ಚಿಕ್ಕಮಗಳೂರು: ದೇಶ-ವಿದೇಶಗಳಲ್ಲಿ ಸಾಮಾನ್ಯ ಕ್ರೀಡಾಪಟುಗಿಂತ ವಿಶೇಷ ಚೇತ ನ ಕ್ರೀಡಾಪಟುಗಳು ಹೆಚ್ಚಿನ ಸಾಧನೆಗೈಯುವ ಮೂಲಕ ಯಶಸ್ವಿ ಕ್ರೀಡಾಪಟುವಾಗಿ ಹೊರಹೊಮ್ಮುತ್ತಿದ್ದಾರೆ ಎಂದು ಪ್ರಾಥಮಿಕ ದೈಹಿಕ ಶಿಕ್ಷಣ ಸಂಘದ ಜಿಲ್ಲಾಧ್ಯಕ್ಷ .ಫೈರೋಜ್ ಅಹ್ಮದ್ ಹೇಳಿದರು.
ನಗರದ ಸುಭಾಶ್ಚಂದ್ರ ಬೋಸ್ ಜಿಲ್ಲಾ ಆಟದ ಮೈದಾನದಲ್ಲಿ ಜಿಲ್ಲಾಡಳಿತ, ಜಿ.ಪಂ., ಶಾಲಾ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಏರ್ಪಡಿಸಿದ್ಧ ವಿಶೇಷ ಚೇತನ ಮಕ್ಕಳ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಸಮಾ ರೋಪ ಸಮಾರಂಭದಲ್ಲಿ ಮಕ್ಕಳಿಗೆ ಬುಧವಾರ ಬಹುಮಾನ ವಿತರಿಸಿ ಅವರು ಮಾತನಾಡಿದರು.
ಸಾಮಾನ್ಯ ಮಕ್ಕಳಂತೆ ವಿಶೇಷ ಚೇತನ ಮಕ್ಕಳಿಗೆ ಕ್ರೀಡೆಯಿಂದ ವಂಚಿತರಾಗಬಾರದೆಂಬ ದೃಷ್ಟಿಯಿಂದ ಸರ್ಕಾರ ೧೦೦, ೫೦ ಮೀಟರ್ ಓಟ, ಗುಂಡುಎಸೆತ, ಜಾವಲಿಂಗ್ ಥ್ರೋ ಹಾಗೂ ಉದ್ದಜಿಗಿತ ಕ್ರೀಡೆಗಳನ್ನು ಆಯೋಜಿಸಿ ದೈಹಿಕವಾಗಿ ಸಾಮರ್ಥ್ಯ ತುಂಬಿ ಮಕ್ಕಳಿಗೆ ಅನುಕೂಲ ಕಲ್ಪಿಸುತ್ತಿದೆ ಎಂದು ಹೇಳಿದರು.
ತಾಲ್ಲೂಕಿನ ಆಶಾಕಿರಣ ಶಾಲೆಯ ಅನೇಕ ಮಕ್ಕಳು ವಿದೇಶದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ಚಿನ್ನದ ಪದಕವನ್ನು ಗಳಿಸಿದ್ದಾರೆ. ಹೀಗಾಗಿ ವಿಶೇಷ ಚೇತನ ಮಕ್ಕಳು ಮಾನಸಿಕ ಹಾಗೂ ಖಿನ್ನತೆಗೆ ಒಳ ಗಾಗದೇ ಮುಕ್ತ ಕ್ರೀಡಾಚಟುವಟಿಕೆಯಲ್ಲಿ ಭಾಗವಹಿಸಿದರೆ ರಾಷ್ಟ್ರಮಟ್ಟದಲ್ಲಿ ಹೆಸರು ಗಳಿಸಲು ಸಾಧ್ಯ ಎಂ ದರು.
ಇಂದಿನ ಕ್ರೀಡಾಕೂಟದಲ್ಲಿ ನಾಲ್ಕು ವಿಭಾಗಗಳಲ್ಲಿ ಕ್ರೀಡಾಕೂಟ ಆಯೋಜಿಸಿದ್ದು ಸಂಪೂರ್ಣ ಅಂ ಧತ್ವ, ಭಾಗಶಃ ಅಂಧತ್ವ, ಒಂದು ಕೈ ನೂನ್ಯತೆ ಅಥವಾ ಕಾಲಿನ ನೂನ್ಯತೆ ಹೊಂದಿದವರಿಗೆ ಶಿಕ್ಷಕರು ತರಬೇತಿ ನೀಡಿ ಕ್ರೀಡೆಯಲ್ಲಿ ಭಾಗವಹಿಸಲು ಸಹಕಾರಿಯಾಗಿದ್ದು ಮಕ್ಕಳು ಅತ್ಯಂತ ಸಂತೋಷದಿಂದ ಸ್ಪರ್ಧೆಯಲ್ಲಿ ತೊಡಗಿಸಿಕೊಂಡಿದ್ದರು ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಉಪನಿರ್ದೇಶಕರ ಕಚೇರಿಯ ಜಿಲ್ಲಾ ದೈಹಿಕ ಶಿಕ್ಷಣಾ ಧಿಕಾರಿ ಯು.ವಿ.ಪಾಲಾಕ್ಷಮೂರ್ತಿ ಜಿಲ್ಲೆಯ ಸುಮಾರು ೧೫ಕ್ಕೂ ಹೆಚ್ಚು ಶಾಲೆಗಳಿಂದ ೧೫೦ಕ್ಕೂ ಹೆಚ್ಚು ವಿಶೇಷ ಚೇತನ ಮಕ್ಕಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದು ವಿಜೇತರಾವರು ರಾಜ್ಯಮಟ್ಟಕ್ಕೆ ಆಯ್ಕೆಗೊಂಡಿದ್ದಾರೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಡಯಟ್ ಉಪನ್ಯಾಸಕ ಬಿ.ಎಂ.ಜ್ಞಾನಮೂರ್ತಿ, ಗ್ರೇಡ್೧ ಪ್ರಾಥಮಿಕ ದೈಹಿಕ ಶಿಕ್ಷಣ ಸಂಘದ ಜಿಲ್ಲಾಧ್ಯಕ್ಷ ಶಂಕರೇಗೌಡ, ತಾಲೂಕು ದೈಹಿಕ ಶಿಕ್ಷಣ ಪರೀಕ್ಷಕರಾದ ಜಯದೇವಪ್ಪ, ವೇದಮೂರ್ತಿ, ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಖಜಾಂಚಿ ಮಂಜುನಾಥ್, ಅಜ್ಜಂಪುರ ಸರ್ಕಾರಿ ನೌಕರರ ಸಂಘದ ನಿರ್ದೇಶಕ ಪರಮೇಶ್, ಗ್ರೇಡ್೨ ಪ್ರಾಥಮಿಕ ದೈಹಿಕ ಶಿಕ್ಷಣ ಸಂಘದ ಅಧ್ಯಕ್ಷ ಶಿವಪ್ಪ, ಕಾರ್ಯದರ್ಶಿ ವಸಂತ್ಕುಮಾರ್, ಮಕ್ಕಳು ಮತ್ತಿತರರಿದ್ದರು.
Specially gifted children are successful athletes