ಚಿಕ್ಕಮಗಳೂರು: ಜಿಲ್ಲಾಡಳಿತ ಮತ್ತು ಕನಕ ಜಯಂತೋತ್ಸವ ಸಮಿತಿ ಸಹಯೋಗದಲ್ಲಿ ನ.೧೮ ರಂದು ಸೋಮವಾರ ಕುವೆಂಪು ಕಲಾಮಂದಿರದಲ್ಲಿ ಆಯೋಜಿಸಿರುವ ೫೩೭ನೇ ಶ್ರೀ ಕನಕದಾಸ ಜಯಂತಿಯನ್ನು ಯಶಸ್ವಿಗೊಳಿಸುವಂತೆ ಕನಕ ಜಯಂತ್ಯೋತ್ಸವ ಆಚರಣಾ ಸಮಿತಿ ಮನವಿ ಮಾಡಿದೆ.
ಇಂದು ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಸಮಿತಿ ಅಧ್ಯಕ್ಷ ಎಮ್.ಆರ್. ಬಸವರಾಜು ಅಂದು ಬೆಳಗ್ಗೆ ತಾಲ್ಲೂಕು ಕಚೇರಿ ಅವರಣದಿಂದ ಬೈಕ್ ಮತ್ತು ಆಟೋರ್ಯಾಲಿ ಮೂಲಕ ಶ್ರೀ ಕನಕದಾಸರ ಭಾವಚಿತ್ರದೊಂದಿಗೆ ಮೆರವಣಿಗೆ ವಿವಿಧ ಜಾನಪದ ಕಲಾತಂಡಗಳೊಂದಿಗೆ ಹೊರಟು, ಎಂ.ಜಿ ರಸ್ತೆ ಮಾರ್ಗವಾಗಿ ಕಲಾಮಂದಿರ ತಲುಪಲಿದೆ ಎಂದರು.
ಶ್ರೀ ಕನಕದಾಸರ ಕೀರ್ತನೆಗಳನ್ನು ಸರ್ವರೂ ಅಧ್ಯಯನ ಮಾಡಿ ಅರ್ಥಮಾಡಿಕೊಂಡಾಗ ದಾರ್ಶನಿಕರ ಜಯಂತಿಗೆ ನಿಜವಾದ ಅರ್ಥ ಬರುತ್ತದೆ ಎಂದು ತಿಳಿಸಿದರು. ಶ್ರೀ ಕನಕದಾಸರ ತತ್ವ ಆದರ್ಶಗಳು ಪ್ರಸ್ತುತ ಸಮಾಜಕ್ಕೆ ದಾರಿದೀಪವಾಗಿದ್ದು, ಈ ಮಹಾ ದಾರ್ಶನಿಕರು ಕೇವಲ ಒಂದು ಜಾತಿ, ಸಮುದಾಯಕ್ಕೆ ಸೀಮಿತವಾಗಿರುವುದಿಲ್ಲ ಎಂದರು.
ಅರಸೀಕೆರೆ ತಾಲ್ಲೂಕು ಬಾಣಾವರದ ಪ್ರಥಮ ದರ್ಜೆ ಸರ್ಕಾರಿ ಕಾಲೇಜಿನ ಪ್ರಾಂಶುಪಾಲರಾದ ಡಾ. ದೊರೇಶ್ ಬಿಳಿಕೆರೆ ರವರು ಪ್ರಧಾನ ಉಪನ್ಯಾಸ ನೀಡುವರು ಎಂದು ಹೇಳಿದರು. ಜಿಲ್ಲಾ ಕುರುಬರ ಸಂಘ, ತಾಲ್ಲೂಕು ಕುರುಬರ ಸಂಘ, ಕನಕಶ್ರೀ ಮಹಿಳಾ ಸಂಘ, ತಾಲ್ಲೂಕು ಕುರುಬರ ನೌಕರರ ಸಂಘ ಹಾಗೂ ಸಂಗೊಳ್ಳಿ ರಾಯಣ್ಣ ಯುವ ಸೇನೆ ಹಾಗೂ ಸಮಾಜದ ಬಂಧುಗಳು ಮತ್ತು ಶ್ರೀ ಕನಕದಾಸರ ಅನುಯಾಯಿಗಳು ಶ್ರೀ ಕನಕದಾಸರ ಜಯಂತಿಗೆ ಸಹಕಾರ ನೀಡಿವೆ ಎಂದು ತಿಳಿಸಿದರು.
ಈ ಕಾರ್ಯಕ್ರಮಕ್ಕೆ ಸಮಾಜದ ಮುಖಂಡರು, ಸಮಾಜದ ಬಂಧುಗಳು, ಸಾರ್ವಜನಿಕರು ಮತ್ತು ಕನಕದಾಸರ ಅನುಯಾಯಿಗಳು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಮನವಿ ಮಾಡಿಕೊಂಡರು. ಜಿಲ್ಲಾ ಕುರುಬರ ಸಂಘದ ಪ್ರಧಾನ ಕಾರ್ಯದರ್ಶಿ ಕೆ.ಬಿ ಮಂಜುನಾಥ್ ಮಾತನಾಡಿ, ಈ ಬಾರಿಯ ಕನಕ ಜಯಂತಿಯನ್ನು ವಿಶೇ?ವಾಗಿ ಆಚರಿಸಲು ನಿರ್ಧರಿಸಲಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಭಾಗವಹಿಸಲಿದ್ದಾರೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಕಾರ್ಯಧ್ಯಕ್ಷ ಹೆಚ್.ಎಲ್. ಕೃ?ಗೌಡ, ಪ್ರಧಾನ ಕಾರ್ಯದರ್ಶಿ ಭರತ್, ಖಜಾಂಚಿ ಸಿ.ಸಿ. ಮಧು, ಕಾರ್ಯದರ್ಶಿ ನಾಗೇಶ್ ಉಪಸ್ಥಿತರಿದ್ದರು.
Kanaka Jayantyotsava Acharana Committee request to make Kanaka Jayanti a success