September 10, 2024

ಗ್ಯಾರಂಟಿ ಯೋಜನೆಗಳ ನೋಂದಣಿಗೆ ತಾಲ್ಲೂಕು ಪಂಚಾಯಿತಿಯಲ್ಲಿ ಪ್ರತೇಕ ಕಚೇರಿ ಆರಂಭ

0
ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರಿಗೆ ಸಮವಸ್ತ್ರ ವಿತರಣೆ

ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರಿಗೆ ಸಮವಸ್ತ್ರ ವಿತರಣೆ

ಚಿಕ್ಕಮಗಳೂರು:  ಸರ್ಕಾರದ ಜನಪರ ಯೋಜನೆಗಳು ಬಡಜನರಿಗೆ ತಲುಪಬೇಕೆಂಬ ದೃಷ್ಟಿಯಿಂದ ತಾಲ್ಲೂಕು ಪಂಚಾಯಿತಿ ಆವರಣದಲ್ಲಿ ಪ್ರತ್ಯೇಕ ಕಚೇರಿ ತೆರೆದು ಗ್ಯಾರಂಟಿ ಯೋಜನೆಗಳ ನೋಂದಣಿಗೆ ಕ್ರಮ ವಹಿಸಲಾಗುವುದೆಂದು ಶಾಸಕ ಹೆಚ್.ಡಿ ತಮ್ಮಯ್ಯ ತಿಳಿಸಿದರು.

ಅವರು ಇಂದು ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಲ್ಲೂಕು ಆಡಳಿತ, ತಾ.ಪಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಶಿಶು ಅಭಿವೃದ್ಧಿ ಯೋಜನೆ ಇವರುಗಳ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾಗಿದ್ದ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರಿಗೆ ಸಮವಸ್ತ್ರ ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಹಲವಾರು ಬೇಡಿಕೆಗಳನ್ನು ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಈಡೇರಿಸಲು ಸರ್ಕಾರದ ಮಟ್ಟದಲ್ಲಿ ಒತ್ತಡ ತಂದು ಈಡೇರಿಸುವುದಾಗಿ ಭರವಸೆ ನೀಡಿದರು.

ಸರ್ಕಾರ ಅಂಗನವಾಡಿ ಉದ್ಯೋಗಿಗಳ ಪರವಾಗಿ ಹಲವಾರು ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದು ನಿಮ್ಮ ಕೆಲವು ವರ್ಷಗಳ ಬೇಡಿಕೆಗಳಲ್ಲಿ ಒಂದಾದ ನಿವೃತ್ತಿಯಾದ ಕಾರ್ಯಕರ್ತೆಯರಿಗೆ ಗ್ರ್ಯಾಚುಟಿಯನ್ನು( ಉಪಧನ) ೨೦೨೨-೨೩ ನೇ ಸಾಲಿನಿಂದ ನಿವೃತ್ತಿಯಾಗುವ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ನೀಡಲು ಮುಂದಾಗಿದೆ ಎಂದರು.

ಅಂಗನವಾಡಿ ಉದ್ಯೋಗಿಗಳ ಸೇವಾ ಭದ್ರತೆ ಕುರಿತು ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆಯುತ್ತಿದೆ. ಜೊತೆಗೆ ಅಕ್ಷರ ದಾಸೋಹ ಕಾರ್ಯಕರ್ತೆಯರಿಗೂ ನಿವೃತ್ತಿ ವೇತನ ನೀಡಲು ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.

ಸುಮಾರು ೨೨ ಲಕ್ಷ ರೂ ವೆಚ್ಚದಲ್ಲಿ ೨೨ ದಿವ್ಯಾಂಗ ಚೇತನರಿಗೆ ದ್ವಿಚಕ್ರ ವಾಹನ ಹಾಗೂ ೭೬ ಸಾವಿರ ರೂ ವೆಚ್ಚದಲ್ಲಿ ಬ್ಯಾಟರಿ ಚಾಲಿತ ವೀಲ್ ಚೇರನ್ನು ಇದೇ ಸಂದರ್ಭದಲ್ಲಿ ವಿತರಣೆ ಮಾಡಿದ ಶಾಸಕರು ಅಂಗನವಾಡಿ ಕಾರ್ಯಕರ್ತರು ಮತ್ತು ಸಹಾಯಕಿಯರಿಗೆ ಸಮವಸ್ತ್ರ ವಿತರಣೆ ಮಾಡುವ ಮೂಲಕ ಸರ್ಕಾರ ಮಹಿಳೆಯರ ಆರ್ಥಿಕ ಸಬಲೀಕರಣದ ಉದ್ದೇಶ ಹೊಂದಿದೆ ಎಂದರು.

ಕಳೆದ ೨ ತಿಂಗಳಿಂದ ತಾಂತ್ರಿಕ ತೊಂದರೆಯಿಂದಾಗಿ ಗೃಹಲಕ್ಷ್ಮಿ ಹಣ ಬಂದಿರುವುದಿಲ್ಲ, ಈ ಬಗ್ಗೆ ಪರಿಶೀಲಿಸಲಾಗುತ್ತಿದೆ. ಈಗಾಗಲೇ ಕೆಲವರಿಗೆ ಜಿಬಿಟಿ ಮೂಲಕ ಫಲಾನುಭವಿ ಖಾತೆಗೆ ಹಣ ರವಾನಿಸಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿ ಮಹಾಂತೇಶ್, ತಾಲ್ಲೂಕು ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ತಾರಾನಾಥ್, ಕೆಡಿಪಿ ಸದಸ್ಯ ಸಂತೋಷ್, ಶಿಶು ಅಭಿವೃದ್ಧಿ ಯೋಜನಾಧಿಕಾರಿ ರಂಗನಾಥ್, ಜಿಲ್ಲಾ ವಿಕಲಚೇತನ ಕಲ್ಯಾಣಾಧಿಕಾರಿ ಪೃಥ್ವಿ, ಗ್ರಾ.ಪಂ ಸದಸ್ಯ ಹೆಚ್.ಪಿ ಮಂಜೇಗೌಡ, ಹಿರೇಗೌಜ ಶಿವು, ಬಿಳೆಕಲ್ಲಳ್ಳಿ ಪುಟ್ಟೇಗೌಡ ಮತ್ತಿತರರು ಉಪಸ್ಥಿತರಿದ್ದರು.

Distribution of uniforms to Anganwadi workers and helpers

About Author

Leave a Reply

Your email address will not be published. Required fields are marked *