ALSO FEATURED IN

elephant attack:ಕಾಡಾನೆ ದಾಳಿಯಿಂದ ಸೀತೂರು ಗ್ರಾಮದ ವ್ಯಕ್ತಿಸಾವು

Spread the love

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕಾಡಾನೆ ಹಾವಳಿ ತೀವ್ರಗೊಂಡಿದ್ದು ಶನಿವಾರ ನರಸಿಂಹರಾಜಪುರ ತಾಲೂಕಿನಲ್ಲಿ ಕಾಡಾನೆ ದಾಳಿಯಿಂದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.

ನರಸಿಂಹರಾಜಪುರ ತಾಲೂಕಿನ ಸೀತೂರು ಗ್ರಾಮದ ಉಮೇಶ್(೫೬) ಆನೆದಾಳಿಯಿಂದ ಮೃತರಾಗಿದ್ದಾರೆ. ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆನೆ ಉಮೇಶ್ ಅವರ ಮೇಲೆ ದಾಳಿ ಮಾಡಿ ಸಾಯಿಸಿದೆ. ಆನೆದಾಳಿಯಿಂದ ವ್ಯಕ್ತಿ ಮೃತಪಟ್ಟಿದ್ದಾರೆ.

ಆನೆಗಳ ಹಾವಳಿಗೆ ಕಡಿವಾಣ ಹಾಕುವಲ್ಲಿ ಅರಣ್ಯ ಇಲಾಖೆ ಸಂಪೂರ್ಣ ವಿಫಲವಾಗಿದ್ದು, ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಆಗ್ರಹಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆನೆ ದಾಳಿಯಿಂದ ಉಮೇಶ್ ಮೃತಪಟ್ಟಿದ್ದು ಸ್ಥಳಕ್ಕೆ ನರಸಿಂಹರಾಜಪುರ ಪೊಲೀಸರು ಹಾಗೂ ಅರಣ್ಯ ಇಲಾ ಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ತಾಲೂಕಿನ ಮೆಣಸಿನ ಮಲ್ಲೇದೇವರಹಳ್ಳಿ, ಆಲದಗುಡ್ಡೆ, ವಸ್ತಾರೆ, ಕೆಸವಿನಮನೆ ಮೂಗ್ತಿಹಳ್ಳಿ, ಕದ್ರಿಮಿದ್ರಿ ಕಂಚಿ ನಹಳ್ಳಿ, ಕೆ.ಆರ್.ಪೇಟೆ ಕಂಬಿಹಳ್ಳಿ ಸುತ್ತಮುತ್ತಲ ಗ್ರಾಮಗಳಲ್ಲಿ ಬೀಟಮ್ಮ ಗ್ಯಾಂಗಿನ ಆನೆಗಳು ಎರಡು ಮರಿಗಳೊಂದಿಗೆ ಮಾರಿ ಕಟ್ಟೆ ಅರಣ್ಯ ಪ್ರದೇಶದಲ್ಲಿ ಬೀಡು ಬಿಟ್ಟು ಜಮೀನು ತೋಟಗಳಿಗೆ ಲಗ್ಗೆ ಇಟ್ಟು ಬೆಳೆ ಹಾನಿ ಮಾಡುತ್ತಿರುವುದರೊಂದಿಗೆ ಜನರಲ್ಲಿ ಜೀವಭಯವನ್ನು ಸೃಷ್ಟಿಸಿದ್ದಾರೆ.

ಈ ಬಗ್ಗೆ ಅರಣು ಇಲಾಖೆಗೆ ಮಾಹಿತಿ ನೀಡಿದರೂ ಸ್ಥಳಕ್ಕೆ ಬಂದಿರಲಿಲ್ಲ ಎನ್ನುವ ಸ್ಥಳಿಯರು, ಇದುವರೆಗೂ ಚಿಕ್ಕಮಗಳೂರು ಜಿಲ್ಲೆಯಲ್ಲಿ ಅಂದರೇ ೨೦೧೮ರಿಂದ ಇಲ್ಲಿಯವರೆಗೆ ಉಮೇಶ್ ಸೇರಿದಂತೆ ೧೭ ಜನರು ಆನೆ ದಾಳಿಗೆ ಮೃತಪಟ್ಟಿದ್ದಾರೆ. ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಾಡಾನೆಗಳ ಉಪಟಳ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಬೆಳೆಗಾರರು ಹಾಗೂ ಕೃಷಿಕರು ಬೆಳೆಯನ್ನು ಕಳೆದುಕೊಳ್ಳುತ್ತಿದ್ದರೇ, ಮತ್ತೊಂದು ಕಡೆ ಜೀವಭಯದಲ್ಲಿ ಜೀವನ ನಡೆಸುವಂತಾಗಿದೆ.

Man from Sithur village dies in wild elephant attack

 

Facebook
X
WhatsApp
Telegram
Spread the love

ಚಿಕ್ಕಮಗಳೂರು: ಭಕ್ತಿ, ಧಾರ್ಮಿಕತೆ, ವೈಚಾರಿಕತೆಯ ಮೌಲ್ಯಗಳನ್ನು ಜನರ ಮನಸ್ಸಿನಲ್ಲಿ ಬಿತ್ತುವ ಸಲುವಾಗಿ ಸೆ.೧ ರಂದು ಬಸವಣ್ಣನವರ ಜನ್ಮಸ್ಥಳ ಬಸವನ ಬಾಗೇವಾಡಿಯಿಂದ…

Spread the love

ಚಿಕ್ಕಮಗಳೂರು: ಹಿಂದುತ್ವವನ್ನು ಗಟ್ಟಿಗೊಳಿಸಲು ಧಾರ್ಮಿಕವಾಗಿ ಎಲ್ಲರೂ ಒಗ್ಗಟ್ಟಿನಿಂದ ಭಾಗವಹಿಸಿ ಆಚರಿಸುವುದೇ ಸಾರ್ವಜನಿಕ ಗಣೇಶೋತ್ಸವದ ಪ್ರಮುಖ ಉದ್ದೇಶ ಎಂದು ಶಾಸಕ ಹೆಚ್.ಡಿ.…

Spread the love

ಚಿಕ್ಕಮಗಳೂರು: ಭಕ್ತಿ, ಧಾರ್ಮಿಕತೆ, ವೈಚಾರಿಕತೆಯ ಮೌಲ್ಯಗಳನ್ನು ಜನರ ಮನಸ್ಸಿನಲ್ಲಿ ಬಿತ್ತುವ ಸಲುವಾಗಿ ಸೆ.೧ ರಂದು ಬಸವಣ್ಣನವರ ಜನ್ಮಸ್ಥಳ ಬಸವನ ಬಾಗೇವಾಡಿಯಿಂದ…

Spread the love

ಚಿಕ್ಕಮಗಳೂರು: ಹಿಂದುತ್ವವನ್ನು ಗಟ್ಟಿಗೊಳಿಸಲು ಧಾರ್ಮಿಕವಾಗಿ ಎಲ್ಲರೂ ಒಗ್ಗಟ್ಟಿನಿಂದ ಭಾಗವಹಿಸಿ ಆಚರಿಸುವುದೇ ಸಾರ್ವಜನಿಕ ಗಣೇಶೋತ್ಸವದ ಪ್ರಮುಖ ಉದ್ದೇಶ ಎಂದು ಶಾಸಕ ಹೆಚ್.ಡಿ.…

[t4b-ticker]
Exit mobile version