ಚಿಕ್ಕಮಗಳೂರು: ಪರಿಶಿ? ಜಾತಿ ಪಂಗಡದಂತೆ ಅತಿ ಹಿಂದುಳಿದ ವರ್ಗಗಳಿಗೆ ರಾಜ್ಯದಲ್ಲಿ ಮೀಸಲಾತಿ ಪ್ರಮಾಣದಲ್ಲಿ ಅನ್ಯಾಯವಾಗಿದ್ದು, ಮೇಲ್ಜಾತಿಗಳ ಒತ್ತಡಕ್ಕೆ ಮಣಿಯದೆ ಕಾಂತರಾಜ ಆಯೋಗದ ವರದಿಯನ್ನು ಸರ್ಕಾರ ತಕ್ಷಣ ಜಾರಿ ಮಾಡಬೇಕೆಂದು ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿ ರಾಜ್ಯಾಧ್ಯಕ್ಷ ಮಾರಸಂದ್ರ ಮುನಿಯಪ್ಪ ಒತ್ತಾಯಿಸಿದರು.
ಇಂದು ಪತ್ರಿಕಾಗೋಷ್ಠಿಯಲ್ಲಿ ಈ ವಿ?ಯ ತಿಳಿಸಿದ ಅವರು ರಾಜ್ಯದಲ್ಲಿ ೨೫ ಲಕ್ಷ ಎಕರೆ ಭೂಮಿ ಇದ್ದರೂ ಭೂರಹಿತರಿಗೆ ಹಕ್ಕುಪತ್ರ ನೀಡಿಲ್ಲ ಎಂದು ದೂರಿ
ಸುಪ್ರೀಂ ಕೋರ್ಟಿನ ತೀರ್ಪಿನಂತೆ ಒಳ ಮೀಸಲಾತಿ ಜಾರಿಮಾಡುವ ನಿಟ್ಟಿನಿಲ್ಲಿ ಸಚಿವ ಸಂಪುಟ ಕೈಗೊಂಡಿರುವ ನಿರ್ಣಯವನ್ನು ಸ್ವಾಗತಿಸಿದ ಅವರು ಆದರೆ ದತ್ತಾಂಶ ಸಂಗ್ರಹಣೆ ನೆಪಒಡ್ಡಿ ನಿವೃತ್ತ ನ್ಯಾಯಾಧೀಶರ ಅಧ್ಯಕ್ಷತೆಯಲ್ಲಿ ಮತ್ತೊಂದು ಆಯೋಗ ರಚಿಸಿರುವುದು ಅನಾವಶ್ಯಕ ಮತ್ತು ಕಾಲಹರಣದ ತಂತ್ರಾಂಶವಾಗಿದೆ, ಆದ್ದರಿಂದ ಒಳಮೀಸಲಾತಿಯನ್ನು ವಿಳಂಬ ಮಾಡದೆ ಕೂಡಲೇ ಜಾರಿ ತರಬೇಕೆಂದು ಆಗ್ರಹಿಸಿದರು.
ಕರ್ನಾಟಕದಲ್ಲಿ ಪರಿಶಿ? ಜಾತಿಯ ವಿವಿಧ ಜಾತಿಗಳ ಜನಸಂಖ್ಯೆಗೆ ಸಂಬಂಧಪಟ್ಟ ಮಾಹಿತಿಯು ಹಾವನೂರು ಆಯೋಗದಿಂದ ಮೊದಲ್ಗೊಂಡು ನ್ಯಾಯಮೂರ್ತಿ ಸದಾಶಿವ ಆಯೋಗ ಕಾಂತರಾಜ ಆಯೋಗ ನಾಗಮೋಹನ್ ದಾಸ್ ಆಯೋಗ ಹಾಗೂ ಜೆಸಿ ಮಾದುಸ್ವಾಮಿ ಸಮಿತಿಗಳು ನೀಡಿರುವ ವರದಿಗಳಲ್ಲಿ ಲಭ್ಯವಿದೆ ಎಂದರು.
ಅವನ್ನು ಪರಿಗಣಿಸಿ ಸಮಸ್ಯೆಯನ್ನು ಬಗೆಹರಿಸಲು ಸಾಧ್ಯವಿತ್ತು. ೩೦ ವ?ಗಳ ಹಿಂದೆಯೇ ಒಳಮೀಸಲಾತಿಗೆ ಸಂಬಂಧಪಟ್ಟ ಸಮಸ್ಯೆ ಸರ್ಕಾರಗಳ ಗಮನಕ್ಕೆ ಬಂದ ಕೂಡಲೇ ಬಗೆಹರಿಸುವ ಸಾಧ್ಯತೆಗಳು ಇದ್ದವು, ಆದರೆ ಈ ಸಮಸ್ಯೆಯನ್ನು ಜೀವಂತವಾಗಿ ಇಟ್ಟು ನೂರೊಂದು ಜಾತಿಗಳ ಮಧ್ಯೆ ಅಪನಂಬಿಕೆ ಉಂಟು ಮಾಡಿ, ರಾಜಕೀಯ ಲಾಭ ಪಡೆಯಲು ಬಿಜೆಪಿ ಜೆಡಿಎಸ್ ಪಕ್ಷಗಳು ಕುತಂತ್ರ ನಡೆಸಿದವು ಎಂದು ಆರೋಪಿಸಿದರು.
ದೇಶದಲ್ಲಿ ರಾಜ್ಯದಲ್ಲಿ ಸರ್ಕಾರಿ ಹುದ್ದೆಗಳ ಖಾಸಗೀಕರಣದಿಂದಾಗಿ, ಸರ್ಕಾರಿ ವಲಯದಲ್ಲಿ ಕೇವಲ ಶೇ.೧ರ? ಮಾತ್ರ ಉದ್ಯೋಗವಕಾಶಗಳು ಸೃಷ್ಟಿಯಾಗುತ್ತಿದ್ದು, ಉಳಿದ ಶೇಕಡ ೯೯ ಉದ್ಯೋಗಗಳು ಖಾಸಗಿ ವಲಯದಲ್ಲಿ ಸೃಷ್ಟಿಯಾಗುತ್ತಿವೆ. ಇಂತಹ ಪರಿಸ್ಥಿತಿಯಲ್ಲಿ ಖಾಸಗಿ ವಲಯದಲ್ಲೂ ಎಸ್ಸಿ,ಎಸ್ಟಿ, ಒಬಿಸಿಗಳು ಮೀಸಲಾತಿ ಪಡೆಯಬೇಕಾದದ್ದು ಅನಿವಾರ್ಯವಾಗಿದೆ ಈ ನಿಟ್ಟಿನಲ್ಲಿ ಎಸ್ಸಿ,ಎಸ್ಟಿ, ಒಬಿಸಿಗಳು ಒಂದುಗೂಡಿ ಹೋರಾಡುವುದು ಅಗತ್ಯವಾಗಿದೆ ಎಂದು ಹೇಳಿದರು.
ಮೀಸಲಾತಿ ಪ್ರಮಾಣ ಏನೇ ಸಿಕ್ಕರೂ ಮುಂದಿನ ಹೋರಾಟಕ್ಕೆ ನೂರೊಂದು ಪರಿಶಿ? ಜಾತಿಗಳು ಐಕ್ಯತೆ ಕಾಪಾಡಿಕೊಳ್ಳಬೇಕೆಂದು ಮನವಿ ಮಾಡಿದರು.ಪತ್ರಿಕಾಗೋಷ್ಠಿಯಲ್ಲಿ ಪಕ್ಷದ ರಾಜ್ಯ ಮುಖಂಡರಾದ ತಿರುಪತಿ ಹಳ್ಳಿ ದೇವರಾಜು, ಚಂದ್ರಪ್ಪ, ರಮೇಶ್, ರೇವಣ್ಣ ಟಿ.ಆರ್, ವಿಜಯ್ ಕುಮಾರ್ ಇದ್ದರು.
Kantaraj Commission report should be implemented immediately