ALSO FEATURED IN

State farmer protest march:ತಾಲ್ಲೂಕು ಕಛೇರಿಯಿಂದ ಜಿಲ್ಲಾಧಿಕಾರಿಗಳ ಕಛೇರಿಯವರೆಗೆ ಪ್ರತಿಭಟನಾ ಮೆರವಣಿಗೆ

Spread the love

ಚಿಕ್ಕಮಗಳೂರು: ಕಾಡಾನೆಗಳನ್ನು ಸ್ಥಳಾಂತರಿಸಿ ರೈತರ ಬೆಳೆ ರಕ್ಷಿಸಿ, ಜೀವ ಹಾನಿ ತಪ್ಪಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನ.೨೭ರಂದು ಬೆಳಿಗ್ಗೆ ೧೧ ಗಂಟೆಗೆ ನಗರದ ತಾಲ್ಲೂಕು ಕಛೇರಿಯಿಂದ ಜಿಲ್ಲಾಧಿಕಾರಿಗಳ ಕಛೇರಿಯವರೆಗೆ ಪ್ರತಿಭಟನಾ ಮೆರವಣಿಗೆ ಮತ್ತು ಅರಣ್ಯ ಇಲಾಖೆ ಕಛೇರಿ ಮುತ್ತಿಗೆ ಕಾರ್ಯಕ್ರಮ ನಡೆಸಲಾಗುವುದು ಎಂದು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಗುರುಶಾಂತಪ್ಪ ತಿಳಿಸಿದರು.

ನಗರದಲ್ಲಿಂದು ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಈ ಪ್ರತಿಭಟನಾ ಮೆರವಣಿಗೆಯಲ್ಲಿ ಆನೆಗಳ ಹಾವಳಿಯಿಂದ ಬೆಳೆ ಕಳೆದುಕೊಂಡಿರುವ ರೈತ ಕುಟುಂಬಗಳು ಭಾಗವಹಿಸಿದ್ದು ಅವರೊಂದಿಗೆ ರೈತರು, ರೈತ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು.

ಮೂಡಿಗೆರೆ ವಿಧಾನಸಭಾ ಕ್ಷೇತ್ರದ ಸುಮಾರು ೧೦ ಗ್ರಾಮಗಳಲ್ಲಿ ಕಳೆದ ೨೦ ದಿನಗಳಿಂದ ಬೀಟಮ್ಮ ತಂಡದ ೨೭ ಕಾಡಾನೆಗಳ ಹಿಂಡು ಭಾರಿ ಅವಾಂತರ ಸೃಷ್ಟಿಸುತ್ತಿವೆ.ರೈತರು ಕಷ್ಟಪಟ್ಟು ಬೆಳೆದ ಭತ್ತ, ಶುಂಠಿ, ಮೆಕ್ಕೆಜೋಳ, ಕಾಫಿ ಬೆಳೆಗಳ ಜಮೀನಿಗೆ ನುಗ್ಗಿ ಲೂಟಿ ಮಾಡುತ್ತಿವೆ. ಕಾಫಿ ತೋಟಕ್ಕೆ ದಿಬ್ಬಂಧನ ಹಾಕಿ ಸೈರನ್ ವಾಹನಗಳ ಓಡಾಟ ನಡೆಸಿ ಪಟಾಕಿಗಳನ್ನು ಸಿಡಿಸಿದ ಪರಿಣಾಮದಿಂದ ಕಾಫಿ ತೋಟದಲ್ಲಿದ್ದ ಆನೆಗಳು ಬೆದರಿ ಇಡಿ ತೋಟದೊಳಗೆಲ್ಲ ಓಡಾಡಿ ಕಾಫಿ ಗಿಡಗಳನ್ನು ಬೇರು ಸಮೇತ ಕಿತ್ತು ತುಳಿದುಹಾಕುತ್ತಿವೆ ಎಂದು ಹೇಳಿದರು.

೨೫-೩೦ ವರ್ಷಗಳಿಂದ ಕಷ್ಟಪಟ್ಟು ಬೆಳೆಸಿ ಫಸಲು ಕಟಾವಿಗೆ ಬಂದಿದ್ದು ಕಾಡಾನೆಗಳ ಹಾವಳಿಯಿಂದ ಸಾವಿರಾರು ಕಾಫಿ ಗಿಡಗಳು ನಾಶವಾಗಿ ಬೆಳೆಗಾರರು ಕಂಗಾಲಾಗಿದ್ದಾರೆ. ಅರಣ್ಯ ಇಲಾಖೆ ಸಿಬ್ಬಂದಿಗಳು ಆನೆಗಳನ್ನು ಸ್ವಸ್ಥಾನಕ್ಕೆ ಸೇರಿಸುವ ಕೆಲಸ ಮಾಡುತ್ತಿಲ್ಲ. ಬಾರಿ ಅರಣ್ಯ ಇಲಾಖೆಯ ಗಮನಕ್ಕೆ ಕಾಡಾನೆಗಳ ಹಾವಳಿಯ ಬಗ್ಗೆ ತಿಳಿಸಿದ್ದು ಅರಣ್ಯ ಇಲಾಖೆಯ ಸಿಬ್ಬಂದಿಗಳು ಬರೆ ಸಿದ್ದ ಉತ್ತರ ಕೊಡುತ್ತಿದ್ದಾರೆ ಎಂದು ಆರೋಪಿಸಿದರು.

ಕಾಫಿ ಕೊಯ್ಲಿನ ಸಮಯವಾದರಿಂದ ರಾಜ್ಯದ ವಿವಿಧ ಭಾಗಗಗಳಿಂದ ಬಂದಿರುವ ವಲಸೆ ಕಾರ್ಮಿಕರು ಊರಿನ ಹೊರವಲಯದಲ್ಲಿ ಸಂಸಾರ ಸಮೇತ ತಾತ್ಕಾಲಿಕ ಶೆಡ್ಡುಗಳನ್ನು ನಿರ್ಮಿಸಿಕೊಂಡು ಕೂಲಿ ಕೆಲಸ ಮಾಡುತ್ತಿದ್ದು ಕಾಡಾನೆಗಳ ಭಯದಲ್ಲಿ ಇವರೆಲ್ಲರೂ ಜೀವಗಳನ್ನು ಕೈಹಿಡಿದು ಬದುಕುತ್ತಿದ್ದಾರೆ ಎಂದು ಹೇಳಿದರು.

ಹಿಂಡಾಗಿ ಬರುತ್ತಿದ್ದ ಆನೆಗಳು ಈಗ ಒಂಟಿಯಾಗಿ ಸುತ್ತುತ್ತಿರುವುದಾಗಿ ಗ್ರಾಮಸ್ಥರುಗಳು ಹೇಳುತ್ತಿದ್ದು, ನಮಗೆ ಯಾವಾಗ ಆನೆಗಳು ಅಪಾಯ ತಂದೊಡ್ಡುತ್ತವೋ ಎಂಬ ಭಯ ಕಾಡುತ್ತಿರುವುದಾಗಿ ಅಳಲು ತೋಡಿಕೊಳ್ಳುತ್ತಿದ್ದಾರೆ. ರೈತರ ಜಮೀನುಗಳಿಗೆ ನುಗ್ಗಿ ಹಾನಿ ಮಾಡುವುದನ್ನು ಅರಣ್ಯ ಇಲಾಖೆ ಸಿಬ್ಬಂದಿಗಳು ತಪ್ಪಿಸಲು ಕ್ರಮ ಕೈಗೊಳ್ಳಬೇಕು. ವೈಜ್ಞಾನಿಕ ವಿಧಾನಗಳ ಮೂಲಕ ಸ್ವಸ್ಥಾನಕ್ಕೆ ಆನೆಗಳನ್ನು ಓಡಿಸಬೇಕೆಂದು ಆಗ್ರಹಿಸಿದರು.

ಆಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಂಬಳೆ ವಲಯದ ಫಾರೆಸ್ಟರ್ ರಮೇಶ್ ಎಂಬುವವರು ರೈತರೊಂದಿಗೆ ಉಢಾಪೆ ವರ್ತನೆ ತೋರುತ್ತಿದ್ದು ಕೂಡಲೇ ಅವರನ್ನು ವರ್ಗಾವಣೆ ಮಾಡಬೇಕೆಂದು ಒತ್ತಾಯಿಸಿದರು.

ಬೆಳೆ ನಷ್ಟ ಗೊಂಡಿರುವ ರೈತರಿಗೆ ಅರಣ್ಯ ಇಲಾಖೆ ನೀಡುತ್ತಿರುವ ಪರಿಹಾರದ ಮೊತ್ತ ಆನೆ ಹೊಟ್ಟೆಗೆ ಅರೆ ಕಾಸಿನ ಮಜ್ಜಿಗೆಯಂತಾಗಿದ್ದು ಪ್ರಸ್ತುತ ನೀಡುತ್ತಿರುವ ಪರಿಹಾರದ ಮೊತ್ತವನ್ನು ದ್ವಿಗುಣಗೊಳಿಸಬೇಕು, ಜಿಲ್ಲಾಧಿಕಾರಿಗಳು ಕೂಡಲೇ ರೈತರು, ಬೆಳೆಗಾರರು, ಅರಣ್ಯ ಇಲಾಖೆ, ಕಂದಾಯ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಬರುವ ಸಲಹೆಗಳನ್ನಾಧರಿಸಿ ಸರ್ಕಾರಕ್ಕೆ ವಾಸ್ತವ್ಯ ವರದಿ ಸಲ್ಲಿಸುವಂತೆ ಕೋರಿದರು.

ಈ ಗೋಷ್ಠಿಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಿ. ಮಹೇಶ್, ತಾಲ್ಲೂಕು ಅಧ್ಯಕ್ಷ ಸುನೀಲ್‌ಕುಮಾರ್, ತಾಲ್ಲೂಕು ಪ್ರಧಾನಕಾರ್ಯದರ್ಶಿ ಉಮೇಶ್, ತಾಲ್ಲೂಕು ಖಜಾಂಚಿ ಪರ್ವತೇಗೌಡ, ಮುಖಂಡರಾದ ಅಣ್ಣೇಗೌಡ, ಲೋಕೇಗೌಡ, ಅಜಿತ್, ಯಶ್ವಂತ್, ಆದರ್ಶ ಇದ್ದರು.

Protest march from Taluk office to District Collector’s office

Facebook
X
WhatsApp
Telegram
Spread the love

ಚಿಕ್ಕಮಗಳೂರು: ಅಜ್ಞಾನ ಅಹಂಕಾರ ಅಂಧಕಾರ ಅಳಿಸಿ ಸುಜ್ಞಾನ ಜ್ಯೋತಿಯಾಗಿ ಬಾಳು ಬೆಳಗಿಸುವಾತನೇ ಗುರು ಎಂದು ಶಾರದ ಪೈ ಕಲ್ಯಾಣ ಮಂಟಪದ…

Spread the love

ಚಿಕ್ಕಮಗಳೂರು: ದುಡಿಮೆಯೇ ಬಡತನ ಅಳಿಸುವ ಸಾಧನ. ಕೂಡಿ ಬಾಳಬೇಕು, ಒಟ್ಟಾಗಿ ದುಡಿದಾಗ ಮಾತ್ರ ಬಡತನ ನಿವಾರಣೆ ಮಾಡಲು ಸಾಧ್ಯ ಎಂದು…

Spread the love

ಚಿಕ್ಕಮಗಳೂರು: ಅಜ್ಞಾನ ಅಹಂಕಾರ ಅಂಧಕಾರ ಅಳಿಸಿ ಸುಜ್ಞಾನ ಜ್ಯೋತಿಯಾಗಿ ಬಾಳು ಬೆಳಗಿಸುವಾತನೇ ಗುರು ಎಂದು ಶಾರದ ಪೈ ಕಲ್ಯಾಣ ಮಂಟಪದ…

Spread the love

ಚಿಕ್ಕಮಗಳೂರು: ದುಡಿಮೆಯೇ ಬಡತನ ಅಳಿಸುವ ಸಾಧನ. ಕೂಡಿ ಬಾಳಬೇಕು, ಒಟ್ಟಾಗಿ ದುಡಿದಾಗ ಮಾತ್ರ ಬಡತನ ನಿವಾರಣೆ ಮಾಡಲು ಸಾಧ್ಯ ಎಂದು…

[t4b-ticker]
Exit mobile version