ಚಿಕ್ಕಮಗಳೂರು: ಕಾಫಿ ಬೆಳೆಗಾರರ ಭೂಮಿಯನ್ನು ರಾಷ್ಟಿçÃಕೃತ ಬ್ಯಾಂಕುಗಳು ಆನ್ಲೈನ್ ಮೂಲಕ ಹರಾಜು ಮಾಡುವ ಪ್ರಕ್ರಿಯೆಯನ್ನು ಮುಂದೂಡುವ ಕುರಿತು ಮಹತ್ವದ ನಿರ್ಧಾರವನ್ನು ಚಿಕ್ಕಮಗಳೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅಧ್ಯಕ್ಷತೆಯಲ್ಲಿ ನಡೆದ ಕಾಫಿಬೆಳೆಗಾರರ, ಜನಪ್ರತಿನಿಧಿಗಳ ಹಾಗೂ ರಾಷ್ಟಿçÃಕೃತ ಬ್ಯಾಂಕ್ ಅಧಿಕಾರಿಗಳ ಸಭೆಯಲ್ಲಿ ಕೈಗೊಳ್ಳಲಾಗಿದೆ.
\ಚಿಕ್ಕಮಗಳೂರು, ಹಾಸನ, ಸಕಲೇಶಪುರ, ಮಡಿಕೇರಿ ಮುಂತಾದ ಜಿಲ್ಲೆಗಳ ಕಾಫಿ ಬೆಳೆಗಾರರ ಸಾಲ ವಸೂಲಾತಿಗೆ ಸಂಬAಧಪಟ್ಟAತೆ ಆನ್ಲೈನ್ ಹರಾಜು ಮೂಲಕ ಕಾಫಿ ಭೂಮಿಯನ್ನು ಹರಾಜು ಮಾಡುತ್ತಿರುವ ಬ್ಯಾಂಕ್ಗಳ ಧೋರಣೆ ಖಂಡಿಸಿ ಮಂಗಳೂರಿನ ಕ್ಲಾಕ್ ಟವರ್ ಮುಂಭಾಗದಲ್ಲಿ ಕಾಫಿ ಬೆಳೆಗಾರರು ಪ್ರತಿಭಟನೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನಲ್ಲಿ ಸಭೆ ನಡೆಸಿದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಯಾವುದೇ ಕಾರಣಕ್ಕೂ ಬೆಳೆಗಾರರ ಭೂಮಿ ಹರಾಜು ಹಾಕದಂತೆ ಬ್ಯಾಂಕ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಈಗಾಗಲೇ ಬ್ಯಾಂಕುಗಳು ನಿರ್ಧರಿಸಿರುವ ಕಾಫಿ ಬೆಳೆಗಾರರ ಭೂಮಿಯ ಹರಾಜು ಪ್ರಕ್ರಿಯೆಯನ್ನು ಕೂಡಲೇ ಸ್ಥಗಿತಗೊಳಿಸಬೇಕು. ಸರ್ಪೇಸಿ ಕಾಯ್ದೆಯಿಂದ ಆಗುವ ಸಮಸ್ಯೆಗಳ ಬಗ್ಗೆ ರಾಜ್ಯ ಮತ್ತು ಕೇಂದ್ರದಲ್ಲಿ ಜನಪ್ರತಿನಿಧಿಗಳಾದ ನಾವುಗಳು ಚರ್ಚಿಸುತ್ತೇವೆ. ಕಾಫಿ ಬೆಳೆಗಾರರು ಸಂಕಷ್ಟದಲ್ಲಿರುವಾಗ ಅವರ ಭೂಮಿಯನ್ನು ಹರಾಜು ಮಾಡಿದರೆ ರೈತರಿಗೆ ಬಹುದೊಡ್ಡ ಸಮಸ್ಯೆಯಾಗುತ್ತದೆ. ಹೀಗಾಗಿ ಭೂ ಹರಾಜು ಮಾಡಲು ನಿಗದಿಪಡಿಸಿದ ದಿನಾಂಕವನ್ನು ಅನಿರ್ದಿಷ್ಟಾವಧಿಯವರೆಗೆ ಮುಂದೂಡಬೇಕು ಎಂದು ನಿರ್ದೇಶನ ನೀಡಿದರು.
ಸಭೆಯಲ್ಲಿ ಶಾಸಕ ಎಚ್.ಡಿ.ತಮ್ಮಯ್ಯ, ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ, ವಿಧಾನ ಪರಿಷತ್ ಉಪಸಭಾಪತಿ ಎಂ.ಕೆ.ಪ್ರಾಣೇಶ್, ಕಾಫಿ ಮಂಡಳಿ ಅಧ್ಯಕ್ಷ ದಿನೇಶ್ ದೇವವೃಂದ, ಡಿಸಿ ಮೀನಾ ನಾಗರಾಜ್, ಜಿಪಂ ಸಿಇಒ ಎಚ್.ಎಸ್.ಕೀರ್ತನಾ, ಲೀಡ್ ಬ್ಯಾಂಕ್ ಮ್ಯಾನೇಜರ್ ಸುರೇಶ್, ಕಾಫಿ ಬೆಳೆಗಾರರ ಸಂಘದ ಅಧ್ಯಕ್ಷ ಬಾಲಕೃಷ್ಣ ಮತ್ತಿತರರಿದ್ದರು.
Decision to temporarily stop auction of coffee growers’ land