ಚಿಕ್ಕಮಗಳೂರು: ವಿದ್ಯಾರ್ಥಿಗಳಲ್ಲಿ ಶಿಸ್ತು. ದೇಶಭಕ್ತಿ ಮತ್ತು ರಾಷ್ಟ್ರಪ್ರೇಮವನ್ನು ಬೆಳೆಸುವ ನಿಟ್ಟಿನಲ್ಲಿ ಎಲ್ಲಾ ಶಾಲಾ ಕಾಲೇಜುಗಳಲ್ಲೂ ಭಾರತ ಸೇವಾದಳದ ಘಟಕಗಳನ್ನು ತೆರೆಯಬೇಕು ಎಂದು ಮಾಜಿ ಶಾಸಕ ಐ.ಬಿ. ಶಂಕರ್ ಸಲಹೆ ಮಾಡಿದರು.
ನಗರದ ಬಸವನಹಳ್ಳಿಯ ಬಾಲಕರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನವಾಗಿ ಸ್ಥಾಪಿಸಿರುವ ಭಾರತ ಸೇವಾದಳದ ಸುಭಾಷ್ ಶಾಖೆಯನ್ನು ಗುರುವಾರ ಉದ್ಘಾಟಿಸಿ ಅವರು ಮಾತನಾಡಿದರು.
ದೇಶದಲ್ಲಿಂದು ಶಿಕ್ಷಣವಂತರ ಸಂಖ್ಯೆ ಹೆಚ್ಚಿದೆ. ಆದರೆ ಇಂದಿನ ಪೀಳಿಗೆಯಲ್ಲಿ ಶಿಸ್ತು. ಸಂಯಮ. ದೇಶಭಕ್ತಿ ಮತ್ತು ರಾಷ್ಟ್ರಪ್ರೇಮದ ಕೊರತೆ ಇದೆ. ಅದರಿಂದಾಗಿ ದೇಶದ ಸರ್ವಾಂಗೀಣ ಅಭಿವೃದ್ಧಿಗೆ ತೊಡಕಾಗುತ್ತಿದೆ ಎಂದು ವಿಷಾದಿಸಿದರು.
ದೇಶದ ಸ್ವಾತಂತ್ರ ಹೋರಾಟಕ್ಕೆ ಬೆನ್ನೆಲುಬಾಗಿ ನಿಂತ ಸಂಸ್ಥೆ ಭಾರತ ಸೇವಾದಳ. ಅದು ಶಿಸ್ತು. ಸಂಯಮ. ರಾಷ್ಟ್ರಭಕ್ತಿ ಮತ್ತು ದೇಶಪ್ರೇಮವನ್ನು ಬೆಳೆಸುವ ಕೆಲಸವನ್ನು ನಿರಂತರವಾಗಿ ಮಾಡುತ್ತಿದೆ ಎಂದ ಅವರು ವಿದ್ಯಾರ್ಥಿಗಳು ಸೇವಾದಳದಲ್ಲಿ ಕಲಿತಿದ್ದನ್ನು ಎಂದಿಗೂ ಮರೆಯಬಾರದು ಅದನ್ನು ಜೀವನಪೂರ್ತಿ ಪಾಲಿಸಬೇಕು ಎಂದು ಕಿವಿ ಮಾತು ಹೇಳಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ರವೀಶ್ ಮಾತನಾಡಿ ವಿದ್ಯಾರ್ಥಿಗಳು ಸೇವಾದಳಕ್ಕೆ ಸೇರ್ಪಡೆಗೊಳ್ಳುವ ಮೂಲಕ ಶಿಸ್ತು. ಸಂಯಮ. ದೇಶಭಕ್ತಿ ಮತ್ತು ರಾಷ್ಟ್ರಪ್ರೇಮವನ್ನು ಮೈಗೂಡಿಸಿಕೊಳ್ಳಬೇಕು ಎಂದು ಸಲಹೆ ಮಾಡಿದರು.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಜಗದೀಶಾಚಾರ್ ಮಾತನಾಡಿ ಭಾರತ ಸೇವಾದಳಕ್ಕೆ ಸೇರ್ಪಡೆಗೊಂಡರೆ ಮಾತ್ರ ವಿದ್ಯಾರ್ಥಿಗಳು ಶಿಸ್ತು. ಸಂಯಮ. ದೇಶಭಕ್ತಿ ಮತ್ತು ರಾಷ್ಟ್ರಪ್ರೇಮವನ್ನು ಕಲಿಯಲು ಸಾಧ್ಯ ಎಂದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಭಾರತ ಸೇವಾದಳದ ತಾಲೂಕು ಸಮಿತಿ ಸದಸ್ಯ ಎಸ್. ಈ. ಲೋಕೇಶ್ವರಾಚಾರ್ ವಿದ್ಯಾರ್ಥಿಗಳಲ್ಲಿ ಶಿಸ್ತು. ಸಂಯಮ. ದೇಶಭಕ್ತಿ ಮತ್ತು ರಾಷ್ಟ್ರಪ್ರೇಮವನ್ನು ಬೆಳೆಸುವ ನಿಟ್ಟಿನಲ್ಲಿ ಎಲ್ಲಾ ಶಾಲಾ ಕಾಲೇಜುಗಳಲ್ಲೂ ಸೇವಾದಳದ ಘಟಕಗಳನ್ನು ಸ್ಥಾಪಿಸಲಾಗುತ್ತಿದೆ. ಈಗಾಗಲೇ ಸೇವಾದಳ ಜಿಲ್ಲೆಯಲ್ಲಿ ಮುನ್ನೂರು. ತಾಲೂಕಿನಲ್ಲಿ ೮೦ ಶಾಖೆಗಳನ್ನು ಹೊಂದಿದೆ ಎಂದು ತಿಳಿಸಿದರು.
ಭಾರತ ಸೇವಾದಳದ ತಾಲೂಕು ಅಧ್ಯಕ್ಷ ಜಿ. ಶಂಕರ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಮಹೇಶಪ್ಪ. ಸದಸ್ಯ ಕಾಳಯ್ಯ. ಸೇವಾದಳ ಶಿಕ್ಷಕಿ ಮೀನಾಕ್ಷಿ. ಜಿಲ್ಲಾ ಸಂಘಟನಾ ಸಂಚಾಲಕ ಚಂದ್ರಕಾಂತ್. ಮುಖ್ಯ ಶಿಕ್ಷಕರಾದ ರಾಜ ನಾಯ್ಕ್. ಚಂದ್ರಮ್ಮ. ಸಾರ್ವಜನಿಕ ಶಿಕ್ಷಣ ಇಲಾಖೆಯ ಜಿಲ್ಲಾ ದೈಹಿಕ ಶಿಕ್ಷಣ ಪರಿವೀಕ್ಷಕ ಪಾಲಾಕ್ಷ ಮೂರ್ತಿ. ತಾಲೂಕು ಪರಿವೀಕ್ಷಕ ಶೇರ್ ಆಲಿ. ಶಿಕ್ಷಕರಾದ ಭಾರತಿ. ಚೆನ್ನಮ್ಮ. ಮಹಾಲಕ್ಷ್ಮಿ. ಅನಿತಾ ಉಪಸ್ಥಿತರಿದ್ದರು.
Bharat Seva Dal units should be opened in all schools and colleges.