ಚಿಕ್ಕಮಗಳೂರು: ಸಾರ್ವಜನಿಕ ಕ್ಷೇತ್ರದಲ್ಲಿ ಉತ್ತಮ ಸೇವೆ ಸಲ್ಲಿಸಿದಾಗ ಸಮಾಜ ಗುರುತಿಸುವ ಜೊತೆಗೆ ಪಕ್ಷದಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡ ಪರಿಣಾಮ ಇಂದು ಅಧಿಕಾರದಲ್ಲಿ ಮುಂದುವರೆಯಲು ಕಾರಣವಾಗಿದೆ ಎಂದು ರಾಜ್ಯ ಪರಿಸರ ಮೌಲ್ಯ ಮಾಪನ ಪ್ರಾಧಿಕಾರದ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ಎ.ಎನ್. ಮಹೇಶ್ ತಿಳಿಸಿದರು.
ಅವರು ಸವಿತಾ ಸಮಾಜ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿ ಉತ್ತಮ ಸೇವೆಯನ್ನು ಪರಿಗಣಿಸಿ ಭಾರತ ಸರ್ಕಾರ ನೀಡಿರುವ ಈ ಹುದ್ದೆಯನ್ನು ಸಾರ್ವಜನಿಕ ಸೇವೆಗೆ ಸಮರ್ಪಿಸುವುದಾಗಿ ತಿಳಿಸಿದ ಅವರು ಸವಿತಾ ಸಮಾಜದ ಮುಖಂಡರು ನನ್ನ ಮೇಲೆ ಇಟ್ಟಿರುವ ಅಭಿಮಾನಕ್ಕೆ ಚಿರಋಣಿಯಾಗಿದ್ದು ಸವಿತಾ ಸಮಾಜದ ಅಭಿವೃದ್ಧಿಗೆ ಸಹಕರಿಸುವುದಾಗಿ ಭರವಸೆ ನೀಡಿದರು.
ಸವಿತಾ ಸಮಾಜದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀಧರ್.ಎನ್ ಮಾತನಾಡಿ ಸವಿತ ಸಮಾಜಕ್ಕೆ ಎ.ಎನ್. ಮಹೇಶ್ ರವರು ಒಂದು ಎಕರೆ ನಿವೇಶನ ನೀಡಿದ್ದು, ಮುಂದಿನ ದಿನಗಳಲ್ಲಿ ಕಟ್ಟಡ ನಿರ್ಮಾಣಕ್ಕೆ ಇದೇ ರೀತಿಯಲ್ಲಿ ಸಹಕಾರ ನೀಡಿ ಸಮಾಜದ ಅಭಿವೃದ್ಧಿಗೆ ಸಹಕಾರ ನೀಡಬೇಕೆಂದು ಮನವಿ ಮಾಡಿದರು.
ಸವಿತಾ ಸೇವಾ ಟ್ರಸ್ಟ್ ಹಾಗೂ ನಗರ ಸವಿತ ಸಮಾಜಕ್ಕೆ ಸರ್ಕಾರದಿಂದ ಅನುದಾನ ನೀಡುವಂತೆ ಇದೇ ಸಂದರ್ಭದಲ್ಲಿ ಮನವಿ ಮಾಡಿ ಸಮಾಜದ ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಹೆಚ್ಚಿನ ಸೌಲಭ್ಯ ಕಲ್ಪಿಸುವಂತೆ ಕೋರಿದರು.
ಟ್ರಸ್ಟ್ ಅಧ್ಯಕ್ಷ ಸಿ.ವೆಂಕಟೇಶ್ ಮಾತನಾಡಿ ೨೫ನೇ ವರ್ಷದ ಟ್ರಸ್ಟ್ನ ಕಾರ್ಯಕ್ರಮವನ್ನು ಸದ್ಯದಲ್ಲಿಯೇ ನಡೆಸಲಾಗುವುದು ಅದಕ್ಕೆ ಬೇಕಾದ ಪೂರ್ವಬಾವಿ ತಯಾರಿಯನ್ನು ನಡೆಸಲಾಗುತ್ತಿದ್ದು, ಈ ಕಾರ್ಯಕ್ರಮಕ್ಕೆ ಸಲಹೆ ಸೂಚನೆ ನೀಡುವಂತೆ ವಿನಂತಿಸಿದರು.
ಈ ಸಂದರ್ಭದಲ್ಲಿ ನಗರ ಸವಿತಾ ಸಮಾಜ ಉಪಾಧ್ಯಕ್ಷ ಕೆ.ಬಾಲಕೃಷ್ಣ, ತಾಲ್ಲೂಕು ಸವಿತಾ ಸಮಾಜದ ಅಧಯಕ್ಷ ಸಿ.ಎಂ.ಯೋಗೀಶ್, ಖಜಾಂಚಿ ಗಿರೀಶ್, ಮುಖಂಡರಾದ ಹರೀಶ್, ಕಾಂತರಾಜ್, ನಾಗರಾಜ್, ಬಸವರಾಜ್, ಭರತ್ ಉಪಸ್ಥಿತರಿದ್ದರು.
A.N.Mahesh President of State Environment Valuation Authority