ಚಿಕ್ಕಮಗಳೂರು: ಜಿಲ್ಲಾ ಕೃಷಿ ಪರಿಕರಗಳ ಮಾರಾಟಗಾರರ ಸಂಘದ ವಾರ್ಷಿಕ ಮಹಾಸಭೆ ಡಿ.೨೬ರ ಗುರುವಾರ ಬೆಳಿಗ್ಗೆ ೧೦:೩೦ಕ್ಕೆ ಎಐಟಿ ವೃತ್ತದ ಒಕ್ಕಲಿಗರ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕೃಷಿ ಪರಿಕರಗಳ ಮಾರಾಟಗಾರರ ಸಂಘದ ಅಧ್ಯಕ್ಷ ಕೆ.ಆರ್.ಯೋಗೀಶ್ ಲಿಂಗದಹಳ್ಳಿ ತಿಳಿಸಿದರು.
ಬುಧವಾರ ನಗರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ವಾರ್ಷಿಕ ಮಹಾಸಭೆಯನ್ನು ಇಂಧನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಉದ್ಘಾಟಿಸುವರು. ಸಂಘದ ಅಧ್ಯಕ್ಷ ಕೆ.ಆರ್.ಯೋಗೀಶ್ ಅಧ್ಯಕ್ಷತೆವಹಿಸುವರು. ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ, ವಿಧಾನ ಪರಿಷತ್ ಉಪಸಭಾಪತಿ ಎಂ.ಕೆ.ಪ್ರಾಣೇಶ್, ಶಾಸಕ ಎಚ್.ಡಿ.ತಮ್ಮಯ್ಯ ಉಪಸ್ಥಿತರಿರುವರು ಎಂದರು.
ನಿಗಮ ಮಂಡಳಿ ಅಧ್ಯಕ್ಷ ಹಾಗೂ ಶೃಂಗೇರಿ ಕ್ಷೇತ್ರದ ಶಾಸಕ ಟಿ.ಡಿ.ರಾಜೇಗೌಡ, ವಿಧಾನ ಪರಿಷತ್ ಸದಸ್ಯರಾದ ಎಸ್.ಎಲ್. ಭೋಜೇಗೌಡ, ಸಿ.ಟಿ.ರವಿ, ಶಾಸಕರಾದ ಜಿ.ಎಚ್.ಶ್ರೀನಿವಾಸ್, ಕೆ.ಎಸ್.ಆನಂದ್, ನಯನ ಮೋಟಮ್ಮ ಹಾಗೂ ಕರ್ನಾಟಕ ರಾಜ್ಯ ಕೃಷಿ ಪರಿಕರಗಳ ಮಾರಾಟಗಾರರ ಸಂಘದ ರಾಜ್ಯಾಧ್ಯಕ್ಷರಾದ ಕೆ.ಎಚ್.ನಾಗರಾಜ ಲೋಕಿಕೆರೆ, ನಗರಸಭೆ ಅಧ್ಯಕ್ಷೆ ಸುಜಾತ ಶಿವಕುಮಾರ್, ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್., ಜಿ.ಪಂ.ಸಿಇಓ ಎಚ್.ಎಸ್.ಕೀರ್ತನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ|ವಿಕ್ರಮ್ ಅಮಟೆ, ಜಂಟಿ ಕೃಷಿ ನಿರ್ದೇಶಕರಾದ ಎಚ್.ಎಲ್.ಸುಜಾತ ಸೇರಿದಂತೆ ಅನೇಕರು ಪಾಲ್ಗೊಳ್ಳುವರು ಎಂದು ತಿಳಿಸಿದರು.
ಸುದ್ದಿಗೋಷ್ಟಿಯಲ್ಲಿ ಸಂಘದ ಉಪಾಧ್ಯಕ್ಷ ಡಿ.ಟಿ.ತಿಮ್ಮಯ್ಯ, ಕಾರ್ಯದರ್ಶಿ ಜೆ.ಸಿ.ಮನುಪ, ಖಜಾಂಚಿ ಎನ್.ಶ್ರೀಕಾಂತ ಶೆಟ್ಟಿ, ರಾಜ್ಯ ವಕ್ತಾರ ಹಿರೇನಲ್ಲೂರು ಶಿವು ಇದ್ದರು.
Annual General Meeting of the District Agricultural Implements Dealers Association