ಚಿಕ್ಕಮಗಳೂರು: ದೆಹಲಿಯ ಫುಡ್ ಕಾರ್ಪೋರೇಷನ್ ಆಫ್ ಇಂಡಿಯಾಗೆ ನನ್ನನ್ನು ಕರ್ನಾಟಕ ರಾಜ್ಯದಿಂದ ಸಲಹಾ ಸಮಿತಿ ಸದಸ್ಯರನ್ನಾಗಿ ನೇಮಕಮಾಡಲಾಗಿದೆ ಎಂದು ಬಿಜೆಪಿ ರಾಜ್ಯ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಸುನಿತಾಜಗದೀಶ್ ಹೇಳಿದರು.
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಡೂರು ತಾಲೂಕಿನ ಹಿರೇನೆಲ್ಲೂರು ಗ್ರಾಮದ ರೈತ ಕುಟುಂಬದಿಂದ ಬಂದಿರುವ ನಾನು ಕಳೆದ ೨೩ ವರ್ಷದಿಂದ ಖಾಸಗಿ ವಿದ್ಯಾಸಂಸ್ಥೆ ನಡೆಸುತ್ತಾ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುತ್ತಿದ್ದೇನೆ ಎಂದರು.
ಗ್ರಾಮ ಪಂಚಾಯಿತಿ, ಎಪಿಎಂಸಿ ಸದಸ್ಯೆಯಾಗಿ, ಸುಗ್ರಾಮ ಗ್ರಾಮಪಂಚಾಯಿತಿ ಚುನಾಯಿತ ಮಹಿಳಾ ಪ್ರತಿನಿಗಳ ಸಂಘದ ರಾಜ್ಯ ಕಾರ್ಯದರ್ಶಿಯಾಗಿ ಮತ್ತಿತರೆ ಸಂಘಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಿದ್ದೇನೆ. ಸಾಕಷ್ಟು ಜನಪರ ಚಳವಳಿಯಲ್ಲಿ ಭಾಗವಹಿಸಿದ್ದೇನೆ ಮಾಹಿತಿಕಾರ್ಯಾಗಾರಗಳನ್ನು ನಡೆಸಿದ್ದೇನೆ ಎಂದು ಮಾಹಿತಿ ನೀಡಿದರು.
ರಾಜಕೀಯದಲ್ಲಿ ಬಿಜೆಪಿ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ, ರಾಜ್ಯ ಕಾರ್ಯಕಾರಿಣಿ ಸದಸ್ಯೆಯಾಗಿ, ರಾಜ್ಯ ಉಪಾಧ್ಯಕ್ಷೆಯಾಗಿ ಕಾರ್ಯನಿರ್ವಹಿಸಿದ್ದೇನೆ. ನನ್ನ ಸಂಘಟನಾ ಕಾರ್ಯ ಮೆಚ್ಚಿ ಪಕ್ಷ ಈ ಜವಾಬ್ದಾರಿಗಳನ್ನು ನೀಡಿರುವುದು ಹೆಮ್ಮೆಯ ವಿಚಾರವಾಗಿದೆ ಎಂದು ಹೇಳಿದರು.
ಬಿಜೆಪಿ ಮುಖಂಡರಾದ ಸುವರ್ಣಕೇಶವಮೂರ್ತಿ, ಪುಷ್ಪಾರಾಜೇಂದ್ರ, ಕವಿತಾ ಮತ್ತಿರರಿದ್ದರು.
Sunita appointed to Food Corporation of India