ALSO FEATURED IN

ವಿದ್ಯಾರ್ಥಿಗಳು ಸದಾ ಕ್ರಿಯಾಶೀಲತೆಯಾಗಿರಲು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಬೇಕು

Spread the love

ಚಿಕ್ಕಮಗಳೂರು: ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಜೊತೆಗೆ ವಿವಿಧ ಕ್ರೀಡೆ ಮತ್ತು ಸ್ಪರ್ಧೆಗಳಲ್ಲಿ ಭಾಗವಹಿಸುವುದರಿಂದ ಹೆಚ್ಚು ಕ್ರಿಯಾಶೀಲರಾಗಿ ಇರುತ್ತಾರೆಂದು ಮುನಿಶ್ರೀ ಮಹೋಜಿತ್ ಕುಮಾರ್‌ಜಿ ತಿಳಿಸಿದರು.

ನಗರದ ತೆರಾಪಂಥ್ ಭವನದಲ್ಲಿ ಅಣುವ್ರತ್ ಸಮಿತಿ ವತಿಯಿಂದ ಏರ್ಪಡಿಸಲಾಗಿದ್ದ ಅಣುವ್ರತ್ ಕ್ರಿಯೋಟಿವಿಟಿ ಸ್ಪರ್ಧೆಯಲ್ಲಿ ವಿಜೇತರಾದ ಶಾಲಾ ಮಕ್ಕಳಿಗೆ ಬಹುಮಾನ ವಿತರಿಸಿ ಮಾತನಾಡಿ ಆಧುನಿಕ ಯುಗದಲ್ಲಿ ಎಲ್ಲಾ ಕ್ಷೇತ್ರದಲ್ಲಿಯೂ ಸ್ಪರ್ಧೆ ಏರ್ಪಟ್ಟಿದೆ, ವಿದ್ಯಾರ್ಥಿಗಳು ತಮ್ಮ ಜೀವನದ ಗುರಿಯನ್ನಿಟ್ಟುಕೊಂಡು ಸಾಧನೆ ಮಾಡಬೇಕೆಂದು ತಿಳಿಸಿದರು.

ವಿದ್ಯಾರ್ಥಿಗಳಿಗೆ ಸಾಧನೆ ಮಾಡಲು ಕ್ರೀಡೆ, ಸಾಹಿತ್ಯ ಮತ್ತು ಸಂಗೀತ ಕ್ಷೇತ್ರದಲ್ಲಿ ಹಲವು ಅವಕಾಶಗಳಿವೆ, ಗುರುಗಳ ಮಾರ್ಗದರ್ಶನದೊಂದಿಗೆ ತಮ್ಮ ಜೀವನದ ಗುರಿ ಮುಟ್ಟಿ, ಇತರರಿಗೆ ಮಾರ್ಗದರ್ಶಕರಾಗಬೇಕೆಂದು ತಿಳಿಸಿದರು.

ಅಣುವ್ರತ್ ಸಮಿತಿಯವರು ಸಮಾಜ ಸೇವೆ ಕೆಲಸಗಳ ಜೊತೆಗೆ ನಗರದ ವಿವಿಧ ಶಾಲಾ ಮಕ್ಕಳಿಗೆ ಪ್ರಬಂಧ, ಚಿತ್ರ ಕಲೆ, ಸಂಗೀತ, ಭಾಷಣ ಸ್ಪರ್ಧೆ ಏರ್ಪಡಿಸಿ, ಮಕ್ಕಳಲ್ಲಿರುವ ಪ್ರತಿಭೆಯನ್ನು ಅನಾವರಣ ಮಾಡಲು ಉತ್ತಮ ಅವಕಾಶ ಕಲ್ಪಿಸಿಕೊಟ್ಟಿದ್ದಾರೆ ಎಂದರು.

ಅಣುವ್ರತ್ ಕ್ರಿಯೋಟಿವಿಟಿ ಸ್ಪರ್ಧೆಯ ಕರ್ನಾಟಕ ರಾಜ್ಯ ಪ್ರಭಾರಿಗಳಾದ ಎಸ್.ಎಂ ಗೌತಮ್ ಆಚಾ ಮಾತನಾಡಿ ಅಣುವ್ರತ್ ಸಮಿತಿ ವತಿಯಿಂದ ಎಲ್ಲಾ ಜಿಲ್ಲೆಗಳಲ್ಲಿಯೂ ಶಾಲಾ ಮಕ್ಕಳಿಗಾಗಿ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿ ವಿಜೇತರಾದ ಮಕ್ಕಳಿಗೆ ರಾಜ್ಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಅವಕಾಶ ಮಾಡಿಕೊಡಲಾಗುವುದು ಎಂದರು.

ತೇರಾಪಂಥ್ ಸಭಾದ ಅಧ್ಯಕ್ಷ ಮಹೇಂದ್ರ ಜಿ ದೋಷಿ ಮಾತನಾಡಿ, ದಯೆ, ಕರುಣೆಯಿಂದ ಜೀವನ ಮಾಡುವುದರ ಜೊತೆಗೆ ಪ್ರಾಣಿವಧೆಯನ್ನು ವಿರೋಧಿಸಿ ಅಹಿಂಸೆಯನ್ನು ತೊಡೆದುಹಾಕುವುದೇ ಜೈನ್ ಧರ್ಮದ ಉದ್ದೇಶ ಎಂದು ಹೇಳಿದರು.

ಅಣುವ್ರತ್ ಸಮಿತಿ ಅಧ್ಯಕ್ಷರಾದ ಮಂಜುಬಾಯಿ ಬನ್ಸಾಲಿ ಮಾತನಾಡಿ ನಮ್ಮ ಸಮಾಜದವರು ಸಮಾಜಸೇವೆ ಕೆಲಸಗಳ ಮೂಲಕ ಗುರುತಿಸಿಕೊಂಡಿದ್ದೇವೆ, ನಮ್ಮ ಗುರುಗಳ ಮಾರ್ಗದರ್ಶನದಂತೆ ಸಮಾಜ ಸೇವೆ ಕೆಲಸಗಳನ್ನು ಮಾಡುವುದರ ಜೊತೆಗೆ ಶಾಲಾ ಮಕ್ಕಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಿಂದ ವಿವಿಧ ಸ್ಪರ್ಧೆಗಳನ್ನು ಆಯೋಜನೆ ಮಾಡಲಾಗಿದೆ, ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಯಲ್ಲಿ ಭಾಗವಹಿಸಿ ಉತ್ತಮ ಪ್ರದರ್ಶನ ನೀಡಿದ್ದಾರೆ ಎಂದರು.

ಪ್ರಜಾಪಿತ ಬ್ರಹ್ಮಾಕುಮಾರೀಸ್‌ನ ಸಂಚಾಲಕಿ ಭಾಗ್ಯಕ್ಕ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿ, ಸಾಹಸ-ಸಾಧನೆ ಇದ್ದರೆ ಪರಮಾತ್ಮನ ಅಶೀರ್ವಾದ ಇರುತ್ತದೆ, ಈ ನಿಟ್ಟಿನಲ್ಲಿ ಮಕ್ಕಳು ಸಾಧನೆ ಮಾಡುವುದು ಅಗತ್ಯ ಎಂದು ತಿಳಿಸಿದರು.

ಒಳ್ಳೆಯ ಆಚಾರ-ವಿಚಾರಗಳು ಕೇಳುವುದಷ್ಟಕ್ಕೇ ಸೀಮಿತವಾಗದೇ ಇವುಗಳನ್ನು ತಮ್ಮ ಜೀವನಕ್ಕೆ ಅಳವಡಿಸಿಕೊಂಡಾಗ ಮೌಲ್ಯ ಹೆಚ್ಚಾಗುತ್ತದೆ ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಮುನಿಶ್ರೀಗಳಾದ ಜಯೇಶ್ ಮುನಿ, ಭವ್ಯ ಮುನಿ, ಸಂಯೋಜಕರಾದ ಪುಷ್ವರಾಜ್ ಗಾಧಿಯಾ, ತೆರಾಪಂಥ್ ಟ್ರಸ್ಟ್ ಅಧ್ಯಕ್ಷ ಅಶೋಕ್‌ಜೀ ದೋಸಿ, ಮಹಾ ಸಭಾ ಕಾರ್ಯಕಾರಿಣಿ ಸದಸ್ಯ ಮಾಣಿಕ್ ಚಂದ್ ಗಾಧಿಯಾ, ಭರತ್ ಬರ್‍ಲೋಟಾ, ಸಜನ್ ರಾಜ್ ಪಿರಗಲ್, ಅಣುವ್ರತ್ ಸಮಿತಿಯ ಮಾಜಿ ಅಧ್ಯಕ್ಷ ಲಾಲ್ ಚಂದ್‌ಜೀ ಬನ್ಸಾಲಿ, ಮಹಿಳಾ ಮಂಡಲ ಅಧ್ಯಕ್ಷೆ ಗುಣವತಿನಹರ್, ಜಯೆಶ್ ಗಾಧಿಯಾ, ರಾಕೇಶ್ ಕವಾಡಿಯಾ, ಕಿಶೋರ್ ಭೋತ್ರ, ಚಂದ್ರಗಾಧಿಯಾ, ಕಿಶೋರ್ ಆಚಾ, ನಗರಸಭೆ ಸದಸ್ಯ ವಿಫುಲ್‌ಕುಮಾರ್ ಜೈನ್ ಉಪಸ್ಥಿತರಿದ್ದರು

Anukvrat Creativity Competition at Terapanth Bhavan in the city

Facebook
X
WhatsApp
Telegram
Spread the love

ಚಿಕ್ಕಮಗಳೂರು: ಅಜ್ಞಾನ ಅಹಂಕಾರ ಅಂಧಕಾರ ಅಳಿಸಿ ಸುಜ್ಞಾನ ಜ್ಯೋತಿಯಾಗಿ ಬಾಳು ಬೆಳಗಿಸುವಾತನೇ ಗುರು ಎಂದು ಶಾರದ ಪೈ ಕಲ್ಯಾಣ ಮಂಟಪದ…

Spread the love

ಚಿಕ್ಕಮಗಳೂರು: ದುಡಿಮೆಯೇ ಬಡತನ ಅಳಿಸುವ ಸಾಧನ. ಕೂಡಿ ಬಾಳಬೇಕು, ಒಟ್ಟಾಗಿ ದುಡಿದಾಗ ಮಾತ್ರ ಬಡತನ ನಿವಾರಣೆ ಮಾಡಲು ಸಾಧ್ಯ ಎಂದು…

Spread the love

ಚಿಕ್ಕಮಗಳೂರು: ಅಜ್ಞಾನ ಅಹಂಕಾರ ಅಂಧಕಾರ ಅಳಿಸಿ ಸುಜ್ಞಾನ ಜ್ಯೋತಿಯಾಗಿ ಬಾಳು ಬೆಳಗಿಸುವಾತನೇ ಗುರು ಎಂದು ಶಾರದ ಪೈ ಕಲ್ಯಾಣ ಮಂಟಪದ…

Spread the love

ಚಿಕ್ಕಮಗಳೂರು: ದುಡಿಮೆಯೇ ಬಡತನ ಅಳಿಸುವ ಸಾಧನ. ಕೂಡಿ ಬಾಳಬೇಕು, ಒಟ್ಟಾಗಿ ದುಡಿದಾಗ ಮಾತ್ರ ಬಡತನ ನಿವಾರಣೆ ಮಾಡಲು ಸಾಧ್ಯ ಎಂದು…

[t4b-ticker]
Exit mobile version