೂಕು ಅಧ್ಯಕ್ಷ ಕಿರಣ್‌ಕುಮಾರ್ ರಾಜ್ಯದ ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಯ ಪದನಾಮವನ್ನು ಬದಯಾಯಿಸಿ ಸರಕಾರ ಆದೇಶ ಹೊರಡಿಸಿದೆ. ಅದರಂತೆ ಪ್ರಾಥಮಿಕ ಶಾಲಾ ಸಹಶಿಕ್ಷಕ ವೃಂದವನ್ನು ಪ್ರಾಥಮಿಕ ಶಾಲಾ ಶಿಕ್ಷಕರು (೧ ರಿಂದ ೫ಕ್ಕೆ) ೧.೧೨.೪೬೭ ಹಾಗು ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರು (೬ ರಿಂದ ೮ ಕ್ಕೆ) ೫೧,೭೮೧ ಎಂದು ವೃಂದವಾರು ಹುದ್ದೆಗಳನ್ನು ಮಂಜೂರು ಮಾಡಲಾಗಿದೆ ಎಂದರು.

ಪರಿಣಾಮ ೨೦೧೬ಕ್ಕಿಂತ ಹಿಂದೆ ನೇಮಕಾತಿಯಾಗಿದ್ದ ಎಲ್ಲ ಸಹಶಿಕ್ಷಕರು, ಪ್ರಾಥಮಿಕ ಶಾಲಾಶಿಕ್ಷಕರು ೧ ರಿಂದ ೫ ಎಂದು ಪರಿಗಣಿಸಿರುವುದು ಶಿಕ್ಷಕರಿಗೆ ತೀವ್ರ ಅನ್ಯಾಯ ಮಾಡಿದಂತಾಗಿದೆ ಎಂದು ದೂರಿದ ಅವರು ೨೦೧೬ ಕ್ಕಿಂತ ಹಿಂದೆ ನೇಮಕವಾಗಿರುವ ಪ್ರಾಥಮಿಕ ಶಾಲಾ ಶಿಕ್ಷಕರಲ್ಲಿ ಸುಮಾರು ೮೦ ಸಾವಿರ ಶಿಕ್ಷಕರು ಪದವಿಯೊಂದಿಗೆ ಬಿಇಡಿ ಮಾಡಿಕೊಂಡಿದ್ದಾರೆ ಎಂದು ಹೇಳಿದರು.

ಇವರನ್ನು ೬ ರಿಂದ ೮ ಕ್ಕೆ ಪದವೀಧರ ಶಿಕ್ಷಕರೆಂದು ಪರಿಗಣಿಸದೆ ಇರುವುದು ದುರಾದೃಷ್ಟಕರ. ಇದರ ನಡುವೆ ೨೦೧೬ ರಿಂದ ಈಚೆಗೆ ೬ ರಿಂದ ೮ ವೃಂದದ ೨೦,೧೧೦ ಶಿಕ್ಷಕರ ನೇಮಕಾತಿಯಾಗಿದ್ದು, ಪರಿಣಾಮವಾಗಿ ಅಷ್ಟೇ ಸಂಖ್ಯೆಯ ೧ ರಿಂದ ೫ ವೃಂದದ ಶಿಕ್ಷಕರ ಹೆಚ್ಚುವರಿ ಸಮಸ್ಯೆ ಸೃಷ್ಟಿಯಾಗಿತ್ತು. ವರ್ಗಾವಣೆ ಪ್ರಕ್ರಿಯೆಯಲ್ಲೂ ವೃಂದ ಬಲದ ನಿಗಧಿತ ಸ್ಥಳಗಳ ಆಯ್ಕೆಯಲ್ಲಿ ಶಿಕ್ಷಕರಿಗೆ ಸಮಸ್ಯೆ ಸೃಷ್ಟಿಸಿದೆ ಎಂದು ಆರೋಪಿಸಿದರು.

ಲಕ್ಷಾಂತರ ಪ್ರಾಥಮಿಕ ಶಾಲಾಶಿಕ್ಷಕರಿಗೆ ಬಹುದೊಡ್ಡ ಅನ್ಯಾಯವಾಗಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಿ ತುರ್ತಾಗಿ ಒಂದು ಕಾರ್ಯಕಾರಿ ಆದೇಶವನ್ನು ಹೊರಡಿಸಬೇಕು ಎಂದು ಸರಕಾರವನ್ನು ಆಗ್ರಹಿಸುತ್ತೇವೆ. ಉಲ್ಲಂಘನೆಯಾಗಿರುವ ನಿಯಮಗಳನ್ನು ಸರಿಪಡಿಸುವ ಜತೆಗೆ ನಿರಂತರ ಸೇವಾನುಭವ ಮತ್ತು ಉನ್ನತ ವಿದ್ಯಾರ್ಹತೆ ಹೊಂದಿರುವ ಸೇವಾನಿರತ ಶಿಕ್ಷಕರಿಗೆ ಯಾವುದೇ ರೀತಿಯ ತಾರತಮ್ಯ ಹಾಗೂ ಅನ್ಯಾಯವಾಗದಂತೆ ನಿಯಮ ರೂಪಿಸಬೇಕು ಎಂದು ಒತ್ತಾಯಿಸುತ್ತೇವೆ ಎಂದರು.

೧ ರಿಂದ ೮ನೇ ತರಗತಿಗ ನೇಮಕವಾದ ಶಿಕ್ಷಕರನ್ನು ಪಿಎಸ್‌ಟಿ ಎಂದು ಪದನಾಮ ಮಾಡಿ ೧-೫ ಕ್ಕೆ ಸೀಮಿತಗೊಳಿಸಿರುವ ಆದೇಶ ಹಿಂಪಡೆಯಬೇಕು. ಅರ್ಹ ವಿದ್ಯಾರ್ಹತೆ ಪೂರೈಸಿರುವ ೨೦೧೬ ಕ್ಕಿಂತ ಮುಂಚೆ ನೇಮಕವಾದ ಎಲ್ಲ ಶಿಕ್ಷಕರಿಗೆ ಮೊದಲಿನ ಅರ್ಹತೆಯ ಆಧಾರದಲ್ಲಿ ಪ್ರೌಢಶಾಲೆಗೆ ಬಡ್ತಿ ನೀಡಬೇಕು ಎಂದು ಒತ್ತಾಯಿಸಿದರು.

ಮುಖ್ಯ ಹಾಗೂ ಹಿರಿಯ ಮುಖ್ಯ ಗುರುಗಳ ಹುದ್ದೆಗೆ ಸೇವಾ ಜೇಷ್ಠತೆ ಆಧಾರದ ಮೇಲೆ ಬಡ್ತಿ ನೀಡಬೇಕು ಎಂದು ಆಗ್ರಹಿಸಿದರು. ಇಂದು ಶಾಸಕರು, ವಿಧಾನಪರಿಷತ್ ಸದಸ್ಯರು, ಬಿಇಓ, ತಹಸೀಲ್ದಾರ್ ಅವರಿಗೆ ಮನವಿ ಸಲ್ಲಿಸಿದ್ದೇವೆ. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಇದೇ ತಿಂಗಳ ೧೨ಕ್ಕೆ ಬೃಹತ್ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ ಎಂದು ಎಚ್ಚರಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಸಂಘದ ತಾಲೂಕು ಪ್ರಧಾನ ಕಾರ್ಯದರ್ಶಿ ಅಜ್ಜಯ್ಯ, ಉಪಾಧ್ಯಕ್ಷೆ ಮೋಹನಾಕ್ಷಿ, ಶ್ರೀಧರ್, ಗುರುಮೂರ್ತಿ, ರವಿಕುಮಾರ್, ವಿಲ್ಮಾ, ರೂಪ ಹಾಗೂ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.

Massive protest in Bengaluru demanding the fulfillment of teachers’ demands at 12 o’clock

Facebook
X
WhatsApp
Telegram
Spread the love

ಚಿಕ್ಕಮಗಳೂರು: ಕೇಂದ್ರ ಕಾಫಿ ಮಂಡಳಿ ಅಧ್ಯಕ್ಷ ಎಂ.ಜೆ.ದಿನೇಶ್ ಮತ್ತು ಕರ್ನಾಟಕ ಬೆಳಗಾರರ ಒಕ್ಕೂಟದ ಅಧ್ಯಕ್ಷ ಹಳಸೆ ಶಿವಣ್ಣನವರ ನೇತೃತ್ವದಲ್ಲಿ ಮೂಡಿಗೆರೆ…

Spread the love

ಚಿಕ್ಕಮಗಳೂರು: ಕವಿತೆಗಳು ಮಾನಸಿಕವಾಗಿ ಒಂದು ಅನುಭವ ಶೋಧಕ್ಕೆ ದಾರಿ ತೆರೆದು ಕೊಡುತ್ತವೆ; ಹಾಗೆಯೇ ಅವು ಹೃದಯದಲ್ಲಿ ವೈವಿಧ್ಯತೆಯ ಭಾವನೆಗಳನ್ನು ಮೀಟುತ್ತಾ…

Spread the love

ಚಿಕ್ಕಮಗಳೂರು: ಈ ಬಾರಿಯ ಸಂಸತ್ ಅಧಿವೇಶನದಲ್ಲಿ ರಾಜ್ಯದ ಕಾಫಿ ಬೆಳೆಯುವ ಪ್ರದೇಶದ ಸಂಸದರು ಒಟ್ಟಿಗೆ ಸೇರಿ ದೆಹಲಿಯಲ್ಲಿ ಸರ್ಫೇಸಿ ಕಾಯ್ದೆಯನ್ನು ಕಾಫಿ…

Spread the love

ಚಿಕ್ಕಮಗಳೂರು: ಕೇಂದ್ರ ಕಾಫಿ ಮಂಡಳಿ ಅಧ್ಯಕ್ಷ ಎಂ.ಜೆ.ದಿನೇಶ್ ಮತ್ತು ಕರ್ನಾಟಕ ಬೆಳಗಾರರ ಒಕ್ಕೂಟದ ಅಧ್ಯಕ್ಷ ಹಳಸೆ ಶಿವಣ್ಣನವರ ನೇತೃತ್ವದಲ್ಲಿ ಮೂಡಿಗೆರೆ…

Spread the love

ಚಿಕ್ಕಮಗಳೂರು: ಕವಿತೆಗಳು ಮಾನಸಿಕವಾಗಿ ಒಂದು ಅನುಭವ ಶೋಧಕ್ಕೆ ದಾರಿ ತೆರೆದು ಕೊಡುತ್ತವೆ; ಹಾಗೆಯೇ ಅವು ಹೃದಯದಲ್ಲಿ ವೈವಿಧ್ಯತೆಯ ಭಾವನೆಗಳನ್ನು ಮೀಟುತ್ತಾ…

Spread the love

ಚಿಕ್ಕಮಗಳೂರು: ಈ ಬಾರಿಯ ಸಂಸತ್ ಅಧಿವೇಶನದಲ್ಲಿ ರಾಜ್ಯದ ಕಾಫಿ ಬೆಳೆಯುವ ಪ್ರದೇಶದ ಸಂಸದರು ಒಟ್ಟಿಗೆ ಸೇರಿ ದೆಹಲಿಯಲ್ಲಿ ಸರ್ಫೇಸಿ ಕಾಯ್ದೆಯನ್ನು ಕಾಫಿ…

[t4b-ticker]
Exit mobile version