ಚಿಕ್ಕಮಗಳೂರು: ಹುಬ್ಬಳ್ಳಿ ಪ್ರಕರಣದಲ್ಲಿ ಮೊಕದಮ್ಮೆಗಳನ್ನು ಹಿಂಪಡೆಯುವ ಮೂಲಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಮುಸಲ್ಮಾನರ ಓಲೈಕೆ ಮಾಡುವ ರಾಜಕಾರಣ ಮಾಡುತ್ತಿರುವುದನ್ನು ಜಿಲ್ಲಾ ಬಿಜೆಪಿ ಖಂಡಿಸುತ್ತದೆ ಎಂದು ಜಿಲ್ಲಾ ಬಿಜೆಪಿ ವಕ್ತಾರ ಹಿರೇಮಗಳೂರು ಪುಟ್ಟಸ್ವಾಮಿ ಟೀಕಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ೨೦೨೨ ರಲ್ಲಿ ಪೋಲೀಸ್ ಠಾಣೆ ಮೇಲೆ ಕಲ್ಲು ತೂರಿ ಬೆಂಕಿ ಹಚ್ಚಿ ಸುಡುವ ಯತ್ನದೊಮದಿಗೆ ಗಲಭೆ ಸೃಷ್ಠಿಸಿದ್ದು, ದೇಶ ದ್ರೋಹಿಗಳ ವಿರುದ್ಧ ಪೋಲೀಸರು ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಂಡಿದ್ದರು. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಸದರಿ ಪ್ರಕರಣದಲ್ಲಿ ದಾಖಲಾಗಿದ್ದ ಎಲ್ಲಾ ಮೊಕದಮ್ಮೆಗಳನ್ನು ಹಿಂಪಡೆಯುವ ಮೂಲಕ ದೇಶದ್ರೋಹಿಗಳ ಪರ ಕಾಂಗ್ರೆಸ್ ಎಂಬುದನ್ನು ಸಾಬೀತುಪಡಿಸಿದ್ದಾರೆ. ಎಂದು ಅವರು ಬುಧವಾರ ನೀಡಿರುವ ಹೇಳಿಕೆಯಲ್ಲಿ ತರಾಟೆಗೆ ತೆಗೆದುಕೊಂಡಿದ್ದಾರೆ.
ಹುಬ್ಬಳ್ಳಿ ಪ್ರಕರಣದಲ್ಲಿ ಪೋಲೀಸರು ತಮ್ಮ ಕರ್ತವ್ಯವನ್ನು ಸಮರ್ತವಾಗಿ ನಿಭಾಯಿಸಿದ್ದು ಇಂದು ರಾಜ್ಯ ಸರ್ಕಾರ ತೆಗೆದುಕೊಂಡಿರುವ ತೀರ್ಮಾನವು ಪೋಲೀಸರ ಕಾರ್ಯ ದಕ್ಷತೆ ಹಾಗೂ ಮಾನಸಿಕ ಸ್ಥಿತಿಯನ್ನು ಕುಂದಿಸುವುದಾಗಿದೆ ಎಂದು ಹೇಳಿದ್ದಾರೆ.
ರಾಜ್ಯದ ಶಕ್ತಿ ಕೆಂದ್ರ ವಿಧಾನ ಸೌಧದಲ್ಲಿ ಪಾಕಿಸ್ಥಾನ್ ಜಿಂದಾಬಾದ್ ಘೋಷಣೆ, ರಾಮೇಶ್ವರ ಕೆಫೆ ಮೇಲೆ ದಾಳಿ ರಾಜ್ಯದ ವಿವಿಧ ಕಡೆಗಳಲ್ಲಿ ಗಣೇಶೋತ್ಸವ ಮೆರವಣಿಗೆಯ ಮೇಲೆ ಕಲ್ಲು ತೂರಿ ಶಾಂತಿ ಕದಡುವ ಪ್ರಕರಣ ಸೇರಿದಂತೆ ಹಲವು, ಪ್ರಕರಣಗಳಲ್ಲಿ ರಾಜ್ಯ ಸರ್ಕಾರ ನಿರ್ಧಾಕ್ಷಣ್ಯ ಕಾನೂನು ಕ್ರಮದ ಬದಲಿಗೆ ಮೃಧು ದೋರಣೆ ಅನುಸರಿಸುತ್ತಿರುವುದು ಗಮನಿಸಿದಾಗ ಕಾಂಗ್ರೆಸ್ ದೇಶದ್ರೋಹಿಗಳ ಪರ ನಿಲ್ಲುತ್ತಿದೆ ಎಂಬ ಸಂಶಯಗಳು ರಾಜ್ಯದ ಜನರನ್ನು ಬೀತಿಗೊಳ್ಳುವಂತೆ ಮಾಡಿಸಿ ಎಂದು ತಿಳಿಸಿದ್ದಾರೆ.
ಹುಬ್ಬಳ್ಳಿ ಪ್ರಕರಣದ ಮೊಕದಮ್ಮೆಯ ಹಿಂಪಡೆದ ಬೆನ್ನ ಹಿಂದೆಯೇ ಬೆಂಗಳೂರಿನ ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ ಪ್ರಕರಣದ ಎಲ್ಲಾ ಮೊಕದಮ್ಮೆ ಹಿಂಪಡೆಯಲು ರಾಜ್ಯ ಸರ್ಕಾರ ಸಿದ್ದತೆ ಮಾಡಿಕೊಂಡಿದೆ. ಎಂಬ ಮಾಹಿತಿಗಳು ಎಲ್ಲಾ ಕಡೆಗಳಲ್ಲಿ ಕೇಳಿ ಬರುತ್ತಿದ್ದುಒಂದು ಕೋಮಿಗೆ ಸೇರಿದ ವ್ಯಕ್ತಿಗಳು ಭಾಗವಹಿಸಿದ್ದ ಪ್ರಕರಣಗಳನ್ನು ಹಿಂಪಡೆಯಲು ಯತ್ನಿಸಿರುವ ರಾಜ್ಯ ಸರ್ಕಾರದ ಕ್ರಮವನ್ನು ಜಿಲ್ಲಾ ಬಿಜೆಪಿ ಖಂಡಿಸುತ್ತದೆ ಎಂದಿದ್ದಾರೆ.
ರಾಜ್ಯ ಸರ್ಕಾರ ದೇಶದ್ರೋಹಿ ಚಟುವಟಿಕೆ ನಡೆಸಿದವರ ಪ್ರಕರಣ ವಾಪಾಸ್ ಪಡೆಯಲು ಮುಂದಾಗಿರುವುದು ಮುಸಲ್ಮಾನರ ಓಲೈಕೆ ಮಾಡುವ ರಾಜಕಾರಣ ಮಾಡುತ್ತಿರುವುದು, ಸ್ಪಷ್ಟವಾಗಿ ಗೋಚರಿಸುತ್ತಿದ್ದು ಜಿಲ್ಲಾ ಬಿಜೆಪಿ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸುವುದರ ಜೊತೆಗೆ ವಿರೋಧಿಸುತ್ತದೆ ಎಂದಿರುವ ಅವರು ವಾಪಾಸ್ ಪಡೆದಿರುವ ಹುಬ್ಬಳ್ಳಿ ಪ್ರಕರಣಗಳಮೊಕದಮ್ಮೆಗಳನ್ನು ಮರು ಸ್ಥಾಪಿಸುವಂತೆ ಜಿಲ್ಲಾ ಬಿಜೆಪಿ ಆಗ್ರಹಿಸುತ್ತದೆ ಎಂದು ತಿಳಿಸಿದ್ದಾರೆ.
The Congress government in the state is a politician of Muslim appeasement