ಚಿಕ್ಕಮಗಳೂರು: ಪಶ್ಚಿಮ ಬಂಗಾಳದಲ್ಲಿ ವೈದ್ಯಯ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿರುವ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿ ಬಿಜೆಪಿ ಜಿಲ್ಲಾ ಮಹಿಳಾ ಘಟಕದಿಂದ ಶನಿವಾರ ರಾತ್ರಿ ಬಿಜೆಪಿ ಕಚೇರಿಯಿಂದ ಅಜಾದ್ ಪಾರ್ಕ್ ಸರ್ಕಲ್ ವರೆಗೆ ಕ್ಯಾಂಡಲ್ ಹಿಡಿದು ಮೌನ ಮೆರವಣಿಗೆ ನಡೆಸಲಾಯಿತು.
ಆಜಾದ್ ಪಾರ್ಕ್ ವೃತದಲ್ಲಿ ಮಾತನಾಡಿದ ಬಿಜೆಪಿ ಮಹಿಳಾ ಘಟಕದ ಜಿಲ್ಲಾಧ್ಯಕ್ಷ ಜಂಸೆತಾ ಅನಿಲ್ ಕುಮಾರ್, ಪಶ್ಚಿಮ ಬಂಗಾಳದಲ್ಲಿ ಪದೇ ಪದೇ ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣಗಳು ನಡೆಯುತ್ತಲೇ ಇವೆ. ಇದನ್ನು ಗಮನಿಸಿದಾಗ ಪಶ್ಚಿಮ ಬಂಗಾಳದಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲದ ವಾತಾವರಣ ನಿರ್ಮಾಣವಾಗಿದೆಯೇ ಎಂಬ ಆತಂಕ ಆರಂಭಗೊಂಡಿದೆ. ಅದರಲ್ಲೂ ಕಳೆದ ಮೂರು ನಾಲ್ಕು ತಿಂಗಳಿನಿಂದ ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣಗಳು ಗಣನೀಯವಾಗಿ ಹೆಚ್ಚಿವೆ ಎಂದು ದೂರಿದರು.
ಪಶ್ಚಿಮ ಬಂಗಾಳದಲ್ಲಿ ವೈದ್ಯರಿಗೆ ಆಸ್ಪತ್ರೆಯಲ್ಲಿಯೇ ರಕ್ಷಣೆ ಇಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಿರುವಾಗ ರೋಗಿಗಳ ಸ್ಥಿತಿ ಏನಾಗಬಹುದು. ತಾಯಿ, ಪತ್ನಿ, ಮಗಳಾಗಿ ಸಮಾಜದಲ್ಲಿ ಮಹತ್ವದ ಪಾತ್ರ ವಹಿಸುವ ಹೆಣ್ಣಿನ ಮೇಲೆ ದೌರ್ಜನ್ಯ ಹೆಚ್ಚಾಗಲಾರಂಭಿಸಿದೆ.
ಇದರಿಂದ ಮುಂದೆ ಹೆಣ್ಣು ಮಕ್ಕಳ ಭವಿಷ್ಯ ಏನು ಎಂಬುದು ಪಾಲಕರಿಗೆ ಆತಂಕವನ್ನು ತಂದೊಡ್ಡಿದೆ ಎಂದು ಬೇಸರ ವ್ಯಕ್ತಪಡಿಸಿದರು ಕ್ಯಾಂಡಲ್ ಮಾರ್ನಲ್ಲಿ ಪ್ರಮುಖರಾದ ಚೈತ್ರ ಗೌಡ, ವೀಣಾ ಸಚಿನ್ ಮತ್ತಿತರರಿದ್ದರು.
Candle march by BJP to condemn the rape of a doctor