ಚಿಕ್ಕಮಗಳೂರು: ಮಲ್ಲೇನಹಳ್ಳಿ ಬಳಿ ಬುಧವಾರ ಸಂಜೆ ಸಂಭವಿಸಿದ ಅಪಘಾತದಲ್ಲಿ ಓರ್ವ ಮೃತಪಟ್ಟಿರುವ ಘಟನೆ ನಡೆದಿದೆ.
ಕೆ.ಎಸ್.ಆರ್.ಟಿ.ಸಿ ಬಸ್ ಮತ್ತು ಸರಕು ಸಾಗಣೆ ವಾಹನದ ಮಧ್ಯೆ ಅಪಘಾತ ಸಂಭವಿಸಿದ್ದು ನಗರದ ಆದರ್ಶನಗರದ ಮುಜಾಮಿಲ್ ಭಾಷ(೨೨) ಮೃತಪಟ್ಟರೆ, ಇನ್ನೊಬ್ಬನ ಸ್ಥಿತಿ ಗಂಭೀರವಾಗಿದೆ.
ಚಿನ್ನಮಕ್ಕಿ ಸಮೀಪ ತರೀಕೆರೆ ಮಾರ್ಗವಾಗಿ ಸಂಚರಿಸುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ಸಿಗೆ ಚಿಕ್ಕಮಗಳೂರು ಕಡೆಗೆ ವೇಗವಾಗಿ ಬರುತ್ತಿದ್ದ ಟಾಟಾ ಎಸ್ ಡಿಕ್ಕಿ ಹೊಡೆದಿದ್ದು ಚಾಲಕ ಮರಣ ಹೊಂದಿದ್ದಾನೆ.
ಮತ್ತೊಬ್ಬ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾನೆ. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
An accident between a KSRTC bus and a freight vehicle near Mallenahalli