ALSO FEATURED IN

Traditional patta dolls: ಮೈಸೂರು ರಾಜ ಪರಂಪರೆಯ ಸಾಂಸ್ಕೃತಿಕಯ ಪಟ್ಟದ ಗೊಂಬೆಗಳು

Spread the love

ಚಿಕ್ಕಮಗಳೂರು: ಶರನ್ನವರಾತ್ರಿ ಅಂಗವಾಗಿ ನಗರದ ಕೋಟೆ ಬಡಾವಣೆಯ ಅಗ್ರಹಾರ ವೃತ್ತದ ಬಳಿ ಇರುವ ಪುರೋಹಿತ ಅಶ್ವಥ್ಥನಾರಾಯಣಾಚಾರ್ಯ ವಸಂತಾಚಾರ್ಯ ಜೋಶಿ ಅವರ ಮನೆಯಲ್ಲಿ ಪ್ರತಿಷ್ಠಾಪಿಸಿರುವ ಸಾಂಪ್ರದಾಯಿಕ ಪಟ್ಟದ ಗೊಂಬೆಗಳು ಮೈಸೂರು ರಾಜ ಪರಂಪರೆಯ ಸಾಂಸ್ಕೃತಿಕ ಮತ್ತು ಸಾಂಪ್ರದಾಯಿಕ ವೈಭವವನ್ನು ಅನಾವರಣಗೊಳಿಸಿವೆ.

ಕೆಂಪು ಚಂದನದ ಮರದಲ್ಲಿ ಕೆತ್ತಲಾದ ಯದುವಂಶಸ್ಥರ ಪರಂಪರೆಯ ಪಟ್ಟದ ಗೊಂಬೆಗಳು. ಮೈಸೂರು ಮಹಾರಾಜರ ದಸರಾ ದರ್ಬಾರ್. ಜಂಬೂ ಸವಾರಿ. ವಿಶ್ವ ವಿಖ್ಯಾತ ಮೈಸೂರು ಅರಮನೆ. ಯದು ವಂಶಸ್ಥರ ಸಾಂಪ್ರದಾಯಿಕ ಆಚರಣೆಗಳ ವೈಭವವನ್ನು ಪ್ರದರ್ಶಿಸುತ್ತಿದ್ದರೆ. ಇನ್ನೂ ಕೆಲವು ಗೊಂಬೆಗಳು ಶ್ರೀರಾಮಲಲ್ಲಾ. ಅಷ್ಟಲಕ್ಷ್ಮಿಯರು ಸೇರಿದಂತೆ ವಿವಿಧ ದೇವತೆಗಳ ವಿವಿಧ ಭಂಗಿಗಳನ್ನು ತೆರೆದಿಟ್ಟಿವೆ.

ಕಲಿಯುಗದ ಹೆದ್ದೈವ ಪದ್ಮಾವತಿ ಹಾಗೂ ಶ್ರೀನಿವಾಸನ ವಿವಾಹವದ ವೈಭವವನ್ನು ಸಾರುವ ಶ್ರೀನಿವಾಸ ಕಲ್ಯಾಣದ ಗೊಂಬೆಗಳು ನೋಡುಗರ ಗಮನ ಸೆಳೆಯುತ್ತಿವೆ. ವರನ ದಿಬ್ಬಣವನ್ನು ಎದುರುಗೊಳ್ಳುವುದು. ವರಪೂಜೆ. ಮಾಂಗಲ್ಯಧಾರಣೆ. ಲಾಜಾಹೋಮ. ಸಪ್ತಪದಿ ತುಳಿಯುವುದು ಸೇರಿದಂತೆ ವಿವಾಹದ ವಿಧಿ ವಿಧಾನಗಳನ್ನು ಪರಿಚಯಿಸುತ್ತಿವೆ.

ತಿರುಮಲ ತಿರುಪತಿಯ ಸಪ್ತಗಿರಿ ಬೆಟ್ಟ. ಅಲ್ಲಿನ ಪ್ರಕೃತಿ ಸೌಂದರ್ಯ. ಶ್ರೀ ವೆಂಕಟೇಶ್ವರ ದೇವಾಲಯದ ಸ್ತಬ್ದ ಚಿತ್ರ. ದೇವತೆಗಳು ಮತ್ತು ರಾಕ್ಷಸರ ನಡುವಿನ ಅಮೃತ ಮಥನದ ದೃಶ್ಯಗಳು. ಪ್ರಾಚೀನ ಕಾಲದ ಗುರುಕುಲ ಪದ್ಧತಿಯ ಗೊಂಬೆಗಳು ಗಮನ ಸೆಳೆಯುತ್ತಿವೆ. ಭಗವಾನ್ ಶ್ರೀ ಕೃಷ್ಣ ಗೋವರ್ಧನ ಗಿರಿಯನ್ನು ತನ್ನ ಬೆರಳಿನಲ್ಲಿ ಎತ್ತಿ ಹಿಡಿದು ಗೋವುಗಳು ಮತ್ತು ಗೋಪಾಲಕರನ್ನು ರಕ್ಷಿಸುವ ದೃಶ್ಯ. ಕೈಲಾಸದಲ್ಲಿ ಬ್ರಹ್ಮ. ವಿಷ್ಣು. ನಂದಿ. ಬೃಂಗಿ. ಶಿವಗಣಗಳು ಋಷಿಮುನಿಗಳ ನಡುವೆ ಶಿವ ಪಾರ್ವತಿಯ ಒಡ್ಡೋಲಗದ ದೃಶ್ಯ ಕಣ್ಮನ ಸೆಳೆಯುತ್ತಿವೆ.

ಭಗವಾನ್ ಶ್ರೀ ಕೃಷ್ಣನ ಗೀತೋಪದೇಶದ ಗೊಂಬೆಗಳು. ಮಹಾ ವಿಷ್ಣುವಿನ ದಶಾವತಾರದ ಗೊಂಬೆಗಳು. ಅಯೋಧ್ಯೆಯ ಶ್ರೀರಾಮನ ವಿಗ್ರಹ. ಕೃಷಿ ಚಟುವಟಿಕೆ. ಸಂತೆಯ ದೃಶ್ಯ. ಭಾರತೀಯ ಹಬ್ಬ ಹರಿದಿನಗಳ ಆಚರಣೆಗಳನ್ನು ತೆರೆದಿಡುವ ನೂರಾರು ಗೊಂಬೆಗಳು ನಾಡಿನ ಭವ್ಯ ಪರಂಪರೆ ಮತ್ತು ಸಂಸ್ಕೃತಿಯನ್ನು ಬಿಂಬಿಸುತ್ತಿವೆ.

ಪಟ್ಟದ ಗೊಂಬೆಗಳ ಕುರಿತು ವಿವರಿಸಿದ ಅನುರಾದಾ ಜೋಶಿ ನವರಾತ್ರಿಯ ಪಟ್ಟದ ಗೊಂಬೆಗಳು ತಮ್ಮ ತವರಿನ ಬಳುವಳಿಯಾಗಿದ್ದು. ತಮ್ಮ ತವರು ಮನೆಯ ನವರಾತ್ರಿ ಹಬ್ಬದ ಸಂಪ್ರದಾಯವನ್ನು ತಾವು ಪತಿಯ ಸಹಕಾರ ಮತ್ತು ಪ್ರೋತ್ಸಾಹದಿಂದಾಗಿ ಮುಂದುವರೆಸಿಕೊಂಡು ಬರುತ್ತಿದ್ದು. ನಮ್ಮ ಸಂಸ್ಕೃತಿ ಸಂಪ್ರದಾಯ ಆಚಾರ ವಿಚಾರಗಳನ್ನು ಮುಂದಿನ ಪೀಳಿಗೆಗೆ ಉಳಿಸುವ ಸಣ್ಣ ಪ್ರಯತ್ನ ಇದಾಗಿದೆ ಎಂದು ಹೇಳಿದರು.

ಪುರೋಹಿತ ಅಶ್ವಥ್ಥನಾರಾಯಣಚಾರ್ಯ ವಸಂತಾಚಾರ್ಯ ಜೋಶಿ ಮಾತನಾಡಿ ಆಧುನಿಕತೆಯ ಭರದಲ್ಲಿ ನಮ್ಮ ಮಕ್ಕಳು ಮತ್ತು ಯುವಜನತೆ ನಮ್ಮ ಸಂಸ್ಕೃತಿ. ಸಂಪ್ರದಾಯ. ಆಚಾರ ವಿಚಾರಗಳನ್ನು ಮರೆಯುತ್ತಿದ್ದಾರೆ. ಹಾಗಾಗಿ ಅವುಗಳನ್ನು ಇಂದಿನ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ಈ ಪಟ್ಟದ ಗೊಂಬೆಗಳನ್ನು ಪ್ರತಿಷ್ಠಾಪಿಸಲಾಗಿದೆ. ಇದರ ಜೊತೆಗೆ ಪ್ರತಿದಿನ ಸಂಜೆ ಶ್ರೀ ವೆಂಕಟೇಶ್ವರ ಮಹಾತ್ಮೆ ಪ್ರವಚನ ನಡೆಸಲಾಗುತ್ತಿದೆ ಎಂದು ತಿಳಿಸಿದರು.

Traditional patta dolls enshrined in the house of Purohita Aswaththanarayanacharya Vasanthacharya Joshi

Facebook
X
WhatsApp
Telegram
Spread the love

ಚಿಕ್ಕಮಗಳೂರು: ಬಹಳರ್ಷ ವರ್ಷಗಳ ಹಿಂದೆ ಬಯಲು ಸೀಮೆಯ ಜನರ ಜೀವನಾಡಿಯಾಗಿದ್ದು ಇದೀಗ ಜೀರ್ಣಾವಸ್ಥೆಯಲ್ಲಿರುವ ಸಖರಾಯಪಟ್ಟಣ ಸಮೀಪ ಜಾನ್ಸಾಲೆ ಗ್ರಾಮದ ಲಕ್ಸಾಗರ…

Spread the love

ಚಿಕ್ಕಮಗಳೂರು: ಮುಂದಿನ ಎರಡು ವರ್ಷದಲ್ಲಿ ಚಿಕ್ಕಮಗಳೂರು-ಹಾಸನ ರೈಲು ಸಂಚಾರ ಆರಂಭವಾಗಲಿದೆ ಎಂದು ರೈಲ್ವೇ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದರು.…

Spread the love

ಚಿಕ್ಕಮಗಳೂರು: ಬಹಳರ್ಷ ವರ್ಷಗಳ ಹಿಂದೆ ಬಯಲು ಸೀಮೆಯ ಜನರ ಜೀವನಾಡಿಯಾಗಿದ್ದು ಇದೀಗ ಜೀರ್ಣಾವಸ್ಥೆಯಲ್ಲಿರುವ ಸಖರಾಯಪಟ್ಟಣ ಸಮೀಪ ಜಾನ್ಸಾಲೆ ಗ್ರಾಮದ ಲಕ್ಸಾಗರ…

Spread the love

ಚಿಕ್ಕಮಗಳೂರು: ಮುಂದಿನ ಎರಡು ವರ್ಷದಲ್ಲಿ ಚಿಕ್ಕಮಗಳೂರು-ಹಾಸನ ರೈಲು ಸಂಚಾರ ಆರಂಭವಾಗಲಿದೆ ಎಂದು ರೈಲ್ವೇ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದರು.…

[t4b-ticker]
Exit mobile version