ALSO FEATURED IN

ಅಸಂಘಟಿತ ವಲಯದ ಕಾರ್ಯನಿರ್ವಹಿಸುವ ಕಾರ್ಮಿಕರಿಗೆ ಸರ್ಕಾರದ ಯೋಜನೆಗಳ ಅರಿವು ಮೂಡಿಸಿ

Spread the love

ಚಿಕ್ಕಮಗಳೂರು:  ಅಸಂಘಟಿತ ವಲಯದಲ್ಲಿ ಕಾರ್ಯನಿರ್ವಹಿಸುವ ಕಾರ್ಮಿಕರಿಗೆ ಸರ್ಕಾರದ ಯೋಜನೆ ಹಾಗೂ ಕಾನೂನಾತ್ಮಕ ಸಾಮಾಜಿಕ ಭದ್ರತೆಗಳ ಕುರಿತು ಅರಿವು ಮೂಡಿಸಿ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ವಿ. ಹನುಮಂತಪ್ಪ ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಕಾರ್ಖಾನೆಗಳು, ಬಾಯ್ಲರ್‌ಗಳು ಕೈಗಾರಿಕಾ ಸುರಕ್ಷತೆ ಮತ್ತು ಸ್ವಾಸ್ಥ್ಯ ಇಲಾಖೆ, ಕಾರ್ಮಿಕರ ರಾಜ್ಯ ವಿಮಾ ಯೋಜನೆ ವೈದ್ಯಕೀಯ ಸೇವೆ, ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ, ಚಿಕ್ಕಮಗಳೂರು ಹಾಗೂ ವಿವಿಧ ಇಲಾಖೆಗಳ ವತಿಯಿಂದ ಇಂದು ನಗರದ ಟಿಎಂಎಸ್ ಶಾಲೆ ಆವರಣದ ರೋಟರಿ ಸಭಾಂಗಣದಲ್ಲಿ ನಡೆದ ಚಿಕ್ಕಮಗಳೂರು ಜಿಲ್ಲೆಯ ಉದ್ಯೋಗದಾತರಿಗೆ ಗುತ್ತಿಗೆದಾರರಿಗೆ, ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಸಂಘಟನೆಗಳ ಪದಾಧಿಕಾರಿಗಳಿಗೆ, ಹಾಗೂ ಕಾರ್ಮಿಕರಿಗೆ ಕಾರ್ಮಿಕ ಇಲಾಖೆಯಿಂದ ಅನುಷ್ಠಾನಗೊಳಿಸುತ್ತಿರುವ ವಿವಿಧ ಕಾರ್ಮಿಕ ಕಾಯ್ದೆಗಳ ಪರಿಣಾಮಕಾರಿ ಅನುಷ್ಠಾನದ ಕುರಿತು ಆಯೋಜಿಸಿದ್ದ ಜಿಲ್ಲಾ ಮಟ್ಟದ ಕಾರ್ಯಗಾರವನ್ನು ಘಾಟಿಸಿ ಅವರು ಮಾತನಾಡಿದರು.

ದೇಶದ ಅಭಿವೃದ್ಧಿಗೆ ಕಾರ್ಮಿಕರ ಪಾತ್ರ ಮಹತ್ವವಾದ್ದು, ಸಂಘಟಿತ ವಲಯಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ರಕ್ಷಣೆ ಹಾಗೂ ಸಹಾಯ ನೀಡಿದಲ್ಲಿ ನಿರ್ಭೀತಿಯಿಂದ ಕಾರ್ಯನಿರ್ವಹಿಸಲು ಸಹಕಾರಿಯಾಗುತ್ತದೆ. ಪ್ರತಿಯೊಬ್ಬ ಕಾರ್ಮಿಕರಿಗೆ ಹೆಣ್ಣು ಗಂಡು ಎಂಬ ಭೇದ ಭಾವವಿಲ್ಲದೆ ಸಮಾನ ವೇತನ ನೀಡಿ ಪ್ರೋತ್ಸಾಹಿಸಬೇಕು ಎಂದರು.

ಕಾರ್ಮಿಕರು ಕೆಲಸ ಮಾಡುವ ಸ್ಥಳಗಳಲ್ಲಿ ವೈದ್ಯಕೀಯ ಸೌಲಭ್ಯ ಶೌಚಾಲಯ ಸೇರಿದಂತೆ ಇತರೆ ಮೂಲಭೂತ ಸೌಕರ್ಯಗಳನ್ನು ಒದಗಿಸಿ ಕೊಡಬೇಕು. ಯಾವುದೇ ಎಸ್ಟೇಟ್ ಹೋಟೆಲ್ ಕಾರ್ಖಾನೆಗಳಲ್ಲಿ ಬಾಲಕಾರ್ಮಿಕರನ್ನು ಬಳಸಿಕೊಳ್ಳಬಾರದು. ಬಾಲಕಾರ್ಮಿಕರನ್ನು ಅಪಾಯಕಾರಿ ಕೆಲಸಗಳಲ್ಲಿ ಬಳಸಿಕೊಂಡವರ ವಿರುದ್ಧ ಕಾನೂನಾತ್ಮಕ ಕ್ರಮ ಜರುಗಿಸಲಾಗುತ್ತದೆ ಎಂದ ಅವರು ಮಕ್ಕಳನ್ನು ಕೆಲಸಗಳಲ್ಲಿ ಬಳಸಿಕೊಳ್ಳದೆ ಅವರಿಗೆ ಕಡ್ಡಾಯ ಶಿಕ್ಷಣವನ್ನು ನೀಡಬೇಕು. ತಳ ಸಮುದಾಯದ ಹಿರಿಯ ನಾಗರೀಕರು, ಮಹಿಳೆಯರಿಗೆ ಕಾನೂನಿನ ಅರಿವು ಮೂಡಿಸಿ ಸರ್ಕಾರದಿಂದ ದೊರೆಯುವ ಪಿಂಚಣಿ ಸೌಲಭ್ಯ, ಕುಟುಂಬ ಪಿಂಚಣಿ ಸೌಲಭ್ಯ, ಟೋಲ್ ಕಿಟ್ ಸೌಲಭ್ಯ, ಹೆರಿಗೆ, ವೈದ್ಯಕೀಯ ಅಪಘಾತ ಪರಿಹಾರ ಸೇರಿದಂತೆ ಅನೇಕ ಸೌಲಭ್ಯಗಳ ಕುರಿತು ಮಾಹಿತಿ ನೀಡಿ ಅದರ ಸದುಪಯೋಗ ಪಡೆಸಿಕೊಂಡುವಂತೆ ತಿಳಿಸಿದರು.

ಉಪ ಪೊಲೀಸ್ ವರಿಷ್ಠಾಧಿಕಾರಿ ಶೈಲೇಂದ್ರ ಮಾತನಾಡಿ ಎಸ್ಟೇಟ್, ಹೋಟೆಲ್, ಕಾರ್ಖಾನೆ ಹಾಗೂ ಇತರೆ ಉದ್ದಿಮೆಗಳ ಮಾಲೀಕರು ಇತರ ಜಿಲ್ಲೆ ರಾಜ್ಯಗಳಿಂದ ಉದ್ಯೋಗ ಅರಸಿ ವಲಸೆ ಬರುವ ಕಾರ್ಮಿಕರ ಮಾಹಿತಿಯನ್ನು ಕಲೆ ಹಾಕಿ ಅವರ ವಿಳಾಸವನ್ನು ತಿಳಿದುಕೊಂಡು ನಂತರ ಅವರಿಗೆ ಕೆಲಸ ಕೊಡಬೇಕು. ಮಾಲೀಕರು ಯಾವುದೇ ಮಧ್ಯವರ್ತಿಗಳ ಸಹಾಯದಿಂದ ಕಾರ್ಮಿಕರನ್ನು ದುಡಿಸಿಕೊಂಡು ಕೆಲಸ ಮಾಡುವ ಸ್ಥಳಗಳಲ್ಲಿ ಆಗುವ ಅಪಘಾತ ಅವಗಡಗಳಿಗೆ ಬಲಿಯಾಗದೆ ಕಾರ್ಮಿಕರ ಭದ್ರತೆ ಹಾಗೂ ಸುರಕ್ಷತೆಯ ದೃಷ್ಟಿಯಿಂದ ಕಾರ್ಮಿಕರ ಪೂರ್ಣ ಮಾಹಿತಿಯನ್ನು ಪಡೆದು ಕಾನೂನಾತ್ಮಕ ಕ್ರಮಗಳಿಂದ ಕಾರ್ಮಿಕರೊಂದಿಗೆ ವರ್ತಿಸಿ ಎಂದರು.

ಚಿಕ್ಕಮಗಳೂರು ವಿಭಾಗದ ಸಹಾಯಕ ಕಾರ್ಮಿಕ ಆಯುಕ್ತ ಕೆ.ಎಲ್. ರವಿಕುಮಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಸ್ವತಂತ್ರ ಪೂರ್ವದಿಂದಲೂ ಕಾರ್ಮಿಕರ ಪರ ಹಲವಾರು ಕಾನೂನುಗಳನ್ನು ನಾವು ಗಮನಿಸಬಹುದು ಕನಿಷ್ಠ ವೇತನ, ವೈದ್ಯಕೀಯ ಸೌಲಭ್ಯ ಸೇರಿದಂತೆ ಅನೇಕ ಕಾನೂನಾತ್ಮಕ ಸೇವೆಗಳನ್ನು ನೀಡಲಾಗುತ್ತಿದೆ. ಕಟ್ಟಡ ಕಾರ್ಮಿಕರಿಗೆ ಹಲವಾರು ಯೋಜನೆ ಹಾಗೂ ಸಾಮಾಜಿಕ ಭದ್ರತೆಯನ್ನು ಒದಗಿಸಲಾಗುತ್ತಿದ್ದು, ಸಂಘಟಿತ ಆಗುವ ಅಸಂಘಟಿತ ಕಾರ್ಮಿಕರಿಗೆ ತಾಲೂಕು ಮಟ್ಟಗಳಲ್ಲಿ ಕಾರ್ಯಗಾರವನ್ನು ಆಯೋಜಿಸಿ ಅರಿವು ಮೂಡಿಸಲಾಗುತ್ತಿದೆ ಸರ್ಕಾರದ ಯೋಜನೆಗಳನ್ನು ಕಾರ್ಮಿಕರ ಮನೆ ಬಾಗಿಲಿಗೆ ತಲುಪಿಸುವುದು ನಮ್ಮ ಉದ್ದೇಶವಾಗಿದ್ದು ಕಾರ್ಮಿಕರು ಇದರ ಸೌಲಭ್ಯವನ್ನು ಪಡೆದುಕೊಳ್ಳಬೇಕೆಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಉಪ ಪ್ರಧಾನ ಕಾನೂನು ನೆರವು ಅಭಿಕ್ಷಕ ನಟರಾಜ್, ವಕೀಲ ಸಂಘದ ಉಪಾಧ್ಯಕ್ಷ ಶರತ್ ಚಂದ್ರ ಮುಂತಾದವರಿದ್ದರು.

District level worker from labor department for workers

Facebook
X
WhatsApp
Telegram
Spread the love

ಚಿಕ್ಕಮಗಳೂರು: ಭಕ್ತಿ, ಧಾರ್ಮಿಕತೆ, ವೈಚಾರಿಕತೆಯ ಮೌಲ್ಯಗಳನ್ನು ಜನರ ಮನಸ್ಸಿನಲ್ಲಿ ಬಿತ್ತುವ ಸಲುವಾಗಿ ಸೆ.೧ ರಂದು ಬಸವಣ್ಣನವರ ಜನ್ಮಸ್ಥಳ ಬಸವನ ಬಾಗೇವಾಡಿಯಿಂದ…

Spread the love

ಚಿಕ್ಕಮಗಳೂರು: ಹಿಂದುತ್ವವನ್ನು ಗಟ್ಟಿಗೊಳಿಸಲು ಧಾರ್ಮಿಕವಾಗಿ ಎಲ್ಲರೂ ಒಗ್ಗಟ್ಟಿನಿಂದ ಭಾಗವಹಿಸಿ ಆಚರಿಸುವುದೇ ಸಾರ್ವಜನಿಕ ಗಣೇಶೋತ್ಸವದ ಪ್ರಮುಖ ಉದ್ದೇಶ ಎಂದು ಶಾಸಕ ಹೆಚ್.ಡಿ.…

Spread the love

ಚಿಕ್ಕಮಗಳೂರು: ಭಕ್ತಿ, ಧಾರ್ಮಿಕತೆ, ವೈಚಾರಿಕತೆಯ ಮೌಲ್ಯಗಳನ್ನು ಜನರ ಮನಸ್ಸಿನಲ್ಲಿ ಬಿತ್ತುವ ಸಲುವಾಗಿ ಸೆ.೧ ರಂದು ಬಸವಣ್ಣನವರ ಜನ್ಮಸ್ಥಳ ಬಸವನ ಬಾಗೇವಾಡಿಯಿಂದ…

Spread the love

ಚಿಕ್ಕಮಗಳೂರು: ಹಿಂದುತ್ವವನ್ನು ಗಟ್ಟಿಗೊಳಿಸಲು ಧಾರ್ಮಿಕವಾಗಿ ಎಲ್ಲರೂ ಒಗ್ಗಟ್ಟಿನಿಂದ ಭಾಗವಹಿಸಿ ಆಚರಿಸುವುದೇ ಸಾರ್ವಜನಿಕ ಗಣೇಶೋತ್ಸವದ ಪ್ರಮುಖ ಉದ್ದೇಶ ಎಂದು ಶಾಸಕ ಹೆಚ್.ಡಿ.…

[t4b-ticker]
Exit mobile version