ಚಿಕ್ಕಮಗಳೂರು: ಈ ಬಾರಿಯ ೭೧ನೇ ಸಹಕಾರ ಸಪ್ತಾಹ ವಿಕಸಿತ ಭಾರತ ನಿರ್ಮಾಣದಲ್ಲಿ ಸಹಕಾರ ಸಂಸ್ಥೆಗಳ ಪಾತ್ರ ಎಂಬ ಧ್ಯೇಯದೊಂದಿಗೆ ನ.೧೪ ರಿಂದ ೨೦ ರವರೆಗೆ ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಆಯೋಜಿಸಲಾಗಿದೆ ಎಂದು ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಡಾ. ಜಿ.ಎಸ್. ಮಹಾಬಲ ತಿಳಿಸಿದರು.
ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ, ಕರ್ನಾಟಕ ರಾಜ್ಯ ಮಹಾ ಮಂಡಳ ಸಹಕಾರ ಇಲಾಖೆ, ಡಿಸಿಸಿ ಬ್ಯಾಂಕ್ ಹಾಗೂ ಜಿಲ್ಲೆಯ ಎಲ್ಲಾ ಸಹಕಾರ ಸಂಘಗಳ ಸಂಯುಕ್ತಾಶ್ರಯದಲ್ಲಿ ಸಹಕಾರ ಸಪ್ತಾಹವನ್ನು ಏರ್ಪಡಿಸಲಾಗಿದೆ ಎಂದರು.
ಜಿಲ್ಲೆಯಾದ್ಯಂತ ಒಂದೊಂದು ದಿನ ಒಂದೊಂದು ವಿ?ಯದ ಬಗ್ಗೆ ಯಶಸ್ವಿಯಾಗಿಯೂ, ಅರ್ಥಪೂರ್ಣವಾಗಿಯೂ ಸಹಕಾರ ಚಳುವಳಿ ಅಭಿವೃದ್ಧಿಗೆ ಪೂರಕವಾಗಿ ಚಿಂತನ-ಮಂಥನ ನಡೆಸಿ ಸಂಭ್ರಮದಿಂದ ಸಹಕಾರ ಸಪ್ತಾಹವನ್ನು ಆಚರಿಸಬೇಕೆಂದು ಹೇಳಿದರು.
ನ.೧೪ ರಂದು ಕೊಪ್ಪದ ಯಸ್ಕಾನ್ ವಾಣಿಜ್ಯ ಸಂಕೀರ್ಣ ಸಭಾಂಗಣದಲ್ಲಿ ಸಹಕಾರ ಸಪ್ತಾಹ ಉದ್ಘಾಟನೆ ಹಾಗೂ ಸಹಕಾರ ಸಚಿವಾಲಯದ ನೂತನ ಪ್ರಯತ್ನಗಳ ಮೂಲಕ ಸಹಕಾರ ಚಳುವಳಿಯನ್ನು ಬಲಪಡಿಸುವುದು ದಿನ ಆಚರಣೆ, ನ.೧೫ ರಂದು ಮೂಡಿಗೆರೆ ಟಿಎಪಿಸಿಎಂಎಸ್ ರೈತಭವನದಲ್ಲಿ ಸಹಕಾರ ಸಂಸ್ಥೆಗಳಲ್ಲಿ ಅನ್ವೇ?ಣೆ,
ತಾಂತ್ರಿಕತೆ ಮತ್ತು ಉತ್ತಮ ಆಡಳಿತ ದಿನ ಆಚರಣೆ, ನ.೧೬ ಶೃಂಗೇರಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಕಟ್ಟಡದಲ್ಲಿ ಉದ್ಯಮಶೀಲತೆ, ಉದ್ಯೋಗ ಮತ್ತು ಕೌಶಲ್ಯಾಭಿವೃದ್ಧಿಯನ್ನು ಉತ್ತೇಜಿಸುವಲ್ಲಿ ಸಹಕಾರ ಸಂಸ್ಥೆಗಳ ಪಾತ್ರ ದಿನ ಆಚರಿಸಲಾಗುವುದು ಎಂದರು.
ನ.೧೭ ಚಿಕ್ಕಮಗಳೂರಿನ ಜಿಲ್ಲಾ ಸಹಕಾರ ಯೂನಿಯನ್ ಸಭಾಂಗಣದಲ್ಲಿ ಸಹಕಾರ ಉದ್ಯಮಗಳಲ್ಲಿ ಪರಿವರ್ತನೆ ದಿನ ಆಚರಣೆ, ನ.೧೮ ತರೀಕೆರೆ ಬಿ.ಹೆಚ್ ರಸ್ತೆಯಲ್ಲಿರುವ ಹೋಟೆಲ್ ಅರಮನೆಯಲ್ಲಿ ಸಹಕಾರ ಸಂಸ್ಥೆಗಳ ನಡುವೆ ಸಹಕಾರವನ್ನು ಬಲಪಡಿಸುವುದು ದಿನ ಆಚರಣೆ, ನ.೧೯ ನಗರದ ಜಿಲ್ಲಾ ಒಕ್ಕಲಿಗರ ಕಲ್ಯಾಣಮಂಟಪದಲ್ಲಿ ಮಹಿಳೆಯರು, ಯುವಕರು ಮತ್ತು ಅಬಲ ವರ್ಗಗಳಿಗಾಗಿ ಸಹಕಾರ ಸಂಸ್ಥೆಗಳು ದಿನ ರಾಜ್ಯಮಟ್ಟದ ಆಚರಣೆ, ನ.೨೦ ಕಡೂರಿನ ಬಯಲು ಬಸವೇಶ್ವರ ಸಮುದಾಯ ಭವನದಲ್ಲಿ ಉತ್ತಮ ವಿಶ್ವ ನಿರ್ಮಾಣ ಹಾದಿಗಾಗಿ ಹಾಗೂ ಸುಸ್ಥಿರ ಅಭಿವೃದ್ಧಿ ಗುರಿ ಸಾಧನೆಯಲ್ಲಿ ಸಹಕಾರ ಸಂಸ್ಥೆಗಳ ಪಾತ್ರ ದಿನ ಹಾಗೂ ಸಮಾರೋಪ ಸಮಾರಂಭ ಆಚರಣೆ ಮಾಡಲಾಗುವುದೆಂದು ಹೇಳಿದರು.
ಜಿಲ್ಲೆಯಲ್ಲಿ ಅತ್ಯುತ್ತಮವಾಗಿ, ರಚನಾತ್ಮಕವಾಗಿ ಕಾರ್ಯನಿರ್ವಹಿಸುತ್ತಿರುವ ಮಾದರಿ ಸಹಕಾರ ಸಂಘಗಳನ್ನು ವಲಯವಾರು ಗುರುತಿಸಿ ಸನ್ಮಾನಿಸಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಸಹಕಾರ ಸಪ್ತಾಹದ ಏಳು ದಿನಗಳ ಕಾರ್ಯಕ್ರಮದಲ್ಲಿ ಹಿರಿಯ ಸಹಕಾರಿಗಳು, ಜನಪ್ರತಿನಿಧಿಗಳು ಇಲಾಖಾ ಅಧಿಕಾರಿಗಳು, ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಸಿಬ್ಬಂದಿಗಳು, ಸಂಘದ ಸದಸ್ಯರುಗಳ ಸಂಗಮದಿಂದ ಅರ್ಥಪೂರ್ಣವಾಗಿ ಸಹಕಾರ ಚಳುವಳಿಯಲ್ಲಿ ಇರುವ ಸಮಸ್ಯೆಗಳು ಹಾಗೂ ಸವಾಲುಗಳ ಚಿಂತನ-ಮಂಥನ ನಡೆಸಿ ಸಹಕಾರ ಚಳುವಳಿಗೆ ಭದ್ರಾ ವ್ಯವಸ್ಥೆಯನ್ನು ರೂಪಿಸಲಾಗುವುದೆಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಜಿ.ಕೆ.ದಿವಾಕರ್, ಸಿ.ಎಸ್ ರಂಗನಾಥ್, ವರಸಿದ್ದಿ ವೇಣುಗೋಪಾಲ್, ಈಶ್ವರಹಳ್ಳಿ ಮಹೇಶ್, ಸಿಇಓ ತಿಮ್ಮಪ್ಪ, ಡಾ. ಡಿ.ಎಸ್ ತೇಜಸ್ವಿನಿ, ತ್ರಿವೇಣಿ ಇದ್ದರು.
71st Cooperation Week in the district from November 14 to 20