ALSO FEATURED IN

Hirekolale village:ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ವಿಶೇಷ ಆದ್ಯತೆ

Spread the love

ಚಿಕ್ಕಮಗಳೂರು- ಪ್ರತೀ ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು ಸರ್ಕಾರ ೨೫ ಕೋಟಿ ರೂ ವಿಶೇಷ ಅನುದಾನ ಬಿಡುಗಡೆ ಮಾಡಿದ್ದು, ಇದರಲ್ಲಿ ಪ್ರತೀ ಕ್ಷೇತ್ರಕ್ಕೆ ಗ್ರಾಮಾಂತರ ಭಾಗದ ರಸ್ತೆಗಳ ಅಭಿವೃದ್ಧಿಗೆ ೧೫ ಕೋಟಿ ರೂ ಅನುದಾನವನ್ನು ಮೀಸಲಿಡಲಾಗಿದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ತಿಳಿಸಿದರು.

ಅವರು ಇಂದು ಹಿರೇಕೊಳಲೆ ಗ್ರಾಮದಲ್ಲಿ ಸುಮಾರು ೨೦ ಲಕ್ಷ ರೂ ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿ ಕ್ಷೇತ್ರದ ಪ್ರತೀ ಪಂಚಾಯಿತಿಗೆ ೨೫ ರಿಂದ ೩೦ ಲಕ್ಷ ರೂ ಅನುದಾನವನ್ನು ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಮೀಸಲಿಡಲಾಗಿದೆ ಎಂದರು,

ಸರ್ಕಾರ ಬಂದ ಒಂದೂವರೆ ವರ್ಷಗಳ ನಂತರ ಅಭಿವೃದ್ಧಿಗೆ ಆದ್ಯತೆ ನೀಡಿ ಕೆಲಸ ಮಾಡುತ್ತಿದ್ದು, ಇದಕ್ಕೂ ಮೊದಲು ಚುನಾವಣೆ ಪೂರ್ವದಲ್ಲಿ ಘೋಷಿಸಿದ್ದ ಪಂಚ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಕ್ಕೆ ತರಲಾಗಿದೆ ಎಂದರು.

ಹೊಸಪುರ ರಸ್ತೆಗೆ ೫೦ ಲಕ್ಷ ರೂ ವೆಚ್ಚದ ರಸ್ತೆ ಕಾಮಗಾರಿ ಪೂರ್ಣಗೊಂಡಿದ್ದು, ಸಧ್ಯದಲ್ಲೇ ಉದ್ಘಾಟನೆಗೆ ಸಿದ್ದಗೊಂಡಿದೆ. ಜಾತಿ ಆಧಾರಿತ ಮಾಡದೆ ಪಕ್ಷಾತೀತವಾಗಿ ಸರ್ವ ಜನಾಂಗದವರ ಅಭಿವೃದ್ಧಿಗೆ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಒಟ್ಟುಗೂಡಿ ಅಭಿವೃದ್ಧಿ ಕೆಲಸ ಮಾಡುತ್ತೇವೆ ಎಂದು ಹೇಳಿದರು.

ಕ್ಷೇತ್ರದ ಜನತೆಗೆ ಒಳ್ಳೆಯ ಆರೋಗ್ಯ ಕಲ್ಪಿಸಲು ಇನ್ನು ಎರಡು ವರ್ಷದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸಾರ್ವಜನಿಕ ಸಮರ್ಪಣೆಯಾಗಲಿದೆ. ದೀನದಲಿತರ, ಬಡವರ ಪರವಾಗಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕೆಲಸ ಮಾಡುತ್ತಿದ್ದು, ಈ ನಿಟ್ಟಿನಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಎಲ್ಲರ ಸಹಕಾರ ಅಗತ್ಯ ಎಂದರು.

ಕಾರ್ಯಕ್ರಮದಲ್ಲಿ ಹಿರೇಕೊಳಲೆ ಗ್ರಾ.ಪಂ ಅಧ್ಯಕ್ಷೆ ಕವಿತಾ ಸುನಿಲ್‌ಕುಮಾರ್, ಎಪಿಎಂಸಿ ಸಂಸ್ಕರಣಾ ಘಟಕದ ಅಧ್ಯಕ್ಷ ಬಿ.ಹೆಚ್. ಹರೀಶ್, ಬೆಟ್ಟೆಗೆರೆ ಪ್ರವೀಣ್, ಪ್ರಕಾಶ್, ಬೀಕನಹಳ್ಳಿ ನಾಗಭೂಷಣ್, ಜಯರಾಮ್, ಶಿವಕುಮಾರ್, ಪ್ರಕಾಶ್, ಪ್ರವೀಣ್, ವಸಂತ ಮತ್ತಿತರರು ಉಪಸ್ಥಿತರಿದ್ದರು.

guddalipuja for the construction of concrete road in Hirekolale village

Facebook
X
WhatsApp
Telegram
Spread the love

ಚಿಕ್ಕಮಗಳೂರು: ಕೇಂದ್ರ ಕಾಫಿ ಮಂಡಳಿ ಅಧ್ಯಕ್ಷ ಎಂ.ಜೆ.ದಿನೇಶ್ ಮತ್ತು ಕರ್ನಾಟಕ ಬೆಳಗಾರರ ಒಕ್ಕೂಟದ ಅಧ್ಯಕ್ಷ ಹಳಸೆ ಶಿವಣ್ಣನವರ ನೇತೃತ್ವದಲ್ಲಿ ಮೂಡಿಗೆರೆ…

Spread the love

ಚಿಕ್ಕಮಗಳೂರು: ಕವಿತೆಗಳು ಮಾನಸಿಕವಾಗಿ ಒಂದು ಅನುಭವ ಶೋಧಕ್ಕೆ ದಾರಿ ತೆರೆದು ಕೊಡುತ್ತವೆ; ಹಾಗೆಯೇ ಅವು ಹೃದಯದಲ್ಲಿ ವೈವಿಧ್ಯತೆಯ ಭಾವನೆಗಳನ್ನು ಮೀಟುತ್ತಾ…

Spread the love

ಚಿಕ್ಕಮಗಳೂರು: ಈ ಬಾರಿಯ ಸಂಸತ್ ಅಧಿವೇಶನದಲ್ಲಿ ರಾಜ್ಯದ ಕಾಫಿ ಬೆಳೆಯುವ ಪ್ರದೇಶದ ಸಂಸದರು ಒಟ್ಟಿಗೆ ಸೇರಿ ದೆಹಲಿಯಲ್ಲಿ ಸರ್ಫೇಸಿ ಕಾಯ್ದೆಯನ್ನು ಕಾಫಿ…

[t4b-ticker]
Exit mobile version