ಚಿಕ್ಕಮಗಳೂರು: ಜಿಲ್ಲಾಡಳಿತದಿಂದ ಅಕ್ಟೋಬರ್ ೦೨ ರಂದು ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹುದ್ದೂರ್ ಶಾಸ್ತ್ರೀಯವರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದೆಂದು ಚಿಕ್ಕಮಗಳೂರು ಉಪವಿಭಾಗದ ಉಪವಿಭಾಗಾಧಿಕಾರಿ ದಲ್ಜೀತ್ ಕುಮಾರ್ ತಿಳಿಸಿದರು.
ಉಪವಿಭಾಗಾಧಿಕಾರಿಗಳ ಕಛೇರಿಯಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀಯವರ ಜಯಂತಿ ಆಚರಿಸುವ ಸಂಬಂಧ ನಡೆದ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಅಕ್ಟೋಬರ್ ೨ ರಂದು ಬೆಳಿಗ್ಗೆ ೯.೦೦ ಗಂಟೆಗೆ ಜಿಲ್ಲಾಧಿಕಾರಿಗಳ ಕಛೇರಿ ಆವರಣದಲ್ಲಿರುವ ನೆನಪಿನಂಗಳದ ಗಾಂಧಿ ಪ್ರತಿಮೆ ಬಳಿ ಕಾರ್ಯಕ್ರಮ ಆಯೋಜಿಸಲಾಗುವುದು. ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹುದ್ದೂರ್ ಶಾಸ್ತ್ರೀಯವರ ಭಾವಚಿತ್ರಕ್ಕೆ ಗಣ್ಯರಿಂದ ಪುಷ್ಪಾರ್ಚನೆ, ಸರ್ವಧರ್ಮ ಪ್ರಾರ್ಥನೆ, ಗಾಂಧೀಜಿಯವರಿಗೆ ಪ್ರಿಯವಾದ ಭಜನೆಗಳು ನಡೆಯಲಿವೆ ಎಂದರು
ಮಹಾತ್ಮ ಗಾಂಧೀಜಿಯವರ ಕುರಿತು ವಿದ್ಯಾರ್ಥಿ ಹಾಗೂ ಯುವ ಜನರಲ್ಲಿ ಅವರ ಬದುಕು, ಸ್ವಾತಂತ್ರ್ಯ ಚಳುವಳಿ, ಸರಳತೆ, ಅಹಿಂಸಾ ಮಾರ್ಗ, ಅಸ್ಪೃಶ್ಯತೆ ನಿವಾರಣೆಗಾಗಿ ನಡೆಸಿದ ಪ್ರಯೋಗಗಳು ಮುಂತಾದ ವಿಚಾರಗಳ ಬಗ್ಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ/ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಬಾಪೂಜಿ ಪ್ರಬಂಧ ಸ್ಪರ್ಧೆ ಏರ್ಪಡಿಸಲಾಗಿದ್ದು, ಸ್ಪರ್ಧೆಯಲ್ಲಿ ಮೂರು ವಿಭಾಗಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನವನ್ನು ಗಣ್ಯರು ವಿತರಿಸಲಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ಎಲ್ಲಾ ಇಲಾಖೆಗಳ ಅಧಿಕಾರಿ, ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗುವಂತೆ ಅಗತ್ಯ ಕ್ರಮ ವಹಿಸುವಂತೆ ಸೂಚಿಸಿದರು.
ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ|| ರಮೇಶ್, ಚಿಕ್ಕಮಗಳೂರು ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ರವೀಶ್, ಉಪವಿಭಾಗಾಧಿಕಾರಿಗಳ ಕಛೇರಿಯ ಉಪ ತಹಸೀಲ್ದಾರ್ ಶಾರದಾ, ತಾಲ್ಲೂಕು ಕಛೇರಿಯ ಉಪ ತಹಸೀಲ್ದಾರ್ ರಾಮ್ರಾವ್ ದೇಸಾಯಿ ಮುಂತಾದವರಿದ್ದರು.
October 02 is the birth anniversary of Mahatma Gandhi and Lal Bahudur