ALSO FEATURED IN

Waqf land issue:ನ.21 ವಕ್ಫ್ ಭೂಮಿ ಸಮಸ್ಯೆ ಪರಿಹರಿಸಲು ಬಿಜೆಪಿಯಿಂದ ಆಹೋರಾತ್ರಿ ಧರಣಿ

Spread the love

ಚಿಕ್ಕಮಗಳೂರು: ‘ನಮ್ಮ ಭೂಮಿ ನಮ್ಮ ಹಕ್ಕು’ ಶೀರ್ಷಿಕೆಯಡಿ ವಕ್ಫ್‌ಭೂಮಿ ಸಮಸ್ಯೆ ಪರಿಹಾರಕ್ಕಾಗಿ ನ.೨೧ ರಿಂದ ಎರಡು ದಿನ ನಗರದ ಆಜಾದ್ ಪಾರ್ಕಿನಲ್ಲಿ ಆಹೋರಾತ್ರಿ ಧರಣಿ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎಂ.ಆರ್. ದೇವರಾಜಶೆಟ್ಟಿ ತಿಳಿಸಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿ, ವಕ್ಫ್‌ನಿಂದ ಯಾರಿಗಾದರೂ ಸಮಸ್ಯೆ ಆಗಿದ್ದರೆ ರೈತರು ಧರಣಿ ಸಂದರ್ಭದಲ್ಲಿ ನಮಗೆ ಮನವಿ ಸಲ್ಲಿಸಬಹುದಾಗಿದ್ದು, ಇದೊಂದು ಪಕ್ಷಾತೀತ ಧರಣಿ ಹೋರಾಟ ಎಂದು ಹೇಳಿದರು.

ವಕ್ಫ್ ಆಸ್ತಿ ಸಮಸ್ಯೆಗೆ ತಾರ್ಕಿಕ ಅಂತ್ಯ ಹುಡುಕುವ ನಿಟ್ಟಿನಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ನೇತೃತ್ವದಲ್ಲಿ ಕಳೆದ ಹತ್ತಾರು ದಿನ ಪಕ್ಷದೊಳಗೆ ಆಂತರಿಕ ಚರ್ಚೆ ನಡೆದು ವ್ಯವಸ್ಥಿತವಾಗಿ ಧರಣಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ನಮ್ಮ ಜಿಲ್ಲೆಯಲ್ಲೂ ವಕ್ಫ್ ಆಸ್ತಿ ಸಂಬಂಧ ಸಮಸ್ಯೆ ಉಂಟಾಗಿದ್ದರೆ ಸಾರ್ವಜನಿಕರು, ರೈತರು, ಮಠ-ಮಂದಿರಗಳು, ಶಾಲೆಗಳು ಹಾಗೂ ಸಾರ್ವಜನಿಕರು ಆಹೋರಾತ್ರಿ ಧರಣಿಯಲ್ಲಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು.

೨ ಲಕ್ಷ ಸದಸ್ಯತ್ವ: ಬಿಲ್ಲೆಯಲ್ಲಿ ಇತ್ತೀಚೆಗೆ ಕೈಗೊಂಡ ಬಿಜೆಪಿ ಸದಸ್ಯತ್ವ ಅಭಿಯಾನದಲ್ಲಿ ಒಟ್ಟು ೨ ಲಕ್ಷಕೂ ಹೆಚ್ಚು ಸದಸ್ಯರು ನೋಂದಣಿಯಾಗಿದ್ದು, ಜಿಲ್ಲೆಯ ೧೨೨೧ ಬೂತ್‌ಗಳಲ್ಲಿ ಸಕ್ರಿಯ ಕಾರ್ಯಕರ್ತರನ್ನು ಆಯ್ಕೆ ಮಾಡುತ್ತಿದ್ದೇವೆ. ೫೦ ಸದಸ್ಯರನ್ನು ನೋಂದಣಿ ಮಾಡಿಸಿದ ಕಾರ್ಯಕರ್ತನನ್ನು ಸಕ್ರೀಯ ಎಂದು ಪರಿಗಣಿಸಲಾಗುವುದು ಎಂದು ದೇವರಾಜಶೆಟ್ಟಿ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಮುಖಂಡರಾದ ಕೋಟೆರಂಗನಾಥ್, ಸೋಮಶೇಖರ್, ರವೀಂದ್ರ ಬೆಳಬಾಡಿ, ಡಾ.ನರೇಂದ್ರ, ಹಿರೇಮಗಳೂರು ಪುಟ್ಟಸ್ವಾಮಿ, ದಿನೇಶ್ ಮತ್ತಿತರರಿದ್ದರು.

An hour-long sit-in by BJP to resolve the Waqf land issue

Facebook
X
WhatsApp
Telegram
Spread the love

ಚಿಕ್ಕಮಗಳೂರು: ಬಹಳರ್ಷ ವರ್ಷಗಳ ಹಿಂದೆ ಬಯಲು ಸೀಮೆಯ ಜನರ ಜೀವನಾಡಿಯಾಗಿದ್ದು ಇದೀಗ ಜೀರ್ಣಾವಸ್ಥೆಯಲ್ಲಿರುವ ಸಖರಾಯಪಟ್ಟಣ ಸಮೀಪ ಜಾನ್ಸಾಲೆ ಗ್ರಾಮದ ಲಕ್ಸಾಗರ…

Spread the love

ಚಿಕ್ಕಮಗಳೂರು: ಮುಂದಿನ ಎರಡು ವರ್ಷದಲ್ಲಿ ಚಿಕ್ಕಮಗಳೂರು-ಹಾಸನ ರೈಲು ಸಂಚಾರ ಆರಂಭವಾಗಲಿದೆ ಎಂದು ರೈಲ್ವೇ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದರು.…

Spread the love

ಚಿಕ್ಕಮಗಳೂರು: ಬಹಳರ್ಷ ವರ್ಷಗಳ ಹಿಂದೆ ಬಯಲು ಸೀಮೆಯ ಜನರ ಜೀವನಾಡಿಯಾಗಿದ್ದು ಇದೀಗ ಜೀರ್ಣಾವಸ್ಥೆಯಲ್ಲಿರುವ ಸಖರಾಯಪಟ್ಟಣ ಸಮೀಪ ಜಾನ್ಸಾಲೆ ಗ್ರಾಮದ ಲಕ್ಸಾಗರ…

Spread the love

ಚಿಕ್ಕಮಗಳೂರು: ಮುಂದಿನ ಎರಡು ವರ್ಷದಲ್ಲಿ ಚಿಕ್ಕಮಗಳೂರು-ಹಾಸನ ರೈಲು ಸಂಚಾರ ಆರಂಭವಾಗಲಿದೆ ಎಂದು ರೈಲ್ವೇ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದರು.…

[t4b-ticker]
Exit mobile version