ಚಿಕ್ಕಮಗಳೂರು: ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್ಗಳಲ್ಲಿ ನಕ್ಸಲ್ ಚಟುವಟಿಕೆಗಳು ನಡೆಯುತ್ತಿದ್ದವು ಎಂದು ಹೇಳಿಕೆ ನೀಡಿರುವ ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿಯವರ ವರ್ತನೆ ದಲಿತ ಸಂಘರ್ಷ ಸಮಿತಿ ತೀರ್ವವಾಗಿ ಖಂಡಿಸಿದ ಪತ್ರಿಕಾಗೋಷ್ಠಿಯಲ್ಲಿ ಇಂದು ಮಾತನಾಡಿದ ದಲಿತಪರ ಸಂಘಟನೆಗಳ ಒಕ್ಕೂಟದ ದಂಟರಮಕ್ಕಿ ಶ್ರೀನಿವಾಸ್ ಇವರ ಹೇಳಿಕೆಯನ್ನು ಪೊಲೀಸ್ ಇಲಾಖೆ ಕೂಡಲೇ ತನಿಖೆಗೆ ಒಳಪಡಿಸಬೇಕೆಂದು ಒತ್ತಾಯಿಸಿದರು.
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ತಾಲ್ಲೂಕು ಕೆ.ಡಿ.ಪಿ ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನೆ ವೇಳೆ ಮಾಜಿ ಶಾಸಕ ಸಿ.ಟಿ ರವಿಯವರು ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್ಗಳಲ್ಲಿ ನಕ್ಸಲರು ತಮ್ಮ ಚಟುವಟಿಕೆಗಳನ್ನು ವಿಸ್ತರಿಸಲು ದುರ್ಬಳಕೆ ಮಾಡಿಕೊಳ್ಳುತ್ತಿದ್ದರು ಹಾಗೂ ನಕ್ಸಲರು ಹಾಸ್ಟೆಲ್ಗಳಲ್ಲೇ ಉಳಿದುಕೊಂಡು ತಮ್ಮ ವಿಚಾರಗಳನ್ನು ಬೆಳೆಸುವಂತಹ ಕೆಲಸ ಮಾಡುತ್ತಿದ್ದರು ಎಂದು ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿದರು.
ಈ ಹೇಳಿಕೆಯಿಂದ ಹಾಸ್ಟೆಲ್ನಲ್ಲಿ ಇರುವ ಎಲ್ಲಾ ವಿದ್ಯಾರ್ಥಿಗಳಿಗೆ ಮಾಡಿರುವ ಅಪಮಾನವಾಗಿದೆ. ಕೂಡಲೇ ಸಿ.ಟಿ ರವಿ ಬಹಿರಂಗವಾಗಿ ಕ್ಷಮೆ ಯಾಚಿಸಬೇಕು. ಒಂದು ವೇಳೆ ಇಂತಹ ಘಟನೆಗಳು ನಡೆದಿದ್ದರೆ ಕಳೆದ ೨೦ ವ?ಗಳ ಕಾಲ ಶಾಸಕರಾಗಿ, ಸಚಿವರಾಗಿ, ಇಲ್ಲೇ ಇದ್ದ ಸಿ.ಟಿ ರವಿ ಅವರು ಅದರ ಬಗ್ಗೆ ಏಕೆ ತನಿಖೆ ನಡೆಸದೆ ಸುಮ್ಮನೆ ಇದ್ದರು ಎಂದು ಪ್ರಶ್ನಿಸಿದರು.
ಸಮಾಜ ಕಲ್ಯಾಣ ಇಲಾಖೆ ಹಾಸ್ಟೆಲ್ನಲ್ಲಿ ಬಹುತೇಕ ದಲಿತ ಸಮುದಾಯದ ವಿದ್ಯಾರ್ಥಿಗಳು ಇರುವುದರಿಂದ ಇವರು ದಲಿತ ಸಮುದಾಯಕ್ಕೆ ನಕ್ಸಲ್ ಪಟ್ಟ ಕಟ್ಟಲು ಮುಂದಾದಂತಿದೆ. ಈ ಕೂಡಲೇ ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಈ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿ ಇವರ ವಿರುದ್ಧ ಪ್ರಕರಣ ದಾಖಲಿಸಿ ತನಿಖೆಗೆ ನಡೆಸಬೇಕೆಂದು ಆಗ್ರಹಿಸಿದರು.
ಹೋರಾಟಗಾರರನ್ನು ತಪ್ಪು ದಾರಿಗೆ ಕರೆದೊಯ್ಯುವ ಅಥವಾ ಪ್ರೆರೇಪಿಸುವ ಕೆಲಸವನ್ನು ಯಾರು ಕೂಡ ಮಾಡಬಾರದು. ಈ ಸಂಬಂಧ ಹೇಳಿಕೆ ನೀಡಿರುವ ಮಾಜಿ ಶಾಸಕ ಸಿ.ಟಿ ರವಿ ಬಹಿರಂಗ ಕ್ಷಮೆ ಯಾಚಿಸದಿದ್ದಲ್ಲಿ ದ.ಸಂ.ಸ ಇವರ ವಿರುದ್ದ ಹೋರಾಟವನ್ನು ರೂಪಿಸುತ್ತದೆ ಎಂದು ಎಚ್ಚರಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಸಮಿತಿ ಮುಖಂಡರಾದ ಕೆ.ಸಿ ವಸಂತಕುಮಾರ್ ಸಂತೋಷ್, ನಟರಾಜ್, ಪುಟ್ಟಸ್ವಾಮಿ, ಅಣ್ಣಯ್ಯ ಇದ್ದರು
Coalition of pro-Dalit organizations demands public apology from C.T. Ravi