ಮೂಡಿಗೆರೆ: ತಂದೆಯೇ ತನ್ನ ಮಗನನ್ನು ಮಾರಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಿರುವ ಘಟನೆ ನಡೆದಿದೆ, ತಾಲೂಕಿನ ಮಾಕೋನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಂದಿರಾನಗರ ಎಂಬಲ್ಲಿ ಈ ಘಟನೆ ನಡೆದಿದೆ.
ತಂದೆ ಗೋಪಾಲಗೌಡ ತನ್ನ ಮಗ ಪ್ರಸನ್ನ(೩೮)ಎಂಬುವರನ್ನು ಮಂಗಳವಾರ ರಾತ್ರಿ ಮಾಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಿದ್ದಾನೆ ಎನ್ನಲಾಗಿದೆ.
ಇಂದಿರಾ ನಗರ ಮನೆಯಲ್ಲಿ ಒಟ್ಟಾಗಿ ವಾಸಿಸುತ್ತಿದ್ದ ತಂದೆ ಹಾಗೂ ಮಗ ನಿನ್ನೆ ರಾತ್ರಿ ಪರಸ್ಪರ ಜಗಳ ಮಾಡಿಕೊಂಡಿದ್ದು ಜಗಳ ವಿಕೋಪಕ್ಕೆ ಹೋಗಿ ಮನೆಯಲ್ಲಿದ್ದ ಹಾರೆಯಿಂದ ಮಗನ ತಲೆಗೆ ಹೊಡೆದಿದ್ದು ತೀವ್ರ ಗಾಯಗೊಂಡ ಮಗ ಪ್ರಸನ್ನ ಸ್ಥಳದಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಮೂಡಿಗೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಕೊಲೆ ಆರೋಪಿ ಗೋಪಾಲಗೌಡನನ್ನು ಬಂಧಿಸಿದ್ದಾರೆ. ಮೃತ ಪ್ರಸನ್ನ ಗೆ ವಿವಾಹವಾಗಿದ್ದು ಪತ್ನಿ ತನ್ನ ಮಕ್ಕಳೊಂದಿಗೆ ಬೇರೆಯಾಗಿ ವಾಸಿಸುತ್ತಿದ್ದರು ಎನ್ನಲಾಗಿದೆ.
ತಂದೆ ಮತ್ತು ಮಗ ಒಟ್ಟಾಗಿ ಇಂದಿರಾನಗರದ ಸೈಟ್ ಮನೆಯಲ್ಲಿ ವಾಸವಾಗಿದ್ದರು. ಪ್ರತಿದಿನ ಇಬ್ಬರು ಮದ್ಯಪಾನ ಮಾಡಿ ಗಲಾಟೆ ಮಾಡುತ್ತಿದ್ದರು. ಗಲಾಟೆ ವಿಕೋಪಕ್ಕೆ ತಿರುಗಿ ಮಗನ ಕೊಲೆಯಲ್ಲಿ ಅಂತ್ಯವಾಗಿದೆ.
Murder of father and son in Mudigere