ಚಿಕ್ಕಮಗಳೂರು: ಬಲಾಡ್ಯ ಜಾತಿಗಳಲ್ಲಿ ಜನಿಸಿದರೆ ಮಾತ್ರ ಸ್ವರ್ಗ ದೊರಕದು. ಪರೋ ಪಕಾರಿ ಗುಣ ಇರುವವರಿಗೆ ಪುಣ್ಯ, ಪರಪಿಡುಕನಿಗೆ ನರಕ ಎಂಬುದು ಸನಾತನ ಧರ್ಮದಲ್ಲಿದೆ. ಸನ್ನಡತೆ, ಸದ್ವಿಚಾರಗಳಿಂದ ಕೂಡಿರುವ ಮನುಷ್ಯ ದೊಡ್ಡ ವ್ಯಕ್ತಿಯಾಗಲು ಸಾಧ್ಯ, ಜಾತಿಗಳಿಂದಲ್ಲ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಹೇಳಿದರು.
ನಗರದ ಕುವೆಂಪು ಕಲಾಮಂದಿರದಲ್ಲಿ ಸವಿತಾ ಸಮಾಜ ಸೇವಾ ಟ್ರಸ್ಟ್ ವತಿಯಿಂದ ಹಮ್ಮಿಕೊಂಡಿದ್ಧ ೨೫ನೇ ವರ್ಷದ ಬೆಳ್ಳಿ ಮಹೋತ್ಸವ ಕಾರ್ಯಕ್ರಮದಲ್ಲಿ ಮಂಗಳವಾರ ಭಾಗವಹಿಸಿ ಅವರು ಮಾತನಾಡಿ ಪ್ರತಿಯೊಬ್ಬ ಮನುಷ್ಯನ ಆತ್ಮದಲ್ಲಿ ದೇವರು ನೆಲೆಸಿರುತ್ತಾನೆ. ನಮ್ಮೊಳಗೆ ಎಂದಿಗೂ ಕೀಳರಿಮೆ ಇರಕೂ ಡದು. ಒಂದು ಕಾಲದಲ್ಲಿ ರಾಜಮಹಾರಾಜರಿಗೆ ದೊರಕದ ದೇವರ ದರ್ಶನ, ಬೇಡರ ಕಣ್ಣಪ ಭಕ್ತಿಗೆ ಒಲಿ ದು ಪರಮಶಿವ ಪ್ರತ್ಯಕ್ಷನಾದನು. ಶ್ರೀ ರಾಮನು ಶಬರಿ ಭಕ್ತಿಗೆ ಮೆಚ್ಚಿ ಎಂಜಲು ತಿಂದರೆ ಹೊರತು ಜಾತಿಯಿಂ ದಲ್ಲ ಎನ್ನುವ ಸತ್ಯ ಅರಿಯಬೇಕು ಎಂದು ತಿಳಿಸಿದರು.
ಜಗದ ಒಳಿತಿಗಾಗಿ ಶ್ರಮಿಸಿದ ಸವಿತಾ ಮಹರ್ಷಿ ಗುರುಗಳು, ಬಿ.ಆರ್.ಅಂಬೇಡ್ಕರ್, ವಿವೇಕಾನಂದ ರು ಉತ್ತಮ ವಿಚಾರಧಾರೆಗಳಿಂದ ಇಂದಿಗೂ ನೆನೆಸುವಂಥ ಕೆಲಸ ಮಾಡಲಾಗುತ್ತಿದೆ ಹೊರತು ಅಧಿಕಾರ ಅಥವಾ ಅಂತಸ್ತಿನಿಂದಲ್ಲ. ಮನುಷ್ಯನು ಅರ್ಜಿ ಸಲ್ಲಿಸಿ ಜನಿಸಲು ಸಾಧ್ಯವಿಲ್ಲ. ಹುಟ್ಟಿದ ನಂತರ ಬೆಳವಣಿಗೆ ಯತ್ತ ಸಾಗಬೇಕು ಹೊರತು ಜಾತಿಯಿಂದ ಗುರುತಿಸಬಾರದು ಎಂದರು.
ಅನಾದಿಕಾಲದಲ್ಲಿ ಋಷಿಮುನಿಗಳ ಮುಂದೆ ರಾಜರು ತಲೆಬಾಗುತ್ತಿದ್ದರು. ಇಂದು ಮನುಷ್ಯ ಬದುಕಿ ನಲ್ಲಿ ಸುಂದರವಾಗಿ ಕಾಣಲು ಕ್ಷೌರಿಕ ಅಂಗಡಿಗಳಲ್ಲಿ ತಲೆಬಾಗುತ್ತಾನೆ. ಸಮಾಜದಲ್ಲಿ ಪ್ರತಿಯೊಂದು ಜನಾಂ ಗಕ್ಕೂ ಬದುಕುವ ಹಕ್ಕಿದೆ. ಯಾರಿಂದಲೂ ಕಿತ್ತುಕೊಳ್ಳಲು ಸಾಧ್ಯವಿಲ್ಲ ಆ ನಿಟ್ಟಿನಲ್ಲಿ ಅಂಬೇಡ್ಕರ್ ಸಂವಿಧಾನ ದಡಿ ನಾವುಗಳು ಒಂದು ಎಂಬುದು ಸಾಬೀತುಪಡಿಸಬೇಕು ಎಂದರು.
ತಿರುಪತಿ ತಿರುಮಲ ದೇವಸ್ಥಾನದ ಮಂಡಳಿ ಸದಸ್ಯ ನರೇಶ್ಕುಮಾರ್ ಮಾತನಾಡಿ ಸವಿತಾ ಬಂಧು ಗಳು ಸರ್ಕಾರಗಳ ಸೌಲಭ್ಯಗಳಿಂದ ವಂಚಿತರಾಗುತ್ತಿವೆ. ಹೀಗಾಗಿ ಪ್ರತಿ ಅಂಗಡಿಗಳಲ್ಲಿ ಸೌಲಭ್ಯದ ಕರಪತ್ರಗ ಳು ಹಾಕಿ ಜನಾಂಗಕ್ಕೆ ತಿಳಿಹೇಳುವ ಮೂಲಕ ಸವಿತಾ ಸಮಾಜಕ್ಕೆ ಮೀಸಲಿರಿಸಿರುವ ಸೌಲಭ್ಯಗಳ ಪ್ರಯೋ ಜನ ಪಡೆದುಕೊಳ್ಳಬೇಕು ಎಂದು ಹೇಳಿದರು.
ವಿಶೇಷವಾಗಿ ಸಮಾಜದ ಮಹಿಳೆಯರಿಗೆ ಸ್ವಾವಲಂಬಿ ಜೀವನ ಕೈಗೊಳ್ಳಲು ಸವಲತ್ತುಗಳಿದ್ದು. ಈ ಉ ಪಯೋಗವನ್ನು ಬೆರಳಣಿಕೆಯಷ್ಟು ಮಂದಿ ಬಳಸಿಕೊಂಡಿದೆ. ಹೀಗಾಗಿ ಜನಾಂಗಕ್ಕೆ ಮೀಸಲಿರಿಸಿರುವ ನೂರಾರು ಕೋಟಿ ನಿಗಮಗಳಲ್ಲಿದೆ. ಸಮರ್ಪಕವಾಗಿ ಬಳಸಿಕೊಳ್ಳುವುದು ಅತಿಮುಖ್ಯ. ಎಲ್ಲಾ ಜನಾಂಗಗಳು ಒಂದು, ಬಂಧುಗಳೆಂದು ಭಾವಿಸಿದಾಗ ಮಾತ್ರ ಹಿಂದುತ್ವ ಕಾಪಾಡಲು ಸಾಧ್ಯ ಎಂದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಬಿಎಸ್ಪಿ ಕೆ.ಟಿ.ರಾಧಾಕೃಷ್ಣ ಇತ್ತೀಚೆಗೆ ಕ್ಷೌರಿಕ ವೃತ್ತಿಯಲ್ಲಿರುವ ಜ ನಾಂಗವನ್ನು ಅಸೃಶ್ಯರೆಂದು ಭಾವಿಸಲಾಗುತ್ತಿದೆ. ದೇಶಕ್ಕೆ ಸ್ವಾತಂತ್ರ್ಯ ದೊರಕಿ ಏಳೂವರೆ ದಶಕಗಳು ಕಳೆದ ರೂ ಅಸೃಶ್ಯರಿಗೆ ನೈತಿಕ ಸ್ವಾತಂತ್ರ್ಯ ಸಿಕ್ಕಿಲ್ಲ. ಇಂದಿಗೂ ಕೆಲವು ಬಡಾವಣೆಗಲ್ಲಿ ದಲಿತ ಸಮುದಾಯಕ್ಕೆ ಬಾ ಡಿಗೆಗೆ ಮನೆಗಳನ್ನು ಕೊಡುವ ಪದ್ಧತಿ ನಿಷೇದಿಸಿರುವುದು ಶೋಚನೀಯ ಎಂದರು.
ಪ್ರಪಂಚದಲ್ಲಿ ಗಂಡು-ಹೆಣ್ಣು ಎಂಬ ಎರಡೇ ಜಾತಿಗಳಿವೆ. ಆದರೆ ಬಲಾಡ್ಯರ ಜನಾಂಗ ನೋಡುವುದೇ ಬೇರೆಯಾಗಿದೆ. ಹಣವಂತನ, ಜಾತಿ, ಧರ್ಮ ಅಥವಾ ಶುಚಿತ್ವದಿಂದ ಕೂಡಿರುವನೇ ಎಂದು ಅಳಿಯಲಾ ಗುತ್ತಿದೆ. ಅತ್ಯಂತ ಸಣ್ಣ ಇರುವೆಗಳಿಗಿರುವ ಹೊಂದಾಣಿಕೆ, ಪ್ರೀತಿ ನರಮಾನವನ ಬಳಿಯಿಲ್ಲ. ಅಂರ್ತಜಾತಿ ವಿವಾಹದಲ್ಲಿ ಹೆಣ್ಣು, ಗಂಡಿಗೆ ತಾರತಮ್ಯವೆಸಗುತ್ತಿದೆ ಎಂದರು.
ನಾವೆಲ್ಲರೂ ಒಂದೇ ಎನ್ನುವ ಬಲಾಡ್ಯ ಜನಾಂಗ ಅಥವಾ ರಾಜಕೀಯ ಪಕ್ಷಗಳಿಗೆ ಹಸಿವು, ನಗುವಿನಲ್ಲಿ ಜಾತಿ ಕಾಣುವುದಿಲ್ಲ ಎಂದ ಅವರು ಆಡಳಿತ ಸಮಾಜದಲ್ಲಿ ಮಾತ್ರ ಜಾತಿ ಕಾಣಿಸುತ್ತಿದೆ. ಕೇವಲ ಅಂಬೇ ಡ್ಕರ್ ರಚಿಸಿರುವ ಸಂವಿಧಾನದಲ್ಲಿ ಮಾತ್ರ ಸಮಾನರಾಗಿದ್ದೇವೆ. ಸಾಮಾಜಿಕ ಪಿಡುಗುಗಳಿಗೆ ಜೋತು ಬಿದ್ಧು ಕ್ಷೌರಿಕ ವೃತ್ತಿಯಲ್ಲಿ ಪರಿಶಿಷ್ಟರು ಸೇವೆ ಸಲ್ಲಿಸುತ್ತಿದ್ದಾರೆ ಎಂದು ಹೇಳಿದರು.
ವಿಧಾನ ಪರಿಷತ್ ಸದಸ್ಯ ಕಿಶೋರ್ಕುಮಾರ್ ಬೊಟ್ಯಾಡಿ ಮಾತನಾಡಿ ನದಿಗಳ ನೀರು ಎಲ್ಲೆಡೆ ಹರಿ ದು ಕೊನೆಗೆ ಸಮುದ್ರಕ್ಕೆ ಸೇರಿದಂತೆ, ಎಲ್ಲಾ ಹಿಂದುಳಿದ ವರ್ಗಗಳು ಫಲವತ್ತತೆ ಹೊಂದಿ ಕೊನೆಗೆ ಹಿಂದೂ ಮಹಾಸಾಗರಕ್ಕೆ ಸೇರ್ಪಡೆಗೊಂಡು ಗಟ್ಟಿತನ ಮೆರೆಯಬೇಕು. ಎಲ್ಲಾ ಹಿಂದೂಗಳು ಒಂದೇ ಎಂಬ ಸಂಕಲ್ಪ ಹೊಂದಿದರೆ ಮಾತ್ರ ದೇಶ ಸದೃಢವಾಗಲು ಸಾಧ್ಯ ಎಂದರು.
ಕಾರ್ಯಕ್ರಮದಲ್ಲಿ ಕನ್ನಡಪೂಜಾರಿ ಹಿರೇಮಗಳೂರು ಕಣ್ಣ ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿ ದರು. ಇದೇವೇಳೆ ಸವಿತಾ ಸಮಾಜದ ಹಿರಿಯ ಸದಸ್ಯರಾದ ಐದು ಮಂದಿಗೆ ಬಾಲಾಜಿ ವಿಗ್ರಹ ನೀಡುವ ಮೂಲಕ ಗೌರವಿಸಲಾಯಿತು. ಟ್ರಸ್ಟ್ ಅಧ್ಯಕ್ಷ ಸಿ.ವೆಂಕಟೇಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಸೂರಿ ಶ್ರೀನಿವಾಸ್, ರಾಜ್ಯ ತಜ್ಞಮೌಲ್ಯ ನಿರ್ಧರಣಾ ಸಮಿತಿ ಅಧ್ಯಕ್ಷ ಎ.ಎನ್.ಮಹೇಶ್, ತಾಲ್ಲೂಕು ಸವಿತಾ ಸಮಾಜ ಅಧ್ಯಕ್ಷ ಸಿ.ಎಂ.ಯೋಗೀಶ್, ಹಿರೇಮಗಳೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಹೆಚ್.ಕೆ.ಕೇಶವಮೂರ್ತಿ ಮತ್ತಿತರರು ಉಪಸ್ಥಿತರಿದ್ದರು.
Savita Samaj 25th Year Silver Jubilee Celebration Program