ALSO FEATURED IN

coffee growers: ನ.೬ಕ್ಕೆ ನಗರದಲ್ಲಿ ಕಾಫಿ ಬೆಳೆಗಾರರ ವಿಶೇಷ ಸಭೆ

Spread the love

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕಾಫಿ ಬೆಳೆಗಾರರು ಪ್ರಸ್ತುತ ಎದುರಿಸುತ್ತಿರುವ ಅನೇಕ ಸಮಸ್ಯೆಗಳ ಬಗ್ಗೆ ಚರ್ಚಿಸಿ ಪರಿಹರಿಸಿಕೊಳ್ಳಲು ನ.೬ ರಂದು ಬುಧವಾರ ಎಐಟಿ ವೃತ್ತದಲ್ಲಿರುವ ಒಕ್ಕಲಿಗರ ಸಮುದಾಯ ಭವನದಲ್ಲಿ ಕಾಫಿ ಬೆಳೆಗಾರರ ವಿಶೇಷ ಸಭೆಯನ್ನು ಕರೆಯಲಾಗಿದೆ ಎಂದು ಆಯೋಜಕ ರತೀಶ್ ಕುಮಾರ್ ತಿಳಿಸಿದ್ದಾರೆ.

ಪತ್ರಿಕಾ ಹೇಳಿಕೆಯಲ್ಲಿ ಈ ವಿಷಯ ತಿಳಿಸಿರುವ ಅವರು ಈ ಸಭೆಯಲ್ಲಿ ಕಾಫಿ ಬೆಳೆಗಾರರು ಎದುರಿಸುತ್ತಿರುವ ಅನೇಕ ಸಮಸ್ಯೆಗಳ ಜೊತೆಗೆ ಅಸ್ಸಾಂ, ಬಿಹಾರ, ಮಧ್ಯಪ್ರದೇಶ, ಒರಿಸ್ಸಾ ಮೂಲದ ವಲಸೆ ಕಾರ್ಮಿಕರು ಜಿಲ್ಲೆಗೆ ಆಗಮಿಸಿತ್ತಿದ್ದು ಇವರಲ್ಲಿ ಅಪರಾಧ ಹಿನ್ನೆಲೆ ಉಳ್ಳುವರು ಕಾಫಿ ತೋಟಕ್ಕೆ ಬಂದಿದ್ದಾರೆ ಎಂಬ ಮಾಹಿತಿ ಇದೆ ಎಂದು ಹೇಳಿದ್ದಾರೆ.

ಬೆಳೆಗಾರರ ರಕ್ಷಣೆಗೆ ಜಿಲ್ಲಾ ಪೊಲೀಸ್ ಇಲಾಖೆ ಕೈಗೊಂಡಿರುವ ಕ್ರಮಗಳ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿಕ್ರಮ ಅಮಟೆ ಅವರು ಭಾಗವಹಿಸಿ ಮಾಹಿತಿ ನೀಡುವರು, ಭಾರತದ ಕಾಫಿಯನ್ನು ವಿಶ್ವದ ವಿಶ್ವ ಮಟ್ಟದಲ್ಲಿ ನಂ ೧ ಆಗಿಸಲು ಕಾಫಿ ಮಂಡಳಿ ಅಧ್ಯಕ್ಷ ದಿನೇಶ್ ದೇವವೃಂದ, ಕರ್ನಾಟಕ ಬೆಳೆಗಾರ ಒಕ್ಕೂಟದ ಅಧ್ಯಕ್ಷ ಡಾ. ಮೋಹನ್‌ಕುಮಾರ್ ಎಚ್.ಟಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ಇದೇ ಸಭೆಯಲ್ಲಿ ಜಿಲ್ಲೆಯ ತಾಲ್ಲೂಕು, ಹೋಬಳಿ ಮಟ್ಟದ ಬೆಳೆಗಾರರ ಸಂಘಟನೆಯ ಅಧ್ಯಕ್ಷರು, ಪದಾಧಿಕಾರಿಗಳು ಭಾಗವಹಿಸಲಿದ್ದು, ಇದೇ ಸಂದರ್ಭದಲ್ಲಿ ನೂತನ ಜಿಲ್ಲಾ ಕಾಫಿ ಬೆಳೆಗಾರರ ಸಂಘದ ಪದಾಧಿಕಾರಿಗಳ ಆಯ್ಕೆ ನಡೆಯಲಿದೆ ಎಂದು ಹೇಳಿದ್ದಾರೆ.

A special meeting of coffee growers in the city on November 6

Facebook
X
WhatsApp
Telegram
Spread the love

ಚಿಕ್ಕಮಗಳೂರು: ಉಪ್ಪಳ್ಳಿಯಲ್ಲಿ ನಿರ್ಮಾಣವಾಗುತ್ತಿರುವ ಮೌಲಾನಾ ಆಜಾದ್ ಮಾದರಿ ಶಾಲಾ ಕಟ್ಟಡ ಪೂರ್ಣಗೊಂಡ ನಂತರ ಎಲ್‌ಕೆಜಿಯಿಂದ ದ್ವಿತೀಯ ಪಿಯುಸಿ ವರೆಗೆ ಉಚಿತ…

Spread the love

ಚಿಕ್ಕಮಗಳೂರು: ಮಳೆಯಿಂದಾಗಿ ಹದಗೆಟ್ಟಿರುವ ನಗರದ ರಸ್ತೆಗಳ ಅಭಿವೃದ್ಧಿಗೆ ೨೭.೫ ಕೋಟಿ ರೂ.ಗಳನ್ನು ರಾಜ್ಯ ಸರ್ಕಾರದಿಂದ ಒದಗಿಸಲಾಗಿದ್ದು, ಮಳೆ ನಿಂತ ಕೂಡಲೇ…

Spread the love

ಚಿಕ್ಕಮಗಳೂರು: ಉಪ್ಪಳ್ಳಿಯಲ್ಲಿ ನಿರ್ಮಾಣವಾಗುತ್ತಿರುವ ಮೌಲಾನಾ ಆಜಾದ್ ಮಾದರಿ ಶಾಲಾ ಕಟ್ಟಡ ಪೂರ್ಣಗೊಂಡ ನಂತರ ಎಲ್‌ಕೆಜಿಯಿಂದ ದ್ವಿತೀಯ ಪಿಯುಸಿ ವರೆಗೆ ಉಚಿತ…

Spread the love

ಚಿಕ್ಕಮಗಳೂರು: ಮಳೆಯಿಂದಾಗಿ ಹದಗೆಟ್ಟಿರುವ ನಗರದ ರಸ್ತೆಗಳ ಅಭಿವೃದ್ಧಿಗೆ ೨೭.೫ ಕೋಟಿ ರೂ.ಗಳನ್ನು ರಾಜ್ಯ ಸರ್ಕಾರದಿಂದ ಒದಗಿಸಲಾಗಿದ್ದು, ಮಳೆ ನಿಂತ ಕೂಡಲೇ…

[t4b-ticker]
Exit mobile version