ಚಿಕ್ಕಮಗಳೂರು: ಯುವಜನತೆ ದೇಶಪ್ರೇಮವನ್ನು ಬೆಳೆಸಿಕೊಂಡಲ್ಲಿ ಮಾತ್ರ ಆರೋಗ್ಯಕರ ಸಮಾಜ ನಿರ್ಮಾಣ ಮಾಡಲು ಸಾಧ್ಯ ಎಂದು ಚಿಕ್ಕಮಗಳೂರು-ಉಡುಪಿ ಕ್ಷೇತ್ರದ ಲೋಕಸಭಾ ಸದಸ್ಯ ಕೋಟಾ ಶ್ರೀನಿವಾಸ್ ಪೂಜಾರಿ ಅಭಿಪ್ರಾಯಿಸಿದರು.
ಅವರು ನಗರದ ಕುವೆಂಪು ಕಲಾಮಂದಿರದಲ್ಲಿ ವಿದ್ಯಾರ್ಥಿ ಗ್ರೂಪ್ ಆಫ್ ಇನ್ಸಿಟ್ಯೂಷನ್ ಆಯೋಜಿಸಿದ್ದ ಗ್ರಾಜುಯೇಷನ್ ಡೇ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿ ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಶಿಕ್ಷಣ ಕ್ಷೇತ್ರದ ಜವಾಬ್ದಾರಿ ಪ್ರಮುಖವಾಗಿದ್ದು ಸಂಸ್ಥೆ ಈ ನಿಟ್ಟಿನಲ್ಲಿ ಮತ್ತ? ಕೆಲಸ ನಿರ್ವಹಿಸಲಿ ಎಂದು ಆಶಿಸಿದರು.
ಕಾರ್ಯಕ್ರಮದಲ್ಲಿ ವಿಧಾನ ಪರಿ?ತ್ತಿನ ಸದಸ್ಯ ಕೇಶವಪ್ರಸಾದ್ ಗೌರವ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿ, ವಿದ್ಯಾರ್ಥಿಗಳಲ್ಲಿ ಯಶಸ್ಸಿನ ಹಸಿವು ಹೆಚ್ಚಾಗಿರಬೇಕು ಎಂದರು. ಇದೇ ಸಂದರ್ಭ ಕೌಶಲ್ಯಾಧಾರಿತ ಶಿಕ್ಷಣ ನೀಡುವಲ್ಲಿ ನಿರಂತರತೆಯನ್ನು ಕಾಯ್ದುಕೊಂಡಿರುವ ವಿದ್ಯಾರ್ಥಿ ಗ್ರೂಪ್ನ ಕಾರ್ಯಕ್ಷಮತೆಯನ್ನು ಶ್ಲಾಘಿಸಿದರು.
ಗೌರವ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಆಯುಕ್ತರಾದ ಎಂ.ಎನ್.ಷಡಾಕ್ಷರಿ ಶಿಸ್ತು, ಕಾರ್ಯಕ್ಷಮತೆಯೊಂದಿಗೆ ಕರ್ತವ್ಯ ನಿರ್ವಹಿಸಿದ್ದಲ್ಲಿ ಮಾತ್ರ ಸಮಾಜದ ಸ್ವಾಸ್ಥ್ಯ ಕಾಪಾಡಲು ಸಾಧ್ಯ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು, ವೃತ್ತಿಯಲ್ಲಿ ದಿನೇ ದಿನೇ ಬದಲಾಗುತ್ತಿರುವ ತಂತ್ರಜ್ಞಾನದ ಬಳಕೆಯೊಂದಿಗೆ ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಿ ಎಂದು ಕಿವಿಮಾತು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿದ್ಯಾರ್ಥಿ ಗ್ರೂಪ್ ಆಫ್ ಇನ್ಸ್ಟಿಟ್ಯೂ?ನ್ ಅಧ್ಯಕ್ಷರಾದ ಪ್ರೊಫೆಸರ್ ಇಂದುಕುಮಾರ್ ಸಿ.ಎಚ್ ವಹಿಸಿದ್ದರು. ಕಾರ್ಯಕ್ರಮದಲ್ಲಿ ಅಕಾಡೆಮಿಕ್ ಮುಖ್ಯಸ್ಥರಾದ ಮಂಜೇಗೌಡ, ಮುಖ್ಯ ಹಣಕಾಸು ಅಧಿಕಾರಿ ತನುಜಾ.ಬಿ.ಟಿ, ವಿದ್ಯಾರ್ಥಿಗಳು, ಆಡಳಿತ ಮತ್ತು ಬೋಧಕ ಸಿಬ್ಬಂದಿವರ್ಗ ಪಾಲ್ಗೊಂಡಿದ್ದರು.
ದೀಪ ಬೆಳಗುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಇದೇ ಸಂದರ್ಭದಲ್ಲಿ ಸುಮಾರು ೨೪೦ ಪ್ಯಾರಾಮೆಡಿಕಲ್ ಕೋರ್ಸುಗಳನ್ನು ಮುಗಿಸಿರುವ ವಿದ್ಯಾರ್ಥಿಗಳಿಗೆ ಡಿಪ್ಲೊಮೊ ಪದವಿಯನ್ನು ವಿತರಿಸಲಾಯಿತು.
Graduation Day program organized by Student Group of Institution