ಚಿಕ್ಕಮಗಳೂರು: ಕರ್ನಾಟಕ ಬೆಳೆಗಾರರ ಒಕ್ಕೂಟದಿಂದ ಡಿ.೨೩ ರಂದು ಸಕಲೇಶಪುರದಲ್ಲಿ ಬೆಳೆಗಾರರ ಸಮಾವೇಶ ಆಯೋಜಿಸಲಾಗಿದೆ ಎಂದು ಕರ್ನಾಟಕ ಬೆಳೆಗಾರರ ಒಕ್ಕೂಟದ ಅಧ್ಯಕ್ಷ ಡಾ.ಎಚ್.ಟಿ.ಮೋಹನ್ ಕುಮಾರ್ ಹೇಳಿದರು.
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಕಲೇಶಪುರದ ಎಪಿಎಂಸಿ ಆವರಣದಲ್ಲಿಬೆಳಗ್ಗೆ ೧೦.೩೦ ಕ್ಕೆ ಆರಂಭವಾಗುವ ಸಮಾವೇಶವನ್ನು ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯೆಲ್ ಉದ್ಘಾಟಿಸಲಿದ್ದಾರೆ.
ಕೇಂದ್ರ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ, ಕೇಂದ್ರ ರೈಲ್ವೇ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ, ರಾಜ್ಯ ಅರಣ್ಯ ಸಚಿವ ಈಶ್ವರಖಂಡ್ರೆ, ಸಹಕಾರಿ ಸಚಿವ ಕೆ.ಎನ್.ರಾಜಣ್ಣ, ಪ್ರತಿ ಪಕ್ಷ ನಾಯಕ ಆರ್.ಅಶೋಕ್, ಸಂಸದರಾದ ಶ್ರೇಯಸ್ ಪಟೇಲ್, ಕೋಟಾಶ್ರೀನಿವಾಸ ಪೂಜಾರಿ, ಯದುವೀರ್ ಕೃಷ್ಣದತ್ ಒಡೆಯರ್, ತೇಜಸ್ವಿ ಸೂರ್ಯ ಹಾಗೂ ಕಾಫಿ ಬೆಳೆಯುವ ಮೂರು ಜಿಲ್ಲೆಗಳ ಶಾಸಕರು, ವಿಧಾನಪರಿಷತ್ ಸದಸ್ಯರು ಮತ್ತಿತರೆ ಗಣ್ಯರು ಭಾಗವಹಿಸಲಿದ್ದಾರೆ ಎಂದು ಹೇಳಿದರು.
ಸಮಾವೇಶದಲ್ಲಿ ಕೃಷಿ ವಸ್ತು ಪ್ರದರ್ಶನ, ಯಂತ್ರೋಪಕರಣಗಳ ಪ್ರದರ್ಶನಕ್ಕಾಗಿ ೧೦೦ ಮಳಿಗೆಗಳನ್ನು ತೆರೆಯಲಾಗುವುದು. ಕಾಫಿ ಬೆಳೆಗಾರರು ಹೆಚ್ಚಿನ ಸಂಖ್ಯೆಯಲ್ಲಿ ಸಮಾವೇಶಕ್ಕೆ ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಅವರು ಮನವಿ ಮಾಡಿದರು.
ಬೆಳಗಾರರ ಸಂಘಟನೆಯ ವಸಂತೇಗೌಡ, ಲಿಂಗಪ್ಪಗೌಡ, ಉಮೇಶ್, ಮಹೇಶ್ಗೌಡ ಮತ್ತಿತರರು ಉಪಸ್ಥಿತರಿದ್ದರು.
Growers’ conference in Sakleshpur on December 23rd