ಚಿಕ್ಕಮಗಳೂರು: ಮಹಿಳೆಯರು ಶಿಕ್ಷಣ ಪಡೆದು ಆರ್ಥಿಕ, ಸಾಮಾಜಿಕ ಮತ್ತು ರಾಜಕೀಯವಾಗಿ ಸಬಲರಾದರೆ ಜೀವನದಲ್ಲಿ ಸಫಲರಾಗಬಹುದು. ಪ್ರತಿಯೊಬ್ಬರು ಶಿಕ್ಷಣವಂತರಾಗಿ ತಮ್ಮ ಹಕ್ಕುಗಳನ್ನು ಪಡೆದುಕೊಳ್ಳಿ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಿರಿಯ ಸಿವಿಲ್ ನ್ಯಾಯಾದೀಶರು ಹಾಗೂ ಸದಸ್ಯ ಕಾರ್ಯದರ್ಶಿ ವಿ. ಹನುಮಂತಪ್ಪ ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಪಿ.ಸಿ ಮತ್ತು ಪಿ.ಎನ್.ಡಿ.ಟಿ ವಿಭಾಗ ಹಾಗೂ ಶ್ರೀ ರಾಮಕೃಷ್ಣ ನರ್ಸಿಂಗ್ ಕಾಲೇಜು ಚಿಕ್ಕಮಗಳುರು ಇವರ ವತಿಯಿಂದ ನಗರದ ಶ್ರೀ ರಾಮಕೃಷ್ಣ ನರ್ಸಿಂಗ್ ಕಾಲೇಜು ಸಭಾಂಗಣದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಹೆಚ್ಚು ಮಕ್ಕಳ ದಿನಾಚರಣೆ ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಹೆಣ್ಣು ಜಗದ ಕಣ್ಣು ಹೆಣ್ಣಿಲ್ಲದ ಪ್ರಪಂಚವನ್ನು ಊಹಿಸಲು ಸಾಧ್ಯವಿಲ್ಲ. ಪ್ರತಿಯೊಬ್ಬರು ಹೆಣ್ಣು ಮಕ್ಕಳನ್ನು ಗೌರವಿಸಬೇಕು. ಸಮಾಜದಲ್ಲಿ ಹೆಣ್ಣನ್ನು ನೋಡುವ ದೃಷ್ಠಿ ಬದಲಾಗಬೇಕು. ಸರ್ಕಾರವು ಮಹಿಳಾ ಸಬಲೀಕರಣಕ್ಕಾಗಿ ಅನೇಕ ಯೋಜನೆಗಳನ್ನು ಜರಿ ಮಾಡಿದೆ ಪ್ರತಿಯೊಬ್ಬರು ಇದರ ಸದುಪಯೋಗ ಪಡೆದು ಸಬಲರಾಗಬೇಕು ಎಂದರು.
ಇತ್ತೀಚಿನ ದಿನಗಳಲ್ಲಿ ಪೋಷಕರಲ್ಲಿ ಹೆಣ್ಣು ಮಕ್ಕಳ ಮೇಲಿನ ನಿರ್ಲಕ್ಷ್ಯ ಹಾಗೂ ಗಂಡು ಮಕ್ಕಳ ಆದ್ಯತೆಯು ಹೆಣ್ಣು ಸಂತತಿ ಕಡಿಮೆಗೊಳ್ಳಲು ಕಾರಣವಾಗುತ್ತಿದೆ. ಇದರಿಂದ ಹೆಣ್ಣು ಭ್ರೂಣ ಹತ್ಯೆ ಹಾಗೂ ಭ್ರೂಣ ಪತ್ತೆ ಪ್ರಕರಣಗಳು ಹೆಚ್ಚುತ್ತಿವೆ ಇವು ಕಾನೂನು ಬಾಹೀರವಾಗಿದ್ದು ಇಂತಹ ಕೃತ್ಯ ಹೆಸಗುವವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು. ಎಲ್ಲರಿಗೂ ಸಮಪಾಲು ಸಮಬಾಳು ಎಂಬಂತೆ ಪ್ರತಿಯೊಬ್ಬರಿಗೂ ಸ್ವತಂತ್ರವಾಗಿ ಜೀವಿಸುವ ಹಕ್ಕಿದೆ. ಹೆಣ್ಣು ಮಕ್ಕಳು ತಮ್ಮ ರಕ್ಷಣೆಗಿರುವ ಕಾನೂನು ಮತ್ತು ಹಕ್ಕುಗಳನ್ನು ಅರಿತು ಸಮಾಜದಲ್ಲಿ ಸ್ವಾವಲಂಭಿ ಜೀವನ ನಿರ್ವಹಿಸಿ ಎಂದು ತಿಳಿಸಿದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಕೆ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ಶಶಿಕಲಾ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿ ಮಾತನಾಡಿ. ಸರ್ಕಾರವು ಹೆಣ್ಣು ಭ್ರೂಣ ಹತ್ಯೆ ಮತ್ತು ಭ್ರೂಣ ಪತ್ತೆ ಹಚ್ಚುವಿಕೆಯನ್ನು ನಿರ್ಮೂಲನೆ ಮಾಡಿ ಮಹಿಳಾ ಸ್ವಾತಂತ್ರವನ್ನು ಎತ್ತಿ ಹಿಡಿಯಲು ಪಿ.ಸಿ ಮತ್ತು ಪಿ.ಎನ್.ಡಿ.ಟಿ ಕಾಯ್ದೆಯನ್ನು ಜಾರಿ ಮಾಡಿದೆ. ಮಹಿಳೆಯರು ಯಾರ ಒತ್ತಡಕ್ಕೆ ಮಣಿಯದೆ ಭ್ರೂಣ ಹತ್ಯೆ ನಿರ್ಮೂಲನೆಗೆ, ಹೆಣ್ಣಿನ ರಕ್ಷಣೆಗೆ ಸ್ವತಹ ಹಣ್ಣೆ ಸಹಕರಿಸಬೇಕು. ಸಮಾಜದ ಉಜ್ವಲ ಭವಿಷ್ಯಕ್ಕಾಗಿ ಹೆಣ್ಣು ಮಕ್ಕಳನ್ನು ಸಧೃಡಗೊಳಿಸಬೇಕು. ಪೋಷಕರು ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡಿ ಅವರನ್ನು ಅಕ್ಷರಸ್ತರನ್ನಾಗಿ ಮಾರಿ ಸಮಾಜದ ಉನ್ನತ ಸ್ಥಾನ ತಲುಪಲು ಬೆನ್ನೆಲುಬಾಗಿ ನಿಲ್ಲಬೇಕು ಎಂದ ಅವರು. ಪ್ರತಿಯೊಬ್ಬರು ಮಹಿಳೆಯರನ್ನು ಗೌರವಿಸಿ ಎಂದು ಹೇಳಿದರು.
ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಲಲಿತ ಮಾತನಾಡಿ. ಸರ್ಕಾರವು ಹೆಣ್ಣು ಮಕ್ಕಳ ರಕ್ಷಣೆ ಹಾಗೂ ಅಭಿವೃದ್ಧಿಗಾಗಿ ಅನೇಕ ಕಾರ್ಯಕ್ರಮ ಹಾಗೂ ಯೋಜನೆಗಳನ್ನು ರೂಪಿಸಿ ಮಹಿಳಾ ಸಬಲೀಕರಣಕ್ಕೆ ಶ್ರಮಿಸುತ್ತಿದೆ ಪ್ರತಿಯೊಬ್ಬರು ಇದರ ಸದುಪಯೋಗ ಪಡೆದುಕೊಳ್ಳಿ ಎಂದರು.
ಶ್ರೀ ರಾಮಕೃಷ್ಣ ನರ್ಸಿಂಗ್ ಕಾಲೇಜು ಆಡಳಿತಾಧಿಕಾರಿ ಉಮಾ ಮಾಹೇಶ್ವರಯ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬೇಬಿ, ಹರ್ಷ ಸೇರಿದಂತೆ ಶ್ರೀ ರಾಮಕೃಷ್ಣ ನರ್ಸಿಂಗ್ ಕಾಲೇಜು ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
National Children’s Day Awareness Program