ಚಿಕ್ಕಮಗಳೂರು: ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಜೊತೆಗೆ ಕ್ರೀಡೆಯಲ್ಲೂ ಸಾಧನೆ ಮಾಡಲು ಉತ್ತಮ ಅವಕಾಶಗಳಿವೆ, ಸತತ ಅಭ್ಯಾಸದಿಂದ ಮಾತ್ರ ಗುರಿ ಮುಟ್ಟಲು ಸಾಧ್ಯ ಎಂದು ಜಿಲ್ಲಾ ಕಾನೂನು ಮತ್ತು ಸೇವೆಗಳ ಪ್ರಾಧಿಕಾರದ ಕಾರ್ಯದರ್ಶಿಸದಸ್ಯರಾದ ಹನುಮಂತಪ್ಪ ತಿಳಿಸಿದರು.
ಜಿಲ್ಲಾ ಶತಮಾನೋತ್ಸವ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಯುವ ಸಬಲಿಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಏಡ್ಸ್ ತಡೆಗಟ್ಟುವ ಮತ್ತು ನಿಯಂತ್ರಣ ಘಟಕ ಸಂಯುಕ್ತಾಶ್ರಯದಲ್ಲಿ ಯುವ ಜನೋತ್ಸವ ೨೦೨೪ರ ಕಾಲೇಜು ವಿದ್ಯಾರ್ಥಿಗಳಿಗೆ ನಡೆದ ಮ್ಯಾರಥಾನ್ ಸ್ಪರ್ಧೆಗೆ ಚಾಲನೆ ನೀಡಿ ಮಾತನಾಡಿ ವಿದ್ಯಾರ್ಥಿಗಳು ಸತತ ಅಭ್ಯಾಸದಿಂದ ಮಾತ್ರ ಗುರಿ ಮುಟ್ಟಲು ಸಾಧ್ಯ, ನಿಮ್ಮ ಆಸಕ್ತಿಗೆ ಅನುಗುಣವಾಗಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಲು ಉತ್ತಮ ಅವಕಾಶಗಳಿವೆ ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಅಶ್ವಥ್ ಬಾಬು ಮಾತನಾಡಿ, ಯುವ ಜನೋತ್ಸವದ ಸಂದರ್ಭದಲ್ಲಿ ಪ್ರತಿ ವರ್ಷದಂತೆ ಏಡ್ಸ್ ನಿಯಂತ್ರಣ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು ಸ್ಪರ್ಧೆಯಲ್ಲಿ ಗೆದ್ದವರಿಗೆ ಯುವ ಜನೋತ್ಸವದ ಸಂದರ್ಭದಲ್ಲಿ ಪ್ರಶಸ್ತಿ ನೀಡಲಾಗುವುದು ಎಂದು ತಿಳಿಸಿದರು.
ಯುವಜನರು ಮಾದಕ ವಸ್ತುಗಳು ಸೇರಿದಂತೆ ಬೇರೆ ರೀತಿಯ ಆಕರ್ಷಣೆಗಳಿಗೆ ಬಲಿಯಾಗಿ ಜೀವನದ ಗುರಿಯನ್ನೂ ಸಾಧಿಸಲು ಆಗುತ್ತಿಲ್ಲ, ಜೊತೆಗೆ ಸಮಾಜಕ್ಕೆ ಕೆಟ್ಟ ಸಂದೇಶ ಹೋಗುತ್ತಿರುವ ಹಿನ್ನೆಲೆಯಲ್ಲಿ ವಿಶೇಷವಾಗಿ ಹೆಚ್ಐವಿ, ಏಡ್ಸ್ ತಡೆಗೆ ಜನರಲ್ಲಿ ಅರಿವು ಮೂಡಿಸಲು ಮ್ಯಾರಥಾನ್ ಏರ್ಪಡಿಸಲಾಗಿದೆ ಎಂದು ತಿಳಿಸಿದರು.
ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ.ಹರೀಶ್ಬಾಬು ಮಾತನಾಡಿ, ಪ್ರತಿ ವರ್ಷದಂತೆ ಏಡ್ಸ್ ರೋಗ ತಡೆಗಟ್ಟುವ ನಿಟ್ಟಿನಲ್ಲಿ ಅರಿವು ಮುಡಿಸುವ ಸಲುವಾಗಿ ಕಾಲೇಜು ಮಕ್ಕಳಿಗೆ ಮ್ಯಾರಥಾನ್ ಹಾಗೂ ಕ್ವಿಜ್, ರಸಪ್ರಶ್ನೆ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು.
ಯುವ ಜನತೆ ಹೆಚ್.ಐ.ವಿ ಸೇರಿದಂತೆ ಹಲವು ರೀತಿಯ ದುರಭ್ಯಾಸಗಳಿಗೆ ಬಲಿಯಾಗಿ ತಮ್ಮ ಜೀವನವನ್ನು ಅಂತ್ಯ ಮಾಡಿಕೊಳ್ಳುತ್ತಿದ್ದು ಇದರಿಂದ ಸಮಾಜಿಕ ಹೊರೆ ಹೆಚ್ಚಾಗುತ್ತಿದ್ದು, ಇಂದಿನ ದಿನಗಳಲ್ಲಿ ಯುವ ಜನರು ದುರಭ್ಯಾಸಗಳಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ತಿಳಿದು, ಹೆಚ್ಚು ಜಾಗೃತರಾಬೇಕೆಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಲಜಾಕ್ಷಿ, ಪ್ರಭುಕುಮಾರ್, ಕಿರಣ್, ಎನ್.ಸಿ.ಸಿ ಘಟಕದ ವಿದ್ಯಾರ್ಥಿಗಳು ಮತ್ತಿತರರು ಉಪಸ್ಥಿತರಿದ್ದರು.
Running for the marathon competition held for college students