ಚಿಕ್ಕಮಗಳೂರು: ಪರಿಷತ್ ಸದಸ್ಯ ಸಿ. ಟಿ. ರವಿ ಬಂಧನ ಪ್ರಕರಣದಲ್ಲಿ ಸತ್ಯಶೋಧನೆ ನಡೆಸುವಂತೆ, ಹಾಗೂ ಡಿಸಿಎಂ ಡಿ. ಕೆ. ಶಿವಕುಮಾರ್ ಮತ್ತು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ನಿರ್ದೇಶನದಂತೆ ಸಂವಿಧಾನ ಮತ್ತು ಕಾನೂನು ಉಲ್ಲಂಘನೆ ಮಾಡಿ ಪೊಲೀಸ್ ಇಲಾಖೆ ಮೂಲಕ ಅಧಿಕಾರದ ದುರ್ಬಳಕೆ ಮಾಡಿದ ರಾಜ್ಯ ಸರ್ಕಾರದ ವಿರುದ್ಧ ಕ್ರಮಕೈಗೊಳ್ಳುವಂತೆ ಇಂದು ವಿಧಾನ ಪರಿಷತ್ ವಿಪಕ್ಷ ನಾಯಕರಾದ ಶ್ರೀ ಛಲವಾದಿ ನಾರಾಯಣಸ್ವಾಮಿ ಅವರ ನೇತೃತ್ವದ ಬಿಜೆಪಿ ನಿಯೋಗವು ರಾಜ್ಯಪಾಲರಾದ ಥಾವರ್ಚಂದ್ ಗೆಹ್ಲೋಟ್ ಅವರಿಗೆ ದೂರು ಸಲ್ಲಿಸಿತು.
ನಿಯೋಗದಲ್ಲಿ ಪರಿಷತ್ ಸದಸ್ಯರಾದ ಸಿ. ಟಿ. ರವಿ,ಎನ್. ರವಿಕುಮಾರ್, ಕೇಶವ ಪ್ರಸಾದ್, ಕೆ. ಎಸ್. ನವೀನ್, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷರಾದ ಎಸ್. ಹರೀಶ್, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷರಾದ ಸಪ್ತಗಿರಿ ಗೌಡ ಮತ್ತು ಪ್ರಮುಖರು ಉಪಸ್ಥಿತರಿದ್ದರು.
Governor files complaint seeking inquiry into C. T. Ravi’s arrest case