ALSO FEATURED IN

Elderly couple murdered:ಮೊಮ್ಮಗನಿಂದ ವೃದ್ದ ದಂಪತಿಯ ಕೊಲೆ

Spread the love

ಚಿಕ್ಕಮಗಳೂರು: ಹಣಕಾಸಿನ ವಿಚಾರಕ್ಕೆ ವೃದ್ಧ ದಂಪತಿಯನ್ನು ಮೊಮ್ಮಗನೇ ಹತ್ಯೆ ಮಾಡಿರುವ ಘಟನೆ ತಾಲೂಕಿನ ಮಲ್ಲಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೊಳಗಾಮೆ ಗ್ರಾಮದಲ್ಲಿ ನಡೆದಿದೆ. ಹತ್ಯೆ ಮಾಡಿದ ಮೊಮ್ಮಗ ಪರಾರಿಯಾಗಿದ್ದಾನೆ.

ಮೂಲತಃ ಗುಬ್ಬಿಯವರಾದ ಬಸಪ್ಪ (೬೫) ಅವರ ಪತ್ನಿ ಲಲಿತಮ್ಮ (೫೮) ಮೊಮ್ಮಗನಿಂದ ಹತ್ಯೆಯಾಗಿದ್ದು, ಹತ್ಯೆ ಮಾಡಿದ ನಿಶಾಂತ್ ಪರಾರಿಯಾಗಿದ್ದು ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

ಘಟನೆ ವಿವರ: ಚಿಕ್ಕಮಗಳೂರು ತಾಲೂಕು ಮಲ್ಲಂದೂರು ಕೊಳಗಾಮೆ ಗ್ರಾಮದ ಮೊಗಣ್ಣಗೌಡ ಎಂಬವರ ಕಾಫಿತೋಟದಲ್ಲಿ ಕಳೆದ ೨೫ ವರ್ಷಗಳಿಂದ ಕೂಲಿ ಕೆಲಸ ಮಾಡಿಕೊಂಡಿದ್ದ ಈ ವೃದ್ಧ ದಂಪತಿ ಕೊಳಗಾಮೆ ಗ್ರಾಮದಲ್ಲಿ ವಾಸವಾಗಿದ್ದರು. ಬುಧವಾರ ರಾತ್ರಿ ಬಸಪ್ಪನ ಅಣ್ಣನ ಮಗಳ ಮಗನಾದ ನಿಶಾಂತ್ ಬಸಪ್ಪನ ಮನೆಗೆ ಬಂದಿದ್ದು, ಮೊಮ್ಮಗನಾದ ನಿಶಾಂತ್ ಹಣಕಾಸಿನ ವಿಚಾರಕ್ಕೆ ಬಸಪ್ಪ ಹಾಗೂ ಲೀಲಪ್ಪ ದಂಪತಿಗೆ ದೊಣ್ಣೆಯಿಂದ ಹಲ್ಲೆ ಮಾಡಿದ್ದಾನೆ. ಹಲ್ಲೆಯಿಂದ ದಂಪತಿ ತೀವ್ರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ.

ಮೊಮ್ಮಗ ನಿಶಾಂತ್ ಬೆಂಗಳೂರಿನಲ್ಲಿದ್ದು, ಆಗಾಗ್ಗೆ ಬಸಪ್ಪ, ಲೀಲಮ್ಮ ಅವರ ಮನೆಗೆ ಬಂದು ಹಣಕ್ಕಾಗಿ ಪೀಡಿಸುತ್ತಿದ್ದ ಎನ್ನ ಲಾಗುತ್ತಿದ್ದು, ಮೃತದೇಹಗಳನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.

ಸ್ಥಳಕ್ಕೆ ಮಲ್ಲಂದೂರು ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಕೊಳಗಾಮೆ ಗ್ರಾಮದಲ್ಲಿ ವೃದ್ಧ ದಂಪತಿಗೆ ಸಂಬಂಧಿಕರು ಇಲ್ಲದ ಕಾರಣಕ್ಕೆ ಗುಬ್ಬಿಯಲ್ಲಿರುವ ಮೃತರ ಸಂಬಂಧಿಗಳಿಗೆ ಮಾಹಿತಿ ನೀಡಲಾಗಿದೆ. ವೃದ್ಧ ದಂಪತಿಯನ್ನು ಹತ್ಯೆ ಮಾಡಿ ಪರಾರಿಯಾಗಿರುವ ಮೊಮ್ಮಗ ನಿಶಾಂತ್ ಬಂಧನಕ್ಕೆ ಮಲ್ಲಂದೂರು ಪೊಲೀಸರು ಬಲೆ ಬೀಸಿದ್ದಾರೆ.

Elderly couple murdered by grandson

Facebook
X
WhatsApp
Telegram
Spread the love

ಚಿಕ್ಕಮಗಳೂರು: ಭಕ್ತಿ, ಧಾರ್ಮಿಕತೆ, ವೈಚಾರಿಕತೆಯ ಮೌಲ್ಯಗಳನ್ನು ಜನರ ಮನಸ್ಸಿನಲ್ಲಿ ಬಿತ್ತುವ ಸಲುವಾಗಿ ಸೆ.೧ ರಂದು ಬಸವಣ್ಣನವರ ಜನ್ಮಸ್ಥಳ ಬಸವನ ಬಾಗೇವಾಡಿಯಿಂದ…

Spread the love

ಚಿಕ್ಕಮಗಳೂರು: ಹಿಂದುತ್ವವನ್ನು ಗಟ್ಟಿಗೊಳಿಸಲು ಧಾರ್ಮಿಕವಾಗಿ ಎಲ್ಲರೂ ಒಗ್ಗಟ್ಟಿನಿಂದ ಭಾಗವಹಿಸಿ ಆಚರಿಸುವುದೇ ಸಾರ್ವಜನಿಕ ಗಣೇಶೋತ್ಸವದ ಪ್ರಮುಖ ಉದ್ದೇಶ ಎಂದು ಶಾಸಕ ಹೆಚ್.ಡಿ.…

Spread the love

ಚಿಕ್ಕಮಗಳೂರು: ಭಕ್ತಿ, ಧಾರ್ಮಿಕತೆ, ವೈಚಾರಿಕತೆಯ ಮೌಲ್ಯಗಳನ್ನು ಜನರ ಮನಸ್ಸಿನಲ್ಲಿ ಬಿತ್ತುವ ಸಲುವಾಗಿ ಸೆ.೧ ರಂದು ಬಸವಣ್ಣನವರ ಜನ್ಮಸ್ಥಳ ಬಸವನ ಬಾಗೇವಾಡಿಯಿಂದ…

Spread the love

ಚಿಕ್ಕಮಗಳೂರು: ಹಿಂದುತ್ವವನ್ನು ಗಟ್ಟಿಗೊಳಿಸಲು ಧಾರ್ಮಿಕವಾಗಿ ಎಲ್ಲರೂ ಒಗ್ಗಟ್ಟಿನಿಂದ ಭಾಗವಹಿಸಿ ಆಚರಿಸುವುದೇ ಸಾರ್ವಜನಿಕ ಗಣೇಶೋತ್ಸವದ ಪ್ರಮುಖ ಉದ್ದೇಶ ಎಂದು ಶಾಸಕ ಹೆಚ್.ಡಿ.…

[t4b-ticker]
Exit mobile version