ಚಿಕ್ಕಮಗಳೂರು: ಗ್ರಾ.ಪಂ. ಪಂಚನೌಕರರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸುವುದು ಹಾಗೂ ಆರ್.ಡಿ.ಪಿ.ಆರ್. ಕುಟುಂಬದ ವಿವಿಧ ನ್ಯಾಯಯುತ ಬೇಡಿಕೆಗಳು ಈಡೇರಿಕೆಗೆ ಆಗ್ರಹಿಸಿ ಪಂಚಾಯಿತಿ ಅಭಿವೃಧ್ದಿ ಅಧಿಕಾರಿ ಕ್ಷೇಮಾಭಿವೃಧ್ದಿ ಜಿಲ್ಲಾ ಸಂಘದಿಂದ ಸೋಮವಾರ ಜಿ.ಪಂ. ಆವರಣದಲ್ಲಿ ನೌಕರರು ಬೃಹತ್ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾಧ್ಯಕ್ಷ ಯೋಗೀಶ್ ರಾಜ್ಯ ದಲ್ಲಿ ಜನರಿಗೆ ಸ್ಥಳೀಯ ಸಂಸ್ಥೆಯಾದ ಗ್ರಾಮ ಪಂಚಾಯಿತಿಗಳು ಶೇ.೭೦ ರಷ್ಟು ಸೇವೆಗಳನ್ನು ಪ್ರಾಮಾಣಿ ಕವಾಗಿ ಒದಗಿಸುತ್ತಿದೆ ಎಂದರು.
ಈ ವ್ಯವಸ್ಥೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ಗ್ರಾ.ಪಂ. ಸದಸ್ಯರು, ಪಿಡಿಓ, ಕಾರ್ಯದರ್ಶಿ, ದ್ವಿತೀಯ ದರ್ಜೆ ಲೆಕ್ಕ ಸಹಾಯಕರು ಹಾಗೂ ಸಿಬ್ಬಂದಿಗಳು ವಿವಿಧ ಸಮಸ್ಯೆಗಳು ಎದುರಿಸುತ್ತಿದೆ. ಈ ನಡುವೆ ಎಲ್ಲಾ ಸಮಸ್ಯೆಗಳಿಗೆ ಪಿಡಿಓ ಹಾಗೂ ಸಿಬ್ಬಂದಿಗಳನ್ನು ನೇರ ಹೊಣೆಗಾರನ್ನಾಗಿಸುವ ಸರ್ಕಾರ ಮತ್ತು ಇಲಾಖೆ ಧೋರಣೆಯನ್ನು ತೀವ್ರವಾಗಿ ಖಂಡಿಸುತ್ತೇವೆ ಎಂದರು.
ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳ ಹುದ್ದೆಯನ್ನು ಗೆಜೆಟೆಡ್ ಗ್ರೂಪ್ ಬಿ ದರ್ಜೆಗೆ ಉನ್ನತೀ ಕರಿಸು ವುದು. ಜೇಷ್ಟತಾ ಪಟ್ಟಿಯನ್ನು ಕೂಡಲೇ ಅಂತಿಮಗೊಳಿಸಿ, ಬಡ್ತಿ ನೀಡಲು ಕ್ರಮ ಕೈಗೊಳ್ಳಬೇಕು. ಇತರೆ ಇಲಾಖೆಯಲ್ಲಿರುವ ಸಮಾನಾಂತರ ಹುದ್ದೆಗಳಿಗೆ ನಿಯೋಜನೆ ಮೇಲೆ ಹೋಗಲು ಒಟ್ಟು ಮಂಜೂರಾದ ಹುದ್ದೆಗಳಲ್ಲಿ ಶೇ.೨೫ ಹುದ್ದೆಗಳಿಗೆ ಅನುಮತಿ ನೀಡಬೇಕು ಎಂದರು.
ಏಳು ವರ್ಷ ಪೂರೈಸಿ ಕರ್ತವ್ಯ ನಿರ್ವಹಿಸುತ್ತಿರುವ ಪಿಡಿಓಗಳನ್ನು ಬೇರೆ ತಾಲ್ಲೂಕಿಗೆ ವರ್ಗಾವಣೆ ನಿಯಮ ಕೈಬಿಡಬೇಕು. ಜಿಲ್ಲೆಯಲ್ಲಿ ಸ್ವಹಿಚ್ಚೆ ಇಲ್ಲದೇ ಸಾರ್ವಜನಿಕ ಹಿತಾಸಕ್ತಿ ಹಿತದೃಷ್ಟಿ ತೋರದೆ ಬದ ಲಾವಣೆ ಮಾಡಬಾರದು ಮತ್ತು ವರ್ಗಾವಣೆ ನಿಯಮಗಳಲ್ಲಿ ಯಾವುದೇ ಬದಲಾವಣೆಗೆ ಮುನ್ನ ಸಂಘ ದ ಸಲಹೆಯನ್ನು ಪಡೆಯಬೇಕು ಎಂದು ಒತ್ತಾಯಿಸಿದರು.
ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಕ್ಷೇಮಾಭಿವೃದ್ಧಿ ಸಂಘದ ತಾಲ್ಲೂಕು ಅಧ್ಯಕ್ಷ ಜಗನ್ನಾಥ್ ಮಾತ ನಾಡಿ ಗ್ರಾ.ಪಂ.ಗಳು ಮೇಲ್ದರ್ಜೇಗೇರಿಸಿದ ವೇಳೆಯಲ್ಲಿ ನಗರ ಸ್ಥಳೀಯ ಸಂಸ್ಥೆಗಳಿಗೆ ಅಲ್ಲಿನ ಸರ್ಕಾರಿ ನೌಕ ರರನ್ನು ಸಾರ್ವಜನಿಕ ಹಿತದೃಷ್ಟಿಯಿಂದ ವಿಲೀನಗೊಳಿಸುವುದು ಹಾಗೂ ವಸತಿ ಇಲಾಖೆಯಲ್ಲಿ ಸಹಾಯಕ ನಿರ್ದೇಶಕರ ಹುದ್ದೆ ಸೃಜನೆ ಮಾಡಿ ಪಿಡಿಓಗಳಿಗೆ ಪದೋನ್ನತಿ ನೀಡುವ ಮೂಲಕ ಭರ್ತಿಗೊಳಿಸಬೇಕು ಎಂದು ತಿಳಿಸಿದರು.
ಗ್ರಾ.ಪಂ.ನ ಪಂಚ ನೌಕರರುಗಳಿಗೆ ವೇತನ ಶ್ರೇಣಿ ಮತ್ತು ಸೇವಾಹಿರಿತನದ ವೇತನವನ್ನು ಜಾರಿಗೊ ಳಿಸಿ ಕಾರ್ಮಿಕ ಇಲಾಖೆಯ ವೇತನವನ್ನು ಹೊರತುಪಡಿಸಿ ಗ್ರಾಮೀಣಾಭಿವೃಧ್ದಿ ಮತ್ತು ಪಂಚಾಯತ್ರಾಜ್ ಇಲಾಖೆಯಿಂದ ವೇತನ ನಿಗಧಿಪಡಿಸಿ ನೇರ ನೌಕರರ ಖಾತೆಗೆ ಪಾವತಿಸಬೇಕು ಎಂದರು
ಗ್ರಾ.ಪಂ. ಸಿಬ್ಬಂದಿಗಳಿಗೆ ಆರೋಗ್ಯವಿಮೆ ೫೦ ಸಾವಿರವಿದೆ. ಇದರಿಂದ ನೌಕರರಿಗೆ ಪ್ರಯೋಜನವಾಗು ತ್ತಿಲ್ಲ. ಹೀಗಾಗಿ ೫ ಲಕ್ಷ ಆರೋಗ್ಯವಿಮೆ ಜಾರಿಮಾಡಬೇಕು. ಕರವಸೂಲಿಗಾರರು ಮತ್ತು ಕ್ಲಕ್ ಕಂ ಡಾಟಾ ಎಂಟ್ರಿ ಆಪರೇಟರ್ ವೃಂದದಿಂದ ಸೇವೆ ಒಳಗಿನ ನೇಮಕಾತಿಗೆ ಎಸ್.ಡಿ.ಎ.ಎ. ವೃಂದಕ್ಕೆ ಪದೋನ್ನತಿ ಹೊ ಂದಲು ಶೇ.೭೫ ಹೆಚ್ಚಿಸಬೇಕು ಎಂದು ಆಗ್ರಹಿಸಿದರು.
ಗ್ರೇಡ್-೧ ಕಾರ್ಯದರ್ಶಿಗಳ ವೃಂದದ ಜೇಷ್ಟತಾ ಪಟ್ಟಿಯನ್ನು ತುರ್ತಾಗಿ ಪ್ರಕಟಣೆಗೊಳಿಸಿ ಪಿಡಿಓ ವೃಂದಕ್ಕೆ ಮುಂಬಡ್ತಿ ನೀಡುವ ಬಗ್ಗೆ ಆಯುಕ್ತರಿಗೆ ಸರ್ಕಾರದ ನಿರ್ದೇಶಕವಿದ್ದರೂ ನಿರಾಸಕ್ತಿ ವಹಿಸುತ್ತಿ ರುವುದು ಸಾವಿರಕ್ಕೂ ಅಧಿಕ ವಿವಿಧ ವೃಂದದ ನೌಕರರು ಮುಂಬಡ್ತಿಯಿಂದ ವಂಚಿತರಾಗಿದ್ದು ಕಾಲಮಿತಿ ಯೊಳಗೆ ಮುಂಬಡ್ತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಗೆ ಬೆಂಬಲಿಸಿ ಸೂಚಿಸಿದ ಮಾತನಾಡಿದ ವಿಧಾನ ಪರಿಷತ್ ಶಾಸಕ ಸಿ.ಟಿ.ರವಿ ಪಂಚನೌಕ ರರನ್ನು ಬೇಡಿಕೆಗಳನ್ನು ಈಡೇರಿಸದೇ ರಾಜ್ಯಸರ್ಕಾರ ಸತಾಯಿಸುತ್ತಿದೆ. ಪಂಚಾಯಿತಿ ವ್ಯಾಪ್ತಿಯ ನೌಕರರ ನ್ನು ಜೀತದಾಳುಗಳಂತೆ ದುಡಿಸಿಕೊಳ್ಳುತ್ತಿದ್ದು ಶೀಘ್ರದಲ್ಲೇ ಸರ್ಕಾರ ಪಂಚ ನೌಕರರ ಬೇಡಿಕೆಗೆ ಕ್ರಮ ವಹಿಸ ಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಕ್ಷೇಮಾಭೀವೃಧ್ದಿ ಸಂಘಧ ಉಪಾಧ್ಯಕ್ಷೆ ಎಂ.ಶಾಂತಿ, ಪ್ರಧಾನ ಕಾರ್ಯದರ್ಶಿ ಜಿ.ಪಿ.ರಾಜವಿಜಯನ್, ಖಜಾಂಚಿ ಹೆಚ್.ಎನ್.ಶೇಖರ್, ತಾಲ್ಲೂಕು ಉಪಾಧ್ಯಕ್ಷ ವಿಶ್ವನಾಥ್, ಪ್ರಧಾನ ಕಾರ್ಯದರ್ಶಿ ಲಕ್ಷ್ಮಣ್, ಖಜಾಂಚಿ ಸುಮಾ, ಅಜ್ಜಂಪುರ ಅಧ್ಯಕ್ಷ ಪ್ರಸನ್ನ ಕುಮಾರ್, ತರೀಕೆರೆ ಅಧ್ಯಕ್ಷ ಶಿವಮೂರ್ತಿ, ಮೂಡಿಗೆರೆ ಅಧ್ಯಕ್ಷ ಕೃಷ್ಣಪ್ಪ ನ.ರಾ.ಪುರ ಅಧ್ಯಕ್ಷ ಮನೀಶ್, ಕಡೂರು ಅಧ್ಯಕ್ಷ ಆದಿನಾಥ ಬೀಳಗಿ ಹಾಗೂ ನೌಕರರು ಉಪಸ್ಥಿತರಿದ್ದರು.
Protest demanding the fulfillment of the demands of Gram Panchayat panchanaukars