ಚಿಕ್ಕಮಗಳೂರು: ವಿಧಾನ ಪರಿಷತ್ ಶಾಸಕ ಡಾ.ಸಿ.ಟಿ.ರವಿಯನ್ನು ಕಾನೂನು ಬಾಹಿರವಾಗಿ ಬಂಧಿಸುವ ಮೂಲಕ ಸಂವಿಧಾನ ವಿರೋಧಿಯಾಗಿ, ಪ್ರಜಾಪ್ರಭುತ್ವ ವಿರೋಧಿಯಾಗಿ ನಡೆದುಕೊಂಡಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವರ್ತನೆ ಖಂಡಿಸಿ ಜಿಲ್ಲಾ ಬಿಜೆಪಿ ಜಿಲ್ಲೆಯಾದ್ಯಂತ ನಡೆಸಿದ್ದ ಪ್ರತಿಭಟನೆ ಅತ್ಯಂತ ಯಶಸ್ವಿಯಾಗಿ ನಡೆದಿದೆ ಎಂದು ಜಿಲ್ಲಾಧ್ಯಕ್ಷ ದೇವರಾಜ್ಶೆಟ್ಟಿ ತಿಳಿಸಿದರು.
ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ನಮ್ಮ ನಾಯಕ ಡಾ.ಸಿ.ಟಿ.ರವಿ ಅವರನ್ನು ಬಂಧಿಸಿದ ನಂತರ ಪೊಲೀಸರು ನಡೆಸಿಕೊಂಡಿರುವ ಕ್ರಮವನ್ನು ಜಿಲ್ಲಾ ಬಿಜೆಪಿ ಖಂಡಿಸುತ್ತದೆ. ನಾಯಕರನ್ನು ಬಿಡುಗಡೆಗೊಳಿಸುವಂತೆ ಆದೇಶಿಸಿದ ನ್ಯಾಯಾಲಯದ ಆದೇಶವನ್ನು ಜಿಲ್ಲಾ ಬಿಜೆಪಿ ಸ್ವಾಗತಿಸುತ್ತದೆ ಎಂದು ತಿಳಿಸಿದರು.
ಘಟನೆ ಖಂಡಿಸಿ ಪ್ರತಿಭಟನೆ ನಡೆಸಿದ್ದ ನಮ್ಮ ಪಕ್ಷದ ನೂರಾರು ಕಾರ್ಯಕರ್ತರನ್ನು ಬಂಧಿಸಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಿಗೆ ಕರೆದೊಯ್ದು ಹೋರಾಟವನ್ನು ಹತ್ತಿಕ್ಕುವ ಯತ್ನವು ಪೊಲೀಸರಿಂದ ನಡೆಯಿತು ಆದರೆ ಯಾವುದಕ್ಕೂ ಬಗ್ಗದೆ ಪ್ರತಿಭಟನೆಯಲ್ಲಿ ಜಿಲ್ಲೆಯಾದ್ಯಂತ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ಯಶಸ್ವಿಯಾಗಿದೆ ಎಂದು ಹೇಳಿದರು.
ಹೋರಾಟದಲ್ಲಿ ಪಕ್ಷವನ್ನು ಬೆಂಬಲಿಸಿದ ವಿಧಾನಪರಿಷತ್ ಉಪಸಭಾಪತಿ, ಮಾಜಿ ಸಚಿವರು, ಮಾಜಿ ಶಾಸಕರು, ಪಕ್ಷದ ವಿವಿಧ ಮೋರ್ಚಾಗಳು ಅಧ್ಯಕ್ಷರು, ಪದಾಧಿಕಾರಿಗಳು, ವಿವಿಧ ಮಂಡಲಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಪಕ್ಷದ ಮುಖಂಡರು, ಕಾರ್ಯಕರ್ತರು, ಸಾರ್ವಜನಿಕರನ್ನು ನಾನು ಈ ಸಂದರ್ಭದಲ್ಲಿ ಅಭಿನಂದಿಸುತ್ತೇನೆ ಎಂದರು
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮುಖಂಡರಾದ ಕೋಟೆರಂಗನಾಥ್, ಪ್ರೇಮ್ಕುಮಾರ್, ಪುಷ್ಪರಾಜ್, ಸಿ.ಎಚ್.ಲೊಕೇಶ್, ಹಿರೇಮಗಳೂರು ಪುಟ್ಟಸ್ವಾಮಿ ಇದ್ದರು
MLA Dr. C.T. Ravi arrested – Anti-Constitutional Democracy