ಚಿಕ್ಕಮಗಳೂರು: ಆಲ್ ಇಂಡಿಯಾ ಟ್ರೇಡ್ ಯೂನಿಯನ್ ರಾಜ್ಯ ಉಪಾಧ್ಯಕ್ಷರು ಹಾಗೂ ಪ್ಲಾಂಟೇಷನ್ ಯೂನಿಯನ್ ನ ಪ್ರಧಾನ ಕಾರ್ಯದರ್ಶಿ ಹಿರಿಯ ಕಾರ್ಮಿಕ ಮುಖಂಡ ಕೆ. ಗುಣಶೇಖರ್ ರವರು ನಿಧನರಾಗಿದ್ದಾರೆ.
ಕಳೆದ ಕೆಲವು ದಿನಗಳಿಂದ ಅನಾರೋಗ್ಯ ಕ್ಕೆ ಒಳಗಾಗಿದ್ದ ಅವರು ಗುರುವಾರ ರಾತ್ರಿ ಕೊನೆಯುಸಿರೆಳೆದಿದ್ದಾರೆ. ಶನಿವಾರ ಮಧ್ಯಾಹ್ನ ಅವರ ಪಾರ್ಥಿವ ಶರೀರದ ಅಂತ್ಯಸಂಸ್ಕಾರ ನಡೆಯಲಿದೆ.
ಗುಣಶೇಖರ್ ಅವರು ಚಿಕ್ಕಮಗಳೂರು ಜಿಲ್ಲೆಯಲ್ಲಿ ಮತ್ತು ರಾಜ್ಯದ ವಿವಿಧ ಭಾಗಗಳಲ್ಲಿ ಕಳೆದ ಐದು ದಶಕಗಳಿಂದ ಕಾಫಿ, ಟೀ, ರಬ್ಬರ್ ತೋಟಗಳ ಕಾರ್ಮಿಕರ ಮುಖಂಡರಾಗಿ ಅವಿರತ ಸೇವೆ ಸಲ್ಲಿಸಿದ್ದರು.
ಭಾರತ ಕಮ್ಯುನಿಸ್ಟ್ ಪಕ್ಷದ ಹಿರಿಯ ಮುಖಂಡರಾಗಿದ್ದರು. ದಿವಂಗತ ಬಿ.ಕೆ. ಸುಂದರೇಶ್ ಅವರ ಅಪ್ಪಟ ಅನುಯಾಯಿಯಾಗಿದ್ದರು. ಕಾರ್ಮಿಕರ ಪರವಾಗಿ ಹಲವಾರು ಹೋರಾಟಗಳಲ್ಲಿ ಮುಂಚೂಣಿಯಲ್ಲಿ ತೊಗಡಿಸಿಕೊಂಡಿದ್ದರು.
ಗುಣಶೇಖರ್ ಅವರ ನಿಧನಕ್ಕೆ ಸಿಪಿಐ ಪಕ್ಷ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಮುಖಂಡರು, ಕಾರ್ಯಕರ್ತರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
Senior labor leader K. Gunasekhar passed away