ಚಿಕ್ಕಮಗಳೂರು: ಶೋಷಿತರು ಮುಂಚೂಣಿಗೆ ಧಾವಿಸುವ ಹಾಗೂ ಅಧಿಕಾರ ಪಡೆ ಯಲಿಚ್ಚಿಸುವ ನಿಟ್ಟಿನಲ್ಲಿ ಅಂಬೇಡ್ಕರ್ ಸಿದ್ಧಾಂತವನ್ನು ಪ್ರತಿಬಿಂಬಿಸುವ ಪಕ್ಷವನ್ನು ಕೈಬಲಪಡಿಸುವುದು ಪ್ರತಿ ಯೊಬ್ಬರ ಧ್ಯೇಯವಾಗಬೇಕು ಎಂದು ಬಹುಜನ ಸಮಾಜ ಪಕ್ಷದ ರಾಜ್ಯಾಧ್ಯಕ್ಷ ಕೃಷ್ಣಮೂರ್ತಿ ಹೇಳಿದರು.
ನಗರದ ಅಂಬೇಡ್ಕರ್ ಸಮುದಾಯ ಭವನದಲ್ಲಿ ಜಿಲ್ಲಾ ಬಹುಜನ ಸಮಾಜ ಪಕ್ಷದ ಕಾರ್ಯಕರ್ತರ ಸಭೆಯನ್ನು ಮಂಗಳವಾರ ಉದ್ಘಾಟಿಸಿ ಅವರು ಮಾತನಾಡಿ ದೇಶವನ್ನಾಳಿದ ಎರಡು ರಾಷ್ಟ್ರೀಯ ಪಕ್ಷಗಳ ಕೊಡುಗೆ ಶೂನ್ಯವಾಗಿದೆ. ನೆಹರು ಕಾಲಘಟ್ಟದಿಂದ ಮೋ ದಿ ಕಾಲದವರೆಗೂ ಶೋಷಿತರಿಗೆ ಸ್ಪಂದಿಸುವ ಗುಣ ಬೆಳೆಸಿಕೊಂಡಿಲ್ಲ. ಒಂದೆಡೆ ಬಿಜೆಪಿ ಧರ್ಮಗಳ ನಡುವೆ ವಿಷಬೀಜ ಭಿತ್ತಿದರೆ, ಇನ್ನೊಂದೆಡೆ ಕಾಂಗ್ರೆಸ್ ದಲಿತರ ಮತಕ್ಕಾಗಿ ಓಲೈಕೆ ರಾಜಕಾರಣ ಮಾಡಿ ಅಧಿಕಾರ ಗಿಟ್ಟಿಸಿಕೊಳ್ಳುತ್ತಿದೆ ಎಂದು ದೂರಿದರು.
ನೂರಾರು ವರ್ಷಗಳಿಂದ ವಾಸಿಸುತ್ತಿರುವ ಬಹುಜನರಿಗೆ ಇಂದಿಗೂ ಸ್ವಂತ ನಿವೇಶನ, ಭೂಮಿಗಳಿಲ್ಲ. ಕೇಂದ್ರ ಸರ್ಕಾರ ರೈತರಿಗೆ ಸ್ಪಂದಿಸುತ್ತಿಲ್ಲ ಹಾಗೂ ವಿದ್ಯಾವಂತ ಯುವಕರಿಗೆ ಉದ್ಯೋಗ ಒದಗಿಸದಿರುವ ಕಾರಣ ಆತ್ಮಹತ್ಯೆಗೆ ಶರಣಾಗುವ ಸಂಖ್ಯೆ ಹೆಚ್ಚುತ್ತಿದೆ. ಉದ್ಯಮಿಗಳಿಗೆ ಪರೋಕ್ಷವಾಗಿ ಸಾಲಮನ್ನಾ ಮಾಡುವ ಕೇಂದ್ರ ರೈತರಿಗೆ ಬೆಳೆಪರಿಹಾರ ನೀಡದೇ ದೂಷಿಸುತ್ತಿದೆ ಎಂದು ಆರೋಪಿಸಿದರು.
ದೇಶದ ಬೆನ್ನೆಲು ರೈತರಿಗೆ ನೆರವಾಗುತ್ತೇವೆ ಎಂದೇಳುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಕೃಷಿ ಚಟುವಟಿಕೆ ಬಳಸುವ ಕೀಟನಾಶಕ, ರಸಗೊಬ್ಬರಗಳನ್ನು ಐದುಪಟ್ಟು ಬೆಲೆಏರಿಸಿ, ಹಿಂಬದಿಯಿಂದ ಅದೇ ರೈತರಿಗೆ ಕಿಸಾನ್ ಸಮಾನ್ ಯೋಜನೆಯಡಿ ವಾರ್ಷಿಕ ೬ ಸಾವಿರ ಹಣವನ್ನು ಜಮಾವಣೆ ಮಾಡುತ್ತಿರು ವುದು ಸರಿಯೇ ಎಂದು ಪ್ರಶ್ನಿಸಿದರು.
ಸರ್ಕಾರಿ ವಲಯದ ಸಂಸ್ಥೆಗಳು ಖಾಸಗೀಗೊಂಡು ಹಲವಾರು ಮಂದಿ ಉದ್ಯೋಗ ಕಳೆದುಕೊಳ್ಳುತ್ತಿ ದ್ದಾರೆ. ಈ ನಡುವೆ ಯುವಕರಿಗೆ ಹೊಸದಾಗಿ ಉದ್ಯೋಗ ಕಲ್ಪಿಸುವುದಾಗಿ ಪ್ರಧಾನ ಮಂತ್ರಿಗಳು ಪೊಳ್ಳು ಭರವಸೆ ನೀಡುತ್ತಿರುವುದು ಹಾಸ್ಯಾಸ್ಪದ ಎಂದ ಅವರು ಕೇಂದ್ರದ ನಡೆ ರೈತರಿಗೆ ಸುಣ್ಣವಾದರೆ, ಉದ್ಯಮಿ ಗಳಿಗೆ ಬೆಣ್ಣೆ ಎಂದು ಆರೋಪಿಸಿದರು.
ಪ್ರಪಂಚದಲ್ಲೇ ಭಾರತ ಹಸಿವಿನಿಂದ ಹೆಚ್ಚು ಬಳಲುತ್ತಿದ್ದು ಮೂಲ ಕಾಂಗ್ರೆಸ್ ಹಾಗೂ ಬಿಜೆಪಿ ಆಳ್ವಿಕೆಯ ನೇರ ಕಾರಣ. ಕಾಂಗ್ರೆಸ್ನಲ್ಲಿ ನೆಪಮಾತ್ರಕ್ಕೆ ಮಾತ್ರ ಮಲ್ಲಿಕಾರ್ಜುನ್ ಖರ್ಗೆ ಅವರನ್ನು ಎಐಸಿಸಿ ಅಧ್ಯಕ್ಷರಾಗಿ ಸಿದೆ ಹೊರತು ದಲಿತರಿಗೆ ದಕ್ಕಬೇಕಾದ ಅಧಿಕಾರ ಇಂದಿಗೂ ದೊರೆತಿಲ್ಲ. ಅಲ್ಲದೇ ಅಂಬೇಡ್ಕರ್ ಕೊನೆಗಳಿ ಗೆಯಲ್ಲಿ ಅಂತ್ಯಸಂಸ್ಕಾರ ಅವಕಾಶವನ್ನು ಕಾಂಗ್ರೆಸ್ ಕಲ್ಪಿಸಿಲ್ಲ ಎಂದು ಹೇಳಿದರು.
ರಾಜ್ಯದಲ್ಲಿ ಸಿದ್ದರಾಮಯ್ಯ ಕಾಂಗ್ರೆಸ್ ಸರ್ಕಾರ ಅಹಿಂದಾ ಮುಖವಾಡ ಧರಿಸಿ ದಲಿತರು, ಹಿಂದುಳಿ ದವರು ಹಾಗೂ ಶೋಷಿತರಿಗೆ ಮಂಕುಬೂದಿ ಎರಚುತ್ತಿದೆ. ಎಸ್ಸಿ, ಎಸ್ಟಿ ಮೀಸಲಿಟ್ಟಿದ ಲಕ್ಷಾಂತರ ಹಣವನ್ನು ಪಕ್ಷದ ಚಟುವಟಿಕೆ ಹಾಗೂ ಇನ್ನಿತರೆ ಕಾರ್ಯಕ್ಕೆ ದುರ್ಬಳಕೆ ಮಾಡಿಕೊಂಡು ಜನಸಾಮಾನ್ಯರಿಗೆ ಕಣ್ಣೋರೆ ಸುವ ತಂತ್ರಗಾರಿಕೆ ರೂಪಿಸುತ್ತಿದೆ ಎಂದರು.
ಇದೀಗ ರಾಜ್ಯದ ಶಿಗ್ಗಾಂವಿ, ಸಂಡೂರು ಹಾಗೂ ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಹಿಂದೆ ಕೈಗೊ ಂಡ ಮೂರು ಪಕ್ಷದ ಸಾಧನೆಗಳನ್ನು ಚರ್ಚಿಸದೇ, ಪರಸ್ಪರ ಕೆಸರೆಚಾಟದಿಂದ ತೊಡಗಿದೆ. ಸಿದ್ದು ಮುಡ ಪ್ರಕರಣವಾದರೆ, ಬಿಜೆಪಿ ಶೇ.೪೦ ಕಮೀಷನ್ ಆರೋಪ ಮುಂದಿಟ್ಟು ಮತ ಸೆಳೆಯುವ ಪ್ರಯತ್ನದಲ್ಲಿ ನಿರಂ ತರ ತೊಡಗಿರುವುದು ಮತದಾರರ ಹಲವಾರು ಪ್ರಶ್ನೆಗಳು ಕಾಡುತ್ತಿದೆ ಎಂದು ಹೇಳಿದರು.
ಬಿಎಸ್ಪಿ ರಾಜ್ಯ ಉಪಾಧ್ಯಕ್ಷ ಝಾಕೀರ್ ಹುಸೇನ್ ಪ್ರಾಸ್ತಾವಿಕವಾಗಿ ಮಾತನಾಡಿ ರಾಜ್ಯ ಸಮಿತಿಗೆ ನೂತ ನವಾಗಿ ಆಯ್ಕೆಗೊಂಡಿರುವ ಪದಾಧಿಕಾರಿಗಳು ಮುಂಬರುವ ಚುನಾವಣೆಗಳಲ್ಲಿ ಪಕ್ಷವನ್ನು ಸದೃಢಗೊಳಿಸು ವ ನಿಟ್ಟಿನಲ್ಲಿ ರಾಜ್ಯಾದ್ಯಂತ ಪ್ರವಾಸ ಕೈಗೊಂಡು ಪದಾಧಿಕಾರಿಗಳಿಗೆ ಶಕ್ತಿ ತುಂಬುವ ಕಾರ್ಯದಲ್ಲಿ ಮುಂದಾ ಗುತ್ತಿದೆ ಎಂದರು.
ಹಲವಾರು ದಾರ್ಶನಿಕರು, ಸಂತರು ಬಿಟ್ಟಿದ್ದ ಚಳುವಳಿಯನ್ನು ಅಂಬೇಡ್ಕರ್ ಹಾಗೂ ಕಾನ್ಷಿರಾಂರವರು ವಿಚಲೀತರಾಗದೇ ಸುಖ ಹಾಗೂ ನೆಮ್ಮದಿಯನ್ನು ಬದಿಗಿರಿಸಿ, ಶೋಷಿತರಿಗೆ ನೆರವಾಗಲು ಹೋ ರಾಟ ನಡೆಸಿ ಮಹಿಳೆಯರಿಗೆ ಸವಲತ್ತು, ಪ್ರತಿ ನಾಗರೀಕರಿಗೆ ಮತದಾನದ ಹಕ್ಕು ಒದಗಿಸಿದೆ. ದೇಶದಲ್ಲಿ ಸಂವಿಧಾ ನವನ್ನು ಯಥಾವತ್ತಾಗಿ ಜಾರಿಗೊಳಿಸಿದರೆ ಬಡವರು, ಉದ್ಯೋಗ ವಂಚಿತರನ್ನು ನಿರ್ಮೂಲಗೊಳಿಸಬಹು ದು ಎಂದು ಹೇಳಿದರು.
ಕಾರ್ಯಕ್ರಮ ಅಧ್ಯಕ್ಷತೆಯನ್ನು ಬಿಎಸ್ಪಿ ಜಿಲ್ಲಾಧ್ಯಕ್ಷ ಕೆ.ಟಿ.ರಾಧಾಕೃಷ್ಣ ವಹಿಸಿದ್ದರು. ಈ ಸಂದರ್ಭದಲ್ಲಿ ಬಿಎಸ್ಪಿ ರಾಜ್ಯ ಸಂಯೋಜಕ ಅಶೋಕ್ ಚಕ್ರವತ್ರಿ, ಉಸ್ತುವಾರಿ ಗಂಗಾಧರ್ ಬಹುಜನ್, ಕಾರ್ಯದರ್ಶಿ ಕೆ.ಬಿ.ಸುಧಾ, ಜಿಲ್ಲಾ ಉಪಾಧ್ಯಕ್ಷೆ ಮಂಜುಳಾ, ತಾಲ್ಲೂಕು ಅಧ್ಯಕ್ಷ ಹೆಚ್.ಕುಮಾರ್, ಮುಖಂಡರುಗಳಾದ ಪರಮೇಶ್, ಜಾಕೀರ್ ಆಲಿಖಾನ್, ಗಂಗಾಧರ್, ವೇಲಾಯುಧನ್, ಮಂಜಯ್ಯ, ಶಂಕರ್, ಪಿ.ಕೆ.ಮಂಜು ನಾಥ್ ಮತ್ತಿತರರಿದ್ದರು.
Strengthen the party that reflects Ambedkar’s ideology