ALSO FEATURED IN

forgotten dishes:ಸಿರಿಧಾನ್ಯ ಬಳಿಕೆಯಿಂದ ಅನೇಕ ರೋಗಗಳನ್ನು ತಡೆಗಟ್ಟಬಹುದು

Spread the love

ಚಿಕ್ಕಮಗಳೂರು: ಆಹಾರದಿಂದಲೇ ಆರೋಗ್ಯ. ನಾವು ಆಯ್ಕೆ ಮಾಡಿಕೊಳ್ಳುವ ಆಹಾರ ಪದಾರ್ಥಗಳು ಆರೋಗ್ಯದ ಮೇಲೆ ಪರಿಣಾಮ ಬೀರುತ್ತವೆ ಸಿರಿಧಾನ್ಯಗಳಿಂದ ತಯಾರಾದ ಖಾದ್ಯಗಳನ್ನು ಹೆಚ್ಚು ಬಳಸುವುದರಿಂದ ಅನೇಕ ರೋಗಗಳನ್ನು ತಡೆಗಟ್ಟಬಹುದು ಎಂದು ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ಶಾಸಕ ಎಚ್.ಡಿ ತಮ್ಮಯ್ಯ ಹೇಳಿದರು.

ಜಿಲ್ಲಾಡಳಿತ ಜಿಲ್ಲಾ, ಪಂಚಾಯತ್ ಹಾಗೂ ಕೃಷಿ ಇಲಾಖೆ ಚಿಕ್ಕಮಗಳೂರು ಇವರ ಸಂಯುಕ್ತಾಶ್ರಯದಲ್ಲಿ ಭಾನುವಾರ ನಗರದ ಮಹಾತ್ಮ ಗಾಂಧಿ ಉದ್ಯಾನವನದದಲ್ಲಿ (ರತ್ನಗಿರಿ ಬೋರೆ) ಆಯೋಜಿಸಲಾಗಿದ್ದ ಜಿಲ್ಲಾಮಟ್ಟದ ಸಿರಿಧಾನ್ಯ ಹಾಗೂ ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಇತ್ತೀಚಿನ ದಿನಗಳಲ್ಲಿ ನಮ್ಮ ಸಾಂಪ್ರದಾಯಿಕ ಆಹಾರ ಬೆಳೆಗಳಾದ ರಾಗಿ, ಜೋಳ, ಸಜ್ಜೆ, ನವಣೆ, ಸಾಮೆ, ಹಾರಕ, ಕೊರಲೆ, ಬರಗು ಇವುಗಳ ಬಳಕೆಯನ್ನು ಮರೆತು ಪಾಶ್ಯಾತ್ಯ ಆಹಾರ ಪದ್ಧತಿಗೆ ಮಾರುಹೋಗುತ್ತಿದ್ದೇವೆ. ಇಂತಹ ಆಹಾರ ಪದ್ಧತಿಗಳಿಂದ ನಮ್ಮ ಜೀವನಶೈಲಿ ಬದಲಾಗುವುದಲ್ಲದೆ ಅನಾರೋಗ್ಯಕ್ಕೆ ತುತ್ತಾಗುವ ಪರಿಸ್ಥಿತಿಗಳು ಉಂಟಾಗಿವೆ. ಆರೋಗ್ಯವನ್ನು ಉತ್ತಮವಾಗಿಟ್ಟುಕೊಳ್ಳಲು ಸಿರಿಧಾನ್ಯಗಳಿಂದ ತಯಾರಾಗುವ ಖಾದ್ಯಗಳನ್ನು ಸೇವಿಸಬೇಕು. ಇವುಗಳು ಮಧುಮೇಹ ಸೇರಿದಂತೆ ಇನ್ನಿತರ ರೋಗಗಳನ್ನು ನಿಯಂತ್ರಿಸಲು ಸಹಕಾರಿಯಾಗಿದೆ ಎಂದ ಅವರು. ಯುವಕರು ಮತ್ತು ಮಕ್ಕಳು ಸಿರಿಧಾನ್ಯಗಳನ್ನು ಹೆಚ್ಚಾಗಿ ಬಳಸುವುದರಿಂದ ದೇಹಕ್ಕೆ ಉತ್ತಮ ಪೌಷ್ಟಿಕಾಂಶ ದೊರಕುವುದಲ್ಲದೆ ಮೆದುಳಿನ ಶಕ್ತಿಯನ್ನು ಹೆಚ್ಚಿಸಿ ದೇಹವನ್ನು ಸದೃಢವನ್ನಾಗಿರಿಸಿಕೊಳ್ಳಲು ಸಹಾಯಮಾಡುತ್ತದೆ ಎಂದು ಹೇಳಿದರು.

ಸಿರಿಧಾನ್ಯಗಳನ್ನು ಹೆಚ್ಚು ಬಳಸುವುದರಿಂದ ರೈತರಿಗೆ ಹೆಚ್ಚಾಗಿ ಸಿರಿಧಾನ್ಯಗಳನ್ನು ಬೆಳೆಯಲು ಅನುಕೂಲವಾಗುತ್ತದೆ ಮತ್ತು ಸಿರಿಧಾನ್ಯಗಳಿಂದ ಖಾದ್ಯಗಳನ್ನು ತಯಾರಿಸುವವರಿಗೆ ಪ್ರೋತ್ಸಾಹಿಸಿ ವಿವಿಧ ಕಾಯಿಲೆಗಳಿಂದ ಮುಕ್ತಿಯನ್ನು ಪಡೆಯಬಹುದಾಗಿದೆ ಎಂದರು.

ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್ ಮಾತನಾಡಿ ಸಿರಿಧಾನ್ಯಗಳಿಂದ ಖಾದ್ಯಗಳನ್ನು ತಯಾರಿಸಿ ಸೇವಿಸುವುದರಿಂದ ಯಾವುದೇ ರೀತಿಯ ಖಾಯಿಲೆಗಳು ಬರುವುದಿಲ್ಲ ಎಂದ ಅವರು ಸಿರಿಧಾನ್ಯ ಖಾದ್ಯಗಳಿಂದ ೦೩ ಭಾಗಗಳಲ್ಲಿ ಪಾಕ ಸ್ಪರ್ಧೆ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು ಮರೆತು ಹೋದ ಖಾದ್ಯಗಳು, ಸಿಹಿ ಖಾದ್ಯಗಳು ಮತ್ತು ಖಾರ ಖಾದ್ಯಗಳಾಗಿ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ.

ಈ ಸ್ಪರ್ಧೆಯಲ್ಲಿ ಸುಮಾರು ೬೦ ಮಹಿಳೆಯರು ಭಾಗವಹಿಸಿದ್ದು ನಮ್ಮ ಮಲೆನಾಡು ಭಾಗದ ವಿವಿಧ ತಿಂಡಿಗಳು ಪೌಷ್ಟಿಕ ಆಹಾರಗಳು ತಯಾರಿಸಿ ಪ್ರದರ್ಶಿಸಲಾಗಿದೆ. ಇಂತಹ ಆಹಾರ ಪದಾರ್ಥಗಳನ್ನು ನಮ್ಮ ದಿನ ನಿತ್ಯದ ಆಹಾರ ಪದ್ಧತಿಯಲ್ಲಿ ಬಳಸುವುದರಿಂದ ದೇಹಕ್ಕೆ ಉತ್ತಮವಾದ ಪೌಷ್ಟಿಕಾಂಶಗಳನ್ನು ನೀಡುವುದರ ಮೂಲಕ ವಿವಿಧ ಅನಾರೋಗ್ಯಗಳಿಂದ ಸುಧಾರಿಸಿಕೊಳ್ಳಬಹುದು ಜೊತೆಗೆ ಮಧುಮೇಹದಂತಹ ರೋಗಗಳಿಂದ ಶೀಘ್ರವಾಗಿ ಮುಕ್ತರಾಗಬಹುದು

ಅಲ್ಲದೆ ಮಕ್ಕಳಲ್ಲಿ ಪೌಷ್ಟಿಕಾಂಶದ ಕೊರತೆ ಹೆಚ್ಚಾಗಿ ಇರುವುದರಿಂದ ಅವರಿಗೆ ಸಿರಿಧಾನ್ಯಗಳಿಂದ ತಯಾರಾಗುವ ಆಹಾರಗಳನ್ನು ನೀಡುವುದರಿಂದ ಅವರಲ್ಲಿ ಯಾವುದೇ ರೀತಿಯ ಅಪೌಷ್ಟಿಕತೆ ಕಂಡುಬರುವುದಿಲ್ಲ ಜೊತೆಗೆ ವೃದ್ಧರೂ ಸಹ ಈ ಖಾದ್ಯಗಳನ್ನು ಸೇವಿಸುವುದರಿಂದ ತಮ್ಮ ಆರೋಗ್ಯವನ್ನು ಕಾಪಾಡಿಕೊಂಡು ಹೆಚ್ಚು ಕಾಲ ಬದುಕಬಹುದು ಅಂತಹ ವಿವಿಧ ಆರೋಗ್ಯಯುತ ಅಂಶಗಳನ್ನು ಈ ಸಿರಿಧಾನ್ಯಗಳು ಹೊಂದಿದೆ. ಸಿರಿಧಾನ್ಯಗಳನ್ನು ಸೇವಿಸುವಂತೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಹೆಚ್ಚು ಕಾರ್ಯಕ್ರಮಗಳನ್ನು ಮಾಡಲಾಗುವುದು ಎಂದು ಹೇಳಿದರು.

ಮುಂದಿನ ದಿನಗಳಲ್ಲಿ ಮಾರುಕಟ್ಟೆಗಳಲ್ಲಿ ಸಿರಿಧಾನ್ಯಗಳ ಮಾರಾಟವನ್ನು ಹೆಚ್ಚಿಸುವಂತೆ ಮತ್ತು ಹೋಟೆಲ್, ರೆಸಾರ್ಟ್‌ಗಳಲ್ಲಿ ಸಿರಿಧಾನ್ಯಗಳ ಬಳಕೆಯನ್ನು ಮತ್ತು ಅವುಗಳಿಂದ ತಯಾರಾಗುವ ಖಾದ್ಯಗಳನ್ನು ಬೆಳಗಿನ ಉಪಹಾರವಾಗಿ ನೀಡುವಂತೆ ನಿಗವಹಿಸಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹೆಚ್.ಎಸ್ ಕೀರ್ತನಾ, ಅಪರ ಜಿಲ್ಲಾಧಿಕಾರಿ ನಾರಾಯಣ ರಡ್ಡಿ ಕನಕರಡ್ಡಿ, ಕೃಷಿ ಇಲಾಖೆ ಜಂಟಿ ಕೃಷಿ ನಿರ್ದೇಶಕಿ ಸುಜಾತ, ತೋಟಗಾರಿಕೆ ಇಲಾಖೆ ಉಪನಿರ್ದೇಶಕಿ ಪೂರ್ಣಿಮಾ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿ ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

District level cooking competition of cereals and forgotten dishes

Facebook
X
WhatsApp
Telegram
Spread the love

ಚಿಕ್ಕಮಗಳೂರು: ರಾಜ್ಯ ಸರ್ಕಾರ ನೀಡಿದ್ದ ಭರವಸೆಯಂತೆ ಶಕ್ತಿ ಯೋಜನೆಯಡಿ ಮಹಿಳೆಯರು ಉಚಿತವಾಗಿ ಸಂಚರಿಸಿದ ಬಾಬ್ತು ಸರ್ಕಾರ ನಿಗಮಕ್ಕೆ ನೀಡಿದ ಹಣದಲ್ಲಿ…

Spread the love

ಚಿಕ್ಕಮಗಳೂರು: ತಾಲ್ಲೂಕಿನ ಇಂದಾವರ ಗ್ರಾಮ ಪಂಚಾಯಿತಿಗೆ ನೂತನ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಐ.ಬಿ.ಸುಭಾಶ್ ಅವರು ಇಂದು ಅವಿರೋಧವಾಗಿ ಆಯ್ಕೆಯಾದರು. ಜಿಲ್ಲಾ…

Spread the love

ಚಿಕ್ಕಮಗಳೂರು: ಕೇಂದ್ರ ಕಾಫಿ ಮಂಡಳಿ ಅಧ್ಯಕ್ಷ ಎಂ.ಜೆ.ದಿನೇಶ್ ಮತ್ತು ಕರ್ನಾಟಕ ಬೆಳಗಾರರ ಒಕ್ಕೂಟದ ಅಧ್ಯಕ್ಷ ಹಳಸೆ ಶಿವಣ್ಣನವರ ನೇತೃತ್ವದಲ್ಲಿ ಮೂಡಿಗೆರೆ…

Spread the love

ಚಿಕ್ಕಮಗಳೂರು: ರಾಜ್ಯ ಸರ್ಕಾರ ನೀಡಿದ್ದ ಭರವಸೆಯಂತೆ ಶಕ್ತಿ ಯೋಜನೆಯಡಿ ಮಹಿಳೆಯರು ಉಚಿತವಾಗಿ ಸಂಚರಿಸಿದ ಬಾಬ್ತು ಸರ್ಕಾರ ನಿಗಮಕ್ಕೆ ನೀಡಿದ ಹಣದಲ್ಲಿ…

Spread the love

ಚಿಕ್ಕಮಗಳೂರು: ತಾಲ್ಲೂಕಿನ ಇಂದಾವರ ಗ್ರಾಮ ಪಂಚಾಯಿತಿಗೆ ನೂತನ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಐ.ಬಿ.ಸುಭಾಶ್ ಅವರು ಇಂದು ಅವಿರೋಧವಾಗಿ ಆಯ್ಕೆಯಾದರು. ಜಿಲ್ಲಾ…

Spread the love

ಚಿಕ್ಕಮಗಳೂರು: ಕೇಂದ್ರ ಕಾಫಿ ಮಂಡಳಿ ಅಧ್ಯಕ್ಷ ಎಂ.ಜೆ.ದಿನೇಶ್ ಮತ್ತು ಕರ್ನಾಟಕ ಬೆಳಗಾರರ ಒಕ್ಕೂಟದ ಅಧ್ಯಕ್ಷ ಹಳಸೆ ಶಿವಣ್ಣನವರ ನೇತೃತ್ವದಲ್ಲಿ ಮೂಡಿಗೆರೆ…

[t4b-ticker]
Exit mobile version