ಚಿಕ್ಕಮಗಳೂರು: ಪತ್ರಕರ್ತರ ನಡುವೆ ಇರುವ ಗುಂಪುಗಾರಿಕೆ, ಭಿನ್ನಾಭಿಪ್ರಾಯಗಳಿಂದಾಗಿ ಪತ್ರಕರ್ತರ ಯಾವ ಸಮಸ್ಯೆಗಳಿಗೂ ಪರಿಹಾರ ಸಿಗದಂತಾಗಿದೆ. ಪತ್ರಕರ್ತರು ಭಿನ್ನಾಭಿಪ್ರಾಯ ಮರೆತು ಒಗ್ಗಟ್ಟಿನಿಂದ ಬಲಿಷ್ಟವಾದಲ್ಲಿ ಮಾತ್ರ ಪತ್ರಕರ್ತರ ಎಲ್ಲ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಾಧ್ಯವಿದೆ ಎಂದು ಭಾರತೀಯ ಸಣ್ಣ ಮತ್ತು ಮಧ್ಯಮ ಪತ್ರಿಕೆಗಳ ಒಕ್ಕೂಟದ ರಾಷ್ಟಿçÃಯ ಅಧ್ಯಕ್ಷ ಬಿ.ಜಿ.ವಿಜಯ್ ಹೇಳಿದ್ದಾರೆ.
ರವಿವಾರ ತಾಲೂಕಿನ ಬಿಂಡಿಗ ಗ್ರಾಮದಲ್ಲಿರುವ ಬಿಂಡಿಗ ರೆಸಾರ್ಟ್ನಲ್ಲಿ ಭಾರತೀಯ ಸಣ್ಣ ಮತ್ತು ಮಧ್ಯಮ ಪತ್ರಿಕೆಗಳ ಒಕ್ಕೂಟದ ರಾಜ್ಯ ಅಧ್ಯಕ್ಷರ ಅಧಿಕಾರ ಸ್ವೀಕಾರ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ದೇಶಾದ್ಯಂತ ಇರುವ ಸಣ್ಣ ಮತ್ತು ಮಧ್ಯಮ ಪತ್ರಿಕೆಗಳ ಪ್ರಸಕ್ತ ಜ್ವಲಂತ ಸಮಸ್ಯೆಗಳನ್ನು ಎದುರಿಸುತ್ತಿವೆ. ಇದಕ್ಕೆ ಮುಖ್ಯ ಕಾರಣ ಈ ಸಣ್ಣ ಮತ್ತು ಮಧ್ಯಮ ಪತ್ರಿಕೆಗಳ ಮಾಲಕರು, ಪತ್ರಕರ್ತರಲ್ಲಿನ ಅಭಿಪ್ರಾಯ ಬೇಧ, ಗುಂಪುಗಾರಿಕೆ ಕಾರಣ. ಇದರಿಂದಾಗಿ ಈ ವರ್ಗದ ಪತ್ರಕರ್ತರ ಧ್ವನಿ ಯಾರಿಗೂ ಕೇಳದಂತಾಗಿದೆ ಎಂದರು.
ಸಣ್ಣ ಮತ್ತು ಮಧ್ಯಮ ಪತ್ರಿಕೆಗಳು ಮತ್ತು ಪತ್ರಕರ್ತರು ಎದುರಿಸುತ್ತಿರುವ ಸಮಸ್ಯೆಗಳ ಪರಿಹಾರ ಸಂಬAಧ ಪ್ರಧಾನಿ ನರೇಂದ್ರ ಮೋದಿ ಅವರನ್ನೂ ಭೇಟಿ ಮಾಡಿದ್ದೆ. ಪ್ರಧಾನಿ ಮೋದಿ ೧೫ನಿಮಿಷಗಳ ಕಾಲ ಸಮಸ್ಯೆಗಳನ್ನು ಆಲಿಸಿದ್ದಾರೆ. ಸಣ್ಣ ಮತ್ತು ಮಧ್ಯಮ ಪತ್ರಿಕೆಗಳು ಸ್ವಪ್ರತಿಷ್ಟೆ, ಭಿನ್ನಾಭಿಪ್ರಾಯ, ಗುಂಪುಗಾರಿಕೆ ಬದಿಗಿಟ್ಟು ಒಗ್ಗೂಡಿದರೇ ದೊಡ್ಡ ಶಕ್ತಿಯಾಗಿ ಬೆಳೆಯಲು ಸಾಧ್ಯವಿದೆ. ನಮ್ಮ ಸಮಸ್ಯೆಗಳನ್ನು ಆಳುವ ಸರಕಾರಗಳ ಬಳಿ ಹೇಳಿಕೊಂಡು ಪರಿಹಾರ ಕಂಡುಕೊಳ್ಳಲು ಸಾಧ್ಯವಿದೆ ಎಂದ ಅವರು, ಪತ್ರಕರ್ತರಲ್ಲಿ ಸ್ವಪತ್ರಿಷ್ಟೆ ಇರಬಾರದು, ನಮ್ಮ ತಪ್ಪುಗಳನ್ನು ಸರಿಪಡಿಸಿಕೊಂಡು ಸಂಘಟನಾತ್ಮಕವಾಗಿ ಒಗ್ಗೂಡಿದರೇ ಮಾತ್ರ ಎಲ್ಲ ಸಮಸ್ಯೆಗಳಿಗೂ ಪರಿಹಾರ ಕಂಡುಕೊಳ್ಳಬಹುದು ಎಂದರು.
ರಾಷ್ಟಿçÃಯ ಒಕ್ಕೂಟದ ಸದಸ್ಯ ಹಾಗೂ ಒಕ್ಕೂಟದ ನಿಕಟಪೂರ್ವ ರಾಜ್ಯಾಧ್ಯಕ್ಷ ಜಿ.ರಮೇಶ್ ಮಾತನಾಡಿ, ೧೯೮೫ರಲ್ಲಿ ಸ್ಥಾಪನೆಯಾದ ಸಣ್ಣ ಮತ್ತು ಮಧ್ಯಮ ಪತ್ರಿಕೆಗಳ ಒಕ್ಕೂಟಕ್ಕೆ ದೇಶದ ೧೬ ರಾಜ್ಯಗಳ ಬೆಂಬಲವಿದೆ. ಸಣ್ಣ ಮತ್ತು ಮಧ್ಯಮ ಪತ್ರಿಕೆಗಳು ಎದುರಿಸುತ್ತಿರುವ ಆರ್ಎನ್ಐ, ಅಕ್ರಿಡೇಶನ್ ಸಮಸ್ಯೆ ಸೇರಿದಂತೆ ಈ ಪತ್ರಿಕೆಗಳಿಗೆ ಸಿಗುವ ಸರಕಾರಿ ಸೌಲಭ್ಯಗಳನ್ನು ಕಲ್ಪಿಸಿಕೊಡುವುದು ಈ ವೇದಿಕೆಯ ಮುಖ್ಯ ಉದ್ದೇಶವಾಗಿದೆ. ಆಧುನಿಕ ಯುಗದಲ್ಲಿ ಈ ಪತ್ರಿಕೆಗಳು ಅನೇಕ ಗಂಭೀರ ಸಮಸ್ಯೆಗಳನ್ನು ಎದುರಿಸುತ್ತಿವೆ. ಒಕ್ಕೂಟ ಆರಂಭವಾಗಿ ಹಲವು ದಶಕ ಕಳೆದರೂ ಸಣ್ಣ ಮತ್ತು ಮಧ್ಯಮ ಪತ್ರಿಕೆಗಳ ಸಮಸ್ಯೆಗಳಿಗೆ ನಿರೀಕ್ಷಿತ ಪರಿಹಾರ ಸಿಕ್ಕಿಲ್ಲ. ಸರಕಾರವೂ ನಮ್ಮ ಸಮಸ್ಯೆಗಳಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ, ಇದಕ್ಕೆ ಮುಖ್ಯ ಕಾರಣ ಸಂಘಟನೆ ಕೊರತೆಯಾಗಿದೆ. ಈ ಹಿನ್ನೆಲೆಯಲ್ಲಿ ಒಕ್ಕೂಟ ಬಲಿಷ್ಟ ಸಂಘಟನೆಯಾಗಿ ಬೆಳೆದಲ್ಲಿ ಸಮಸ್ಯೆಗಳನ್ನು ಒಗ್ಗೂಡಿ ಎದುರಿಸಲು ಸಾಧ್ಯ ಎಂದರು.
ರಾಷ್ಟಿçÃಯ ಒಕ್ಕೂಟದ ಮುಖಂಡ ಹ್ಯಾರಿ ಡಿಸೋಜ ಮಾತನಾಡಿ, ರಾಜ್ಯ ಮತ್ತು ರಾಷ್ಟಿçÃಯ ಮಟ್ಟದಲ್ಲಿ ಪತ್ರಕರ್ತರ ಹಲವಾರು ಸಂಘಟನೆಗಳಿದ್ದರೂ ಸಣ್ಣ ಮತ್ತು ಮಧ್ಯಮ ಪತ್ರಿಕೆಗಳು, ಪತ್ರಕರ್ತರ ಸಮಸ್ಯೆಗಳಿಗೆ ಇಂದಿಗೂ ಪರಿಹಾರ ಸಿಕ್ಕಿಲ್ಲ. ಈ ಪತ್ರಿಕೆಗಳಿಗೆ ವಾರ್ತಾ ಇಲಾಖೆಯಿಂದಲೂ ಮಾನ್ಯತೆ ಸಿಗದಂತಹ ಪರಿಸ್ಥಿತಿ ನಿರ್ಮಾಣವಾಗಿರುವುದು ದುರಂತ. ಈ ಸಮಸ್ಯೆಗಳಿಗೆ ಪತ್ರಕರ್ತರ ನಡುವಿನ ಭಿನ್ನಾಭಿಪ್ರಾಯ ಮುಖ್ಯ ಕಾರಣವಾಗಿದೆ. ಆದ್ದರಿಂದ ಈ ವರ್ಗದ ಪತ್ರಿಕೆಗಳು, ಪತ್ರಕರ್ತರು ಸಂಘಟಿತರಾಗುವ ಮೂಲಕ ಬೇರೆ ಸಂಘಟನೆಗಳನ್ನು ಗೌರವಿಸುತ್ತಲೇ ನಮ್ಮ ಸಮಸ್ಯೆಗಳಿಗಾಗಿ ಧ್ವನಿ ಎತ್ತಬೇಕು ಎಂದರು ಕಿವಿಮಾತು ಹೇಳಿದರು.
ಅಧಿಕಾರ ಸ್ವೀಕರಿಸಿ ಮಾತನಾಡಿದ ಸಣ್ಣ ಮತ್ತು ಮಧ್ಯಮ ಪತ್ರಿಕೆಗಳ ನಿಯೋಜಿತ ರಾಜ್ಯಾಧ್ಯಕ್ಷ ಜಿ.ಎಂ.ರಾಜಶೇಖರ್ ಮಾತನಾಡಿ, ಸಣ್ಣ ಮತ್ತು ಮಧ್ಯಮ ಪತ್ರಿಕೆಗಳೂ ಸೇರಿದಂತೆ ಗ್ರಾಮೀಣ ಭಾಗದ ಪತ್ರಕರ್ತರ ಬದುಕು ಅತಂತ್ರ ಸ್ಥಿತಿಯಲ್ಲಿದೆ. ಪತ್ರಕರ್ತರ ಸಂಘಟನೆಗಳು ಈ ಪತ್ರಕರ್ತರ ಸಮಸ್ಯೆಗಳಿಗೆ ಸಮರ್ಪಕವಾಗಿ ಸ್ಪಂದಿಸದಿರುವುದು ಪತ್ರಕರ್ತರು ಸಂಘಟಿತರಾಗದಿರಲು ಪ್ರಮುಖ ಕಾರಣವಾಗಿದೆ. ಪತ್ರಕರ್ತರ ಕಷ್ಟಕ್ಕೆ ಸ್ಪಂದಿಸುವ ಸಂಘಟನೆಗಳೊAದಿಗೆ ಪತ್ರಕರ್ತರು ಸದಾ ಇರುತ್ತಾರೆ.
ರಾಷ್ಟಿçÃಯ ಸಣ್ಣ ಮತ್ತು ಮಧ್ಯಮ ಪತ್ರಿಕೆಗಳ ಒಕ್ಕೂಟದ ಅಧ್ಯಕ್ಷರು ಅಪಾರ ಅನುಭವಿಗಳಾಗಿದ್ದು, ಅವರ ಮಾರ್ಗದರ್ಶನದಲ್ಲಿ ರಾಜ್ಯಾಧ್ಯಕ್ಷನಾಗಿ ಪತ್ರಕರ್ತರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸವನ್ನು ಪ್ರಾಮಾಣಿಕವಾಗಿ ಮಾಡುತ್ತೇನೆ. ಜನವರಿಯಿಂದ ಪತ್ರಕರ್ತರ ಸಂಘಟನೆಗಾಗಿ ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳಲಾಗುವುದು. ಇದಕ್ಕೆ ಸಣ್ಣ ಮತ್ತು ಮಧ್ಯಮ ಪತ್ರಿಕೆಗಳ ಸಹಕಾರ ಅಗತ್ಯ ಎಂದರು.
ಒಕ್ಕೂಟದ ಕಾನೂನು ಸಲಹೆಗಾರ ಹಾಗೂ ಹೈಕೋರ್ಟ್ ವಕೀಲ ಅಮೃತೇಶ್ ಮಾತನಾಡಿದರು. ಒಕ್ಕೂಟದ ಪದಾಧಿಕಾರಿಗಳು ಹಾಗೂ ವಿವಿಧ ಜಿಲ್ಲೆಗಳ ಪತ್ರಕರ್ತರು ಸಮಾರಂಭದಲ್ಲಿ ಭಾಗವಹಿಸಿದ್ದರು.
Inauguration ceremony of the State President of the Federation of Small and Medium Newspapers of India