ALSO FEATURED IN

Taekwondo tournament: ಆ.೧೨ಕ್ಕೆ ನಗರದಲ್ಲಿ ರಾಜ್ಯಮಟ್ಟದ ಟೇಕ್ವಾಂಡೋ ಪಂದ್ಯಾವಳಿ

Spread the love

ಚಿಕ್ಕಮಗಳೂರು:  ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉಪ ನಿರ್ದೇಶಕರ ಕಛೇರಿ ಶಾಲಾ ಶಿಕ್ಷಣ ಇಲಾಖೆ (ಆಡಳಿತ), ಚಿಕ್ಕಮಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಟೇಕ್ವಾಂಡೊ ಸಂಸ್ಥೆ ಕರ್ನಾಟಕ (ರಿ.), ಚಿಕ್ಕಮಗಳೂರು ಜಿಲ್ಲಾ ಟೇಕ್ವಾಂಡೊ ಸಂಸ್ಥೆ (ರಿ.), ಆದಿಚುಂಚನಗಿರಿ ತಾಂತ್ರಿಕ ಮಹಾವಿದ್ಯಾಲಯ ಇವರುಗಳ ಸಂಯುಕ್ತಾಶ್ರಯದಲ್ಲಿ ರಾಜ್ಯಮಟ್ಟದ ಹಿರಿಯ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ಬಾಲಕ-ಬಾಲಕಿರ ೨೦೨೪-೨೫ ನೇ ಸಾಲಿನ ಟೇಕ್ವಾಂಡೋ ಪಂದ್ಯಾವಳಿಯು ಅಕ್ಟೋಬರ್ ೧೨ರಿಂದ ೧೪ರ ವರೆಗೆ ಎ ಐ ಟಿ ಕಾಲೇಜಿನ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿದೆ.

ಅಕ್ಟೋಬರ್ ೧೩ರಂದು ಬೆಳಗ್ಗೆ ೧೧ ಗಂಟೆಗೆ ನಗರದ ಎ ಐ ಟಿ ಕಾಲೇಜಿನ ಒಳಾಂಗಣ ಕ್ರೀಡಾಂಗಣದಲ್ಲಿ ಕ್ರೀಡಾಕೂಟ ಉದ್ಘಾಟನಾ ಸಮಾರಂಭ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.ಇಂಧನ ಮತ್ತು ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.

ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವ ಮಧು ಬಂಗಾರಪ್ಪ, ಕರ್ನಾಟಕ ವಿಧಾನ ಪರಿಷತ್ ಉಪ ಸಭಾಪತಿ ಎಂ.ಕೆ. ಪ್ರಾಣೇಶ್, ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮದ ಅಧ್ಯಕ್ಷರು, ಬೆಂಗಳೂರು ಹಾಗೂ ಶೃಂಗೇರಿ ವಿಧಾನಸಭಾ ಕ್ಷೇತ್ರ ಶಾಸಕ ಟಿ.ಡಿ. ರಾಜೇಗೌಡ, ಅನಿವಾಸಿ ಭಾರತೀಯ ಕೋಶ ಉಪಾಧ್ಯಕ್ಷೆ ಡಾ. ಆರತಿಕೃಷ್ಣ, ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ. ಶ್ರೀನಿವಾಸ್ ಗೌರವಾನ್ವಿತ ಉಪಸ್ಥಿತರಿರಲಿದ್ದಾರೆ, ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ಶಾಸಕ ಹೆಚ್.ಡಿ. ತಮ್ಮಯ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ, ರಾಜ್ಯಸಭೆ ಸಂಸದ ಜೈರಾಮ್ ರಮೇಶ್, ಹಾಸನ ಲೋಕಸಭಾ ಕ್ಷೇತ್ರ ಸಂಸದ ಶ್ರೇಯಸ್ ಎಂ. ಪಟೇಲ್, ವಿಧಾನ ಪರಿಷತ್ ಶಾಸಕರಾದ ಎಸ್.ಎಲ್. ಭೋಜೆಗೌಡ, ಶಾಸಕರುಗಳಾದ ಜಿ.ಹೆಚ್. ಶ್ರೀನಿವಾಸ್, ಕೆ.ಎಸ್. ಆನಂದ, ನಯನ ಮೋಟಮ್ಮ, ವಿಧಾನ ಪರಿಷತ್ ಶಾಸಕರಾದ ಸಿ.ಟಿ. ರವಿ, ವಿಧಾನ ಪರಿಷತ್ ಶಾಸಕರಾದ ಡಾ. ಧನಂಜಯ ಸರ್ಜಿ, ಭದ್ರಾ ಕಾಡಾ ಶಿವಮೊಗ್ಗ ಅಧ್ಯಕ್ಷರಾದ ಡಾ. ಅಂಶುಮಂತ್, ಕ. ರಾ. ಕೃಷಿ ಉತ್ಪನ್ನ ಸಂಸ್ಕರಣೆ ಮತ್ತು ರಫ್ತು ನಿಗಮ ಅಧ್ಯಕ್ಷರಾದ ಬಿ.ಹೆಚ್. ಹರೀಶ್, ನಗರಸಭೆ ಅಧ್ಯಕ್ಷ ಸುಜಾತ ಶಿವಕುಮಾರ್ ಮುಂತಾದವರು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

State level Taekwondo tournament in the city on August 12

Facebook
X
WhatsApp
Telegram
Spread the love

ಚಿಕ್ಕಮಗಳೂರು: ಬಹಳರ್ಷ ವರ್ಷಗಳ ಹಿಂದೆ ಬಯಲು ಸೀಮೆಯ ಜನರ ಜೀವನಾಡಿಯಾಗಿದ್ದು ಇದೀಗ ಜೀರ್ಣಾವಸ್ಥೆಯಲ್ಲಿರುವ ಸಖರಾಯಪಟ್ಟಣ ಸಮೀಪ ಜಾನ್ಸಾಲೆ ಗ್ರಾಮದ ಲಕ್ಸಾಗರ…

Spread the love

ಚಿಕ್ಕಮಗಳೂರು: ಮುಂದಿನ ಎರಡು ವರ್ಷದಲ್ಲಿ ಚಿಕ್ಕಮಗಳೂರು-ಹಾಸನ ರೈಲು ಸಂಚಾರ ಆರಂಭವಾಗಲಿದೆ ಎಂದು ರೈಲ್ವೇ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದರು.…

Spread the love

ಚಿಕ್ಕಮಗಳೂರು: ಬಹಳರ್ಷ ವರ್ಷಗಳ ಹಿಂದೆ ಬಯಲು ಸೀಮೆಯ ಜನರ ಜೀವನಾಡಿಯಾಗಿದ್ದು ಇದೀಗ ಜೀರ್ಣಾವಸ್ಥೆಯಲ್ಲಿರುವ ಸಖರಾಯಪಟ್ಟಣ ಸಮೀಪ ಜಾನ್ಸಾಲೆ ಗ್ರಾಮದ ಲಕ್ಸಾಗರ…

Spread the love

ಚಿಕ್ಕಮಗಳೂರು: ಮುಂದಿನ ಎರಡು ವರ್ಷದಲ್ಲಿ ಚಿಕ್ಕಮಗಳೂರು-ಹಾಸನ ರೈಲು ಸಂಚಾರ ಆರಂಭವಾಗಲಿದೆ ಎಂದು ರೈಲ್ವೇ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದರು.…

[t4b-ticker]
Exit mobile version