ಚಿಕ್ಕಮಗಳೂರು: ಜಿಲ್ಲಾ ಛಾಯಾಗ್ರಾಹಕರ ಸಂಘದಿಂದ ೧೮೫ ನೇ ವಿಶ್ವ ಛಾಯಾಗ್ರಹಣ ದಿನಾಚರಣೆ ಹಿನ್ನೆಲೆಯಲ್ಲಿ ಸೆ.೧ ರಂದು ಕಾಫಿ ನಾಡು ಛಾಯಾಗ್ರಾಹಕರ ಕಲರವ ಛಾಯಾ ಸಮ್ಮಿಲನ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಬಿ.ಕೆ.ಜಯಚಂದ್ರ ಹೇಳಿದರು.
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನಗರದ ಕೆಇಬಿ ಸಭಾ ಭವನದಲ್ಲಿ ಬೆಳಗ್ಗೆ ೧೦ ರಿಂದ ಸಂಜೆ ೫ ರವರೆಗೆ ಕಾರ್ಯಕ್ರಮ ನಡೆಯಲಿದೆ. ಸಂಸದ ಕೋಟಾಶ್ರೀನಿವಾಸ ಪೂಜಾರಿ ಕಾರ್ಯಕ್ರಮ ಉದ್ಘಾಟಿಸಲಿದ್ದು, ಶಾಸಕ ಎಚ್.ಡಿ.ತಮ್ಮಯ್ಯ ಛಾಯಾಮೇಳ ಉದ್ಘಾಟಿಸಲಿದ್ದಾರೆ.
ಛಾಯಾಗ್ರಾಹಕರ ಸಂಘದ ರಾಜ್ಯ ಅಧ್ಯಕ್ಷ ನಾಗೇಶ್, ವಿಧಾನಪರಿಷತ್ ಸದಸ್ಯರಾದ ಸಿ.ಟಿ.ರವಿ, ಎಸ್.ಎಲ್.ಬೋಜೇಗೌಡ, ಸಿಡಿಎ ಅಧ್ಯಕ್ಷನಯಾಜ್ ಅಹ್ಮದ್, ನಗರಸಭೆ ಅಧ್ಯಕ್ಷೆ ಸುಜಾತಶಿವಕುಮಾರ್, ಹಿರೇಮಗಳೂರು ಕಣ್ಣನ್, ಸಮಾಜಸೇವಕಿ ಜುಬೇದಾ ಮತ್ತಿತರೆ ಗಣ್ಯರು ಭಾಗವಹಿಸಲಿದ್ದು ಅಧ್ಯಕ್ಷ ಬಿ.ಕೆ.ಜಯಚಂದ್ರ ಆದ ನಾನು ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದೇನೆ ಎಂದರು.
ಮಧ್ಯಾಹ್ನ ನಡೆಯುವ ಸಮಾರೋಪ ಸಮಾರಂಭದಲ್ಲಿ ಜಿಲ್ಲೆಯ ೯ ತಾಲೂಕುಗಳ ತಾಲೂಕು ಛಾಯಾಗ್ರಾಹಕರ ಸಂಘದ ಅಧ್ಯಕ್ಷರು ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಮಾಜಿ ಅಧ್ಯಕ್ಷರಿಗೆ ಸನ್ಮಾನಿಸಲಾಗುವುದು.
ಸ್ಥಾಪನ ಸಮಿತಿಗೆ ಗೌರವ ನೀಡಲಾಗುವುದು. ಛಾಯಾಮೇಳದ ಮಳಿಗೆ ಅನಾವರಣ ಹಾಗೂ ಛಾಯಾಚಿತ್ರದ ಪ್ರದರ್ಶನ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಹೇಳಿದರು.
ಸಂಘದ ಖಜಾಂಚಿ ಸತ್ಯನಾರಾಯಣ ಶೆಟ್ಟಿ, ತಾಲೂಕು ಅಧ್ಯಕ್ಷ ಸುನಿಲ್ಕುಮಾರ್, ಜಿಲ್ಲಾಪ್ರಧಾನ ಕಾರ್ಯದರ್ಶಿ ರೇಣುಕಪ್ಪ ಮತ್ತಿತರರು ಗೋಷ್ಠಿಯಲ್ಲಿದ್ದರು.
September 1 Photographic conference at KEB Bhawan in the city