ಚಿಕ್ಕಮಗಳೂರು: ರಾಜ್ಯದಲ್ಲಿ ನಡೆದ ಮೂರು ಕ್ಷೇತ್ರಗಳಲ್ಲಿನ ಉಪಚುನಾವಣೆ ಗೆಲುವು, ಕೇರಳದ ವಯನಾಡಿನಲ್ಲಿ ಪ್ರಿಯಾಂಕ ಗಾಂಧಿ ಭಾರಿ ಗೆಲುವು ಹಾಗೂ ಜಾರ್ಖಂಡ್ನಲ್ಲಿ ಕಾಂಗ್ರೆಸ್ ಮೈತ್ರಿಕೂಟ ಅಧಿಕಾರಕ್ಕೇರಿದ ಹಿನ್ನೆಲೆಯಲ್ಲಿ ಶನಿವಾರ ಕಾಂಗ್ರೆಸ್ ಕಾರ್ಯಕರ್ತರು ನಗರದ ಹನುಮಂತಪ್ಪ ವೃತ್ತದಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಿದರು.
ಈ ವೇಳೆ ಮಾತನಾಡಿದ ಶಾಸಕ ಎಚ್.ಡಿ.ತಮ್ಮಯ್ಯ, ರಾಜ್ಯದಲ್ಲಿನ ಉಪಚುನಾವಣೆಯಲ್ಲಿ ಎಲ್ಲಾ ಲೆಕ್ಕಾಚಾರಗಳನ್ನು ಉಲ್ಟಾ ಮಾಡಿರುವ ಜನ ಕಾಂಗ್ರೆಸ್ ಅಭ್ಯರ್ಥಿಗಳನ್ನು ಹೆಚ್ಚಿನ ಮತಗಳ ಅಂತರದಿAದ ಗೆಲ್ಲಿಸಿದ್ದಾರೆ. ಕೇರಳದ ವಯನಾಡಿನಲ್ಲಿ ಪ್ರಿಯಾಂಕ ಗಾಂಧಿ ೩ ಲಕ್ಷಕ್ಕೂ ಮತಗಳ ಅಂತರದಿAದ ಗೆದ್ದು ಬಿಗಿದ್ದಾರೆ. ಜಾರ್ಖಂಡ್ ನಲ್ಲಿ ಕಾಂಗ್ರೆಸ್ ಮೈತ್ರಿಕೂಟ ಅಧಿಕಾರಕ್ಕೆ ಬಂದಿದೆ. ಇದೆಲ್ಲವನ್ನು ಗಮನಿಸಿದಾಗ ದೇಶದ ಜನ ಕಾಂಗ್ರೆಸ್ ಜೊತೆಗೆ ಇರುವುದು ದೃಢಪಟ್ಟಿದೆ ಎಂದರು.
ಸಿಎA ಸಿದ್ದರಾಮಯ್ಯ ಅವರು ಧೀಮಂತ ನಾಯಕ. ಆದರೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಬಿಜೆಪಿ ನಾಯಕರು ಸಿದ್ದರಾಮಯ್ಯ ಅವರ ಮೇಲೆ ಇಲ್ಲಸಲ್ಲದ ಆರೋಪ ಮಾಡಿ ತನಿಖೆಯಾಗುವಂತೆ ಮಾಡಿದರು. ಉಪಚುನಾವಣೆ ಸಂದರ್ಭದಲ್ಲಿ ಸರ್ಕಾರ ಹಾಗೂ ಸಿಎಂ ವಿರುದ್ಧ ಅಪಪ್ರಚಾರ ಮಾಡುವ ಕೆಲಸವಾಯಿತು. ಆದರೆ ಸತ್ಯವನ್ನು ಅರಿತಿದ್ದ ಜನ ಅಪಪ್ರಚಾರ ಮಾಡುವವರಿಗೆ ಉಪಚುನಾವಣೆಯಲ್ಲಿ ತಕ್ಕ ಪಾಠ ಕಲಿಸಿದ್ದಾರೆ ಎಂದು ಹೇಳಿದರು.
ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳಿಂದ ಜನರಿಗೆ ಸಹಾಯವಾಗಿದೆ. ಇದಕ್ಕೆ ಉಪಚುನಾವಣಾ ಫಲಿತಾಂಶವೇ ಸಾಕ್ಷಿ. ಇನ್ನಾದರೂ ವಿಪಕ್ಷದವರು ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಪ್ರಚಾರ ಮಾಡುವುದನ್ನು ಬಿಡಬೇಕು ಎಂದು ಸಲಹೆ ನೀಡಿದರು.
ವಿಧಾನ ಪರಿಷತ್ ಮಾಜಿ ಸದಸ್ಯೆ ಗಾಯತ್ರಿ ಶಾಂತೇಗೌಡ ಮಾತನಾಡಿ, ಮೂಡ ಹಗರಣ, ವಾಲ್ಮೀಕಿ ಹಗರಣ ಎಂದು ರಾಜ್ಯ ಸರ್ಕಾರದ ವಿರುದ್ಧ ಸುಳ್ಳು ಆರೋಪ ಮಾಡುವ ಮೂಲಕ ಮೂರೂ ಕ್ಷೇತ್ರಗಳ ಉಪಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ನಾಯಕರಿದ್ದರು. ಆದರೆ ಅವರ ಸುಳ್ಳಿನ ಪ್ರಯತ್ನ ಫಲಿಸಲಿಲ್ಲ. ೨೦೨೮ರ ಚುನಾವಣೆಯಲ್ಲಿಯೂ ಇದೇ ಫಲಿತಾಂಶವೇ ಬರಲಿದೆ ಎಂದು ಭವಿಷ್ಯ ನುಡಿದರು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎಲ್.ಮೂರ್ತಿ ಮಾತನಾಡಿ, ಮುಂದಿನ ದಿನಗಳಲ್ಲಿ ಪ್ರಿಯಾಂಕ ಗಾಂಧಿ ಅವರ ಮೂಲಕ ಇಂದಿರಾಗಾAಧಿ ಅವರೇ ದೇಶವನ್ನು ಮುನ್ನಡೆಸಲಿದ್ದಾರೆ. ಈ ಮೂಲಕ ದೇಶದಲ್ಲಿನ ಬಡವರ ಕೈಗೆ ಅಧಿಕಾರ ಸಿಗಲಿದೆ ಎಂದು ಹೇಳಿದರು.
ದೇಶದಲ್ಲಿ ಬಿಜೆಪಿಯವರು ಗೆದ್ದು ಅಧಿಕಾರದ ಚುಕ್ಕಾಣಿ ಹಿಡಿದರೂ ಜನರನ್ನು ಉದ್ದಾರ ಮಾಡಲಿಲ್ಲ. ಬದಲಿಗೆ ಮೂರನೇ ದರ್ಜೆ ರಾಜಕಾರಣ ಮಾಡುವ ಮೂಲಕ ತಮ್ಮ ವಿರೋಧಿಗಳನ್ನು ಹಣಿಯುವ ಕೆಲಸಕ್ಕೆ ಮುಂದಾಗಿದ್ದರು. ಇಂಥ ಪ್ರವೃತ್ತಿಗೆ ಜನ ತಕ್ಕ ಪಾಠ ಕಲಿಸಿದ್ದಾರೆ ಎಂದು ತಿಳಿಸಿದರು.
ವಿಜಯೋತ್ಸವದಲ್ಲಿ ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ ರಫ್ತು ನಿಗಮದ ಅಧ್ಯಕ್ಷ ಬಿ.ಎಚ್. ಹರೀಶ್, ಮಾಜಿ ಸಚಿವ ಬಿ.ಬಿ. ನಿಂಗಯ್ಯ, ಮಾಜಿ ಶಾಸಕ ಎಂ.ಪಿ. ಕುಮಾರಸ್ವಾಮಿ, ಚಿಕ್ಕಮಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನಯಾಜ್, ಜಿಪಂ ಮಾಜಿ ಅಧ್ಯಕ್ಷೆ ರೇಖಾ ಹುಲಿಯಪ್ಪಗೌಡ, ಜಿಲ್ಲಾ ಕಾಂಗ್ರೆಸ್ನ ಮಾಜಿ ಅಧ್ಯಕ್ಷ ಡಾ. ಡಿ.ಎಲ್. ವಿಜಯಕುಮಾರ್, ಚಿಕ್ಕಮಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜೇಗೌಡ, ಹಿರೇಮಗಳೂರು ರಾಮಚಂದ್ರ, ಪುಟ್ಟೇಗೌಡ, ಉಪ್ಪಳ್ಳಿ ಕೆ. ಭರತ್, ಪುಟ್ಟೇಗೌಡ ಬಿಳೇಕಲ್ಲು ಮತ್ತಿತರರಿದ್ದರು.
By-election victory – Congress celebrates victory in the coffee country