ALSO FEATURED IN

Datta Jayanti:ದತ್ತ ಜಯಂತಿ ಶೋಭಾಯಾತ್ರೆ ಕೇಸರಿ ಅಲೆಯು ಬಲಿಷ್ಠ ಹಿಂದೂ ಶಕ್ತಿಯ ಅನಾವರಣ

Spread the love

ಚಿಕ್ಕಮಗಳೂರು: ದತ್ತ ಜಯಂತಿ ಅಂಗವಾಗಿ ನಡೆದ ಶೋಭಾಯಾತ್ರೆ ಹಿನ್ನೆಲೆಯಲ್ಲಿ ಹರಿದು ಬಂದ ಕೇಸರಿ ಅಲೆಯು ಬಲಿಷ್ಠ ಹಿಂದೂ ಶಕ್ತಿಯನ್ನು ಅನಾವರಣಗೊಳಿಸಿತು.

ಸಹಸ್ರ ಸಂಖ್ಯೆಯಲ್ಲಿ ಸೇರಿದ ಮಾಲಾಧಾರಿ ಭಕ್ತರು, ಯುವಕ, ಯುವತಿಯರು, ವೃದ್ಧರು, ಮಕ್ಕಳಾದಿಯಾಗಿ ಎಲ್ಲರೂ ಕುಣಿದು ಕುಪ್ಪಳಿಸಿದರು. ಡಿಜೆಯ ಕವಿಗಚಿಕ್ಕುವ ಸದ್ದು, ನಾಸಿಕ್ ಮೇಳ, ದಕ್ಷಿಣ ಕನ್ನಡದ ಚಂಡೆ ವಾದನಕ್ಕೆ ಹೆಜ್ಜೆಹಾಕಿ ಅಮಿತೋತ್ಸಾಹದಲ್ಲಿ ಮಿಂದೆದ್ದರು. ಬಾಯಲ್ಲೂ ಕೇಳಿಬಂದ ದತ್ತಪೀಠ ನಮ್ಮದೆಂಬ ಘೋಷಣೆ ಮುಗಿಲು ಮುಟ್ಟಿತು. ಬಸವನಹಳ್ಳಿ ಮುಖ್ಯರಸ್ತೆಯ ಶಂಕರ ಮಠದಿಂದ ಮತ್ತೊಂದು ತುದಿಯ ಆಜಾದ್ ಪಾರ್ಕ್ ಸರ್ಕಲ್‌ವರೆಗೆ ನದಿಯಂತೆ ಹರಿದುಬಂದ ಕೇಸರಿ ಕಲವರ ನೋಡುಗರನ್ನು ನಿಬ್ಬೆರಗಾಗಿಸಿತು.

ಯಾತ್ರೆ ಸಾಗಿದ ಮಾರ್ಗದುದ್ದಕ್ಕೂ ದತ್ತಾತ್ರೇಯರು, ಶ್ರೀರಾಮ, ಆಂಜನೇಯ, ಶಿವಾಜಿ ಮಹರಾಜ, ಭಾರತ ಮಾತೆಯ ಘೋಷಣೆಗಳು ಬಾನೆತ್ತರಕ್ಕೆ ಮೊಳಗಿದವು. ಬೃಹದಾಕಾರವಾದ ಭಗವಾಧ್ವಜಗಳನ್ನು ಬೀಸಿದ ಮಕ್ಕಳು, ಯುವಕರು ಶೋಭಾಯಾತ್ರೆಗೆ ರಂಗು ತುಂಬಿದರು.

ದಣಿವರಿಯದೆ ಉತ್ಸಾಹ:  ಎದೆನಡುಗಿಸುವ ಡಿಜೆ ಸದ್ದಿಗೆ ಅಷ್ಟೇ ಉತ್ಸಾಹದಿಂದ ವಿದ್ಯಾರ್ಥಿ, ವಿದ್ಯಾರ್ಥಿನಿಯರು, ಸಾರ್ವಜನಿಕರು ದಣಿವರಿಯದೆ ನೃತ್ಯ ಮಾಡಿದರು. ಮಹಿಳೆಯರು ಮತ್ತು ಪುರುಷರಿಗೆ ಪ್ರತ್ಯೇಕ ಡಿಜೆ ವ್ಯವಸ್ಥೆ ಮಾಡಲಾಗಿತ್ತು. ವಿದ್ಯಾರ್ಥಿನಿಯರು, ಮಹಿಳೆಯರು, ಪುಟಾಣಿ ಮಕ್ಕಳು ಜೈಕಾರ ಹಾಕುತ್ತ ಕುಣಿದು ಸಂಭ್ರಮಿಸಿದರು.

ಕಣ್ತುಂಬಿಕೊಂಡ ಜನತೆ: ವರ್ಣರಂಜಿತ ಮೆರವಣಿಗೆಯನ್ನು ಕಣ್ತುಂಬಿಕೊಳ್ಳಲು ಇಡೀ ನಗರದ ಜನತೆ ಎಂಜಿ ರಸ್ತೆ, ಹನುಮಂತಪ್ಪ ಸರ್ಕಲ್, ಆಜಾದ್ ವೃತ್ತಗಳಲ್ಲಿ ಕಿಕ್ಕಿರಿದು ಸೇರಿದ್ದರು. ರಸ್ತೆಯ ಇಕ್ಕೆಲಗಳಲ್ಲಿ ಕಟ್ಟಡದ ಮಹಡಿಗಳ ಮೇಲೆ ನಿಂತು ವೀಕ್ಷಿಸಿದ್ದಲ್ಲದೆ ಅಲ್ಲಿಂದಲೇ ಯುವ ಶಕ್ತಿಯನ್ನು ಹುರಿದುಂಬಿಸಿದರು.

ಸಂಚಾರ ದಟ್ಟಣೆ: ಶೋಭಾಯಾತ್ರೆಯ ಮಾರ್ಗವಾದ ಎಂ.ಜಿ.ರಸ್ತೆಯಲ್ಲಿ ವಾಹನ ಸಂಚಾರ, ನಿಲುಗಡೆ ನಿಷೇಧಿಸಿದ್ದರಿಂದ ನಗರದ ವಾಹನಗಳ ಭಾರೀ ದಟ್ಟಣೆ ಅನುಭವಿಸಬೇಕಾಯಿತು. ಇತರ ಬೀದಿಗಳಲ್ಲಿ ಸಹ ಪೊಲೀಸರು ವಾಹನ ಸಂಚಾರ ನಿಯಂತ್ರಿಸಲು ಹರಸಾಹಸಪಡಬೇಕಾಯಿತು.

ಪೊಲೀಸ್ ಸರ್ಪಗಾವಲು: ಶೋಭಾಯಾತ್ರೆಗೆ ಸಾವಿರಾರು ಪೊಲೀಸರ ಬಿಗಿ ರಕ್ಷಣೆ ಒದಗಿಸಲಾಗಿತ್ತು. ಕ್ಷಿಪ್ರ ಕಾರ್ಯಾಚರಣೆ ಪಡೆ ಸಿಬ್ಬಂಧಿಗಳು ಸೇರಿದಂತೆ ಹೊರ ಜಿಲ್ಲೆಗಳಿಂದ ಆಗಮಿಸಿದ್ದ ಸಿಬ್ಬಂಧಿಗಳನ್ನು ಮೆವಣಿಗೆಯ ಎರಡೂ ಬದಿಯಲ್ಲಿ ನೇಮಿಸಲಾಗಿತ್ತು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿಕ್ರಮ ಆಮಟೆ ಸೇರಿದಿದಂತೆ ವಿವಿಧ ಪೊಲೀಸ್ ಅಧಿಕಾರಿಗಳು ಕಟ್ಟೆಚ್ಚರ ವಹಿಸಿದ್ದರು.ಪ್ರಮುಖ ವೃತ್ತಗಳಲ್ಲಿ, ರಸ್ತೆ ಬದಿಗಳಲ್ಲಿ ಬೆಳಗಿನಿಂದಲೇ ದತ್ತಾತ್ರೇಯರು, ಶ್ರೀರಾಮ, ಹನುಮಂತನ ಆಳೆತ್ತರದ ಕಟೌಟ್‌ಗಳು, ಕೇಸರಿ ಬಾನರ್, ಬಂಟಿಂಗ್‌ಗಳನ್ನು ಕಟ್ಟಿ ಶೋಭಾಯಾತ್ರೆಗೆ ಸಿದ್ಧತೆ ನಡೆಸಿದ್ದರು.

Procession held as part of Datta Jayanti

Facebook
X
WhatsApp
Telegram
Spread the love

ಚಿಕ್ಕಮಗಳೂರು: ಬಹಳರ್ಷ ವರ್ಷಗಳ ಹಿಂದೆ ಬಯಲು ಸೀಮೆಯ ಜನರ ಜೀವನಾಡಿಯಾಗಿದ್ದು ಇದೀಗ ಜೀರ್ಣಾವಸ್ಥೆಯಲ್ಲಿರುವ ಸಖರಾಯಪಟ್ಟಣ ಸಮೀಪ ಜಾನ್ಸಾಲೆ ಗ್ರಾಮದ ಲಕ್ಸಾಗರ…

Spread the love

ಚಿಕ್ಕಮಗಳೂರು: ಮುಂದಿನ ಎರಡು ವರ್ಷದಲ್ಲಿ ಚಿಕ್ಕಮಗಳೂರು-ಹಾಸನ ರೈಲು ಸಂಚಾರ ಆರಂಭವಾಗಲಿದೆ ಎಂದು ರೈಲ್ವೇ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದರು.…

Spread the love

ಚಿಕ್ಕಮಗಳೂರು: ಬಹಳರ್ಷ ವರ್ಷಗಳ ಹಿಂದೆ ಬಯಲು ಸೀಮೆಯ ಜನರ ಜೀವನಾಡಿಯಾಗಿದ್ದು ಇದೀಗ ಜೀರ್ಣಾವಸ್ಥೆಯಲ್ಲಿರುವ ಸಖರಾಯಪಟ್ಟಣ ಸಮೀಪ ಜಾನ್ಸಾಲೆ ಗ್ರಾಮದ ಲಕ್ಸಾಗರ…

Spread the love

ಚಿಕ್ಕಮಗಳೂರು: ಮುಂದಿನ ಎರಡು ವರ್ಷದಲ್ಲಿ ಚಿಕ್ಕಮಗಳೂರು-ಹಾಸನ ರೈಲು ಸಂಚಾರ ಆರಂಭವಾಗಲಿದೆ ಎಂದು ರೈಲ್ವೇ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದರು.…

[t4b-ticker]
Exit mobile version