ಚಿಕ್ಕಮಗಳೂರು: ವಿದ್ಯಾರ್ಥಿಗಳು ಶಿಕ್ಷಕರು ಹೇಳುವ ಪಾಠವನ್ನು ಶ್ರದ್ಧೆಯಿಂದ ಕಲಿತಾಗ ವಿದ್ಯಾರ್ಥಿಗಳ ಮುಂದಿನ ಭವಿಷ್ಯ ಉಜ್ವಲಗೊಳ್ಳಲು ಸಹಕಾರಿಯಾಗುತ್ತದೆ ಎಂದು ಡಿಆರ್ಸಿಎಸ್ನ ಉಪನಿರ್ದೇಶಕರಾದ ತೇಜಸ್ವಿನಿ ಅಭಿಪ್ರಾಯಿಸಿದರು.
ಅವರು ಇಂದು ಜೆವಿಎಸ್ ಶಿಕ್ಷಣ ಸಮೂಹ ಸಂಸ್ಥೆಗಳು ಏರ್ಪಡಿಸಿದ್ದ ಕ್ರೀಡಾ ದಿನದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಜೆವಿಎಸ್ ಶಿಕ್ಷಣ ಸಂಸ್ಥೆಗಳು ಉತ್ತಮ ಗುಣಮಟ್ಟದ ಶಿಕ್ಷಣ ನೀಡುತ್ತಿದ್ದಾರೆ. ಸೇವಾ ಮನೋಭಾವದಿಂದ ಈ ಸಂಸ್ಥೆಗಳು ನಡೆಯುತ್ತಿದೆ. ಕೇವಲ ಶಿಕ್ಷಣದಿಂದ ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಹೇಳಿದರು.
ಈ ನಿಟ್ಟಿನಲ್ಲಿ ಶಾಲಾ-ಕಾಲೇಜುಗಳಲ್ಲಿ ಸಾಂಸ್ಕೃತಿಕ ಹಾಗೂ ಕ್ರೀಡಾಕೂಟಗಳು ಆಯೋಜನೆಗೊಂಡಾಗ ಪಠ್ಯೇತರ ವಿಷಯಗಳಲ್ಲಿ ವಿದ್ಯಾರ್ಥಿಗಳಿಗೆ ಆಸಕ್ತಿ ಮೂಡುತ್ತದೆ, ಜೊತೆಗೆ ವ್ಯಕ್ತಿಯ ಸರ್ವತೋಮುಖ ಬೆಳವಣಿಗೆಗೆ ನಾಂದಿಯಾಗುತ್ತದೆ ಎಂದು ತಿಳಿಸಿ ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಗುರಿಇಟ್ಟು ಪರಿಶ್ರಮದಿಂದ ಪ್ರಯತ್ನ ಮಾಡಿದರೆ ಸಾಧನೆ ಮಾಡಬಹುದು. ಜೊತೆಗೆ ಪಠ್ಯಗಳ ವಿಷಯದಲ್ಲಿ ಅಧ್ಯಯನ ಮಾಡುವ ಮನೋಭಾವ ಬೆಳೆಸಿಕೊಳ್ಳಿ ಎಂದು ಕಿವಿಮಾತು ಹೇಳಿದರು.
ಇಷ್ಟಪಟ್ಟು ಶಾಲೆಯಲ್ಲಿ ಕಲಿಯಬೇಕು ಆಗಮಾತ್ರ ತಮ್ಮ ಗುರಿ ಸಾಧಿಸಲು ಸಾಧ್ಯವಾಗುತ್ತದೆ. ಸಮಾಜದ ಎಲ್ಲರೊಂದಿಗೆ ಸಂಯಮದಿಂದ ಬೆರೆತಾಗ ಆರೋಗ್ಯಪೂರ್ಣ ಸಮಾಜ ನಿರ್ಮಾಣಕ್ಕೆ ಪೂರಕವಾಗುತ್ತದೆ ಎಂಬುದು ಕ್ರೀಡಾಕೂಟ ಮತ್ತು ಕ್ರೀಡೆಗಳ ಉದ್ದೇಶ , ಕ್ರೀಡಾಕೂಟಗಳಲ್ಲಿ ಭಾಗವಹಿಸುವುದರಿಂದ ನಾಯಕತ್ವದ ಗುಣ ಬೆಳೆಯುತ್ತದೆ. ಈ ಸಂದರ್ಭದಲ್ಲಿ ಶಿಕ್ಷಕರು ಮಕ್ಕಳಲ್ಲಿ ಇರುವ ಸುಪ್ತ ಪ್ರತಿಭೆಗಳನ್ನು ಗುರ್ತಿಸಿ ಹೊರತರುವ ಜವಾಬ್ದಾರಿ ಇದೆ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಟಿ. ರಾಜಶೇಖರ್ ಮಾತನಾಡಿ, ಜೆವಿಎಸ್ ಸಮೂಹ ಶಿಕ್ಷಣ ಸಂಸ್ಥೆಗಳು ಚಿಕ್ಕಮಗಳೂರಿನಲ್ಲಿ ಪ್ರತಿಷ್ಠಿತ ಶಾಲೆಗಳಾಗಿವೆ, ಕಳೆದ ೩ ವರ್ಷಗಳ ತಮ್ಮ ಅಧಿಕಾರವಧಿಯಲ್ಲಿ ಶಾಲೆಗೆ ಎಲ್ಲಾ ರೀತಿಯ ಸೌಕರ್ಯಗಳನ್ನು ಕಲ್ಪಿಸಲಾಗಿದ್ದು, ಶಿಕ್ಷಕರು, ಕಾಲೇಜು ಪ್ರಾಧ್ಯಾಪಕರು ಸೇರಿದಂತೆ ಸರ್ವರ ಪರಿಶ್ರಮದಿಂದ ಇಂದು ೮೫೦ ಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆಂದರು.
ಕ್ರೀಡಾಕೂಟದಲ್ಲಿ ಭಾಗವಹಿಸುವುದು ಮುಖ್ಯ, ಗೆದ್ದವರು ಬೀಗದೆ ಸೋತವರು ಭಾಗದೆ ಮುಂದಿನ ಅಭಿವೃದ್ಧಿಯತ್ತ ಚಿಂತನೆ ನಡೆಸಿ ಬಹುಮಾನ ಪಡೆದ ವಿದ್ಯಾರ್ಥಿಗಳಿಗೆ ಶುಭಾಷಯ ಕೋರಿದರು.
ಶಾಲಾ ಸಹ ಕಾರ್ಯದರ್ಶಿ ಕೆ.ಕೆ.ಮನುಕುಮಾರ್ ಮಾತನಾಡಿ ಮುಂದಿನ ದಿನಗಳಲ್ಲಿ ಜೆವಿಎಸ್ ಶಾಲೆಯಲ್ಲಿ ಸಿಬಿಎಸ್ಇ ಪಠ್ಯಕ್ರಮ ತರಲು ತಯಾರಿಯನ್ನು ನಡೆಸಲಾಗುತ್ತಿದೆ, ಪ್ರತಿ ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಜೊತೆಗೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಒಕ್ಕಲಿಗರ ಸಂಘದ ಉಪಾಧ್ಯಕ್ಷ ಲಕ್ಷ್ಮಣ್ಗೌಡ, ಕೆ.ಕೆ.ಮನಯಕುಮಾರ್, ನಿರ್ದೇಶಕರಾದ ಎಂ.ಅಶೋಕ್, ಬಿ.ಸಿ.ಶ್ರೀನಾಥ್, ನಾರಾಯಣಗೌಡ, ಸುರೇಂದ್ರ, ಸಲಹ ಸಮಿತಿ ಸದಸ್ಯ ಎಸ್.ಎಸ್ ವೆಂಕಟೇಶ್, ಎಂ.ಪಿ.ಗಂಗೇಗೌಡ, ಜಿಲ್ಲಾ ಒಕ್ಕಲಿಗ ಮಹಿಳಾ ಸಂಘದ ಅಧ್ಯಕ್ಷೆ ರೀನಾಸುಜೇಂದ್ರ, ಕಾರ್ಯದರ್ಶಿ ಅಮಿತಾವಿಜೇಂದ್ರ, ನಿರ್ದೇಶಕರಾದ ಮಂಜುಳಾಹರೀಶ್, ವೇದಾಚಂದ್ರಶೇಖರ್, ಪ್ರಾಂಶುಪಾಲೆ ತೇಜಸ್ವಿನಿ, ಸಿಇಓ ಕುಳ್ಳೇಗೌಡ, ವ್ಯವಸ್ಥಾಪಕ ತೇಜಸ್ಮೂರ್ತಿ, ಮುಖ್ಯ ಶಿಕ್ಷಕ ವಿಜಿತ್ ಉಪಸ್ಥಿತರಿದ್ದರು ಶಶಿಧರ್ ಸ್ವಾಗತಿಸಿ ವಂದಿಸಿದರು.
Sports Day program organized by JVS Education Group of Institutions