ALSO FEATURED IN

Foundation stone laid:ಅಭಿವೃದ್ಧಿ ಕಾರ್ಯಗಳಲ್ಲೂ ಸರ್ಕಾರ ಮುಂಚುಣಿಯಲ್ಲಿದೆ

Spread the love
ಚಿಕ್ಕಮಗಳೂರು: ನಮ್ಮ ಸರ್ಕಾರವು ಪಂಚ ಗ್ಯಾರಂಟಿ ಯೋಜನೆಗಳನ್ನು ಜನರಿಗೆ ವ್ಯವಸ್ಥಿತವಾಗಿ ತಲುಪಿಸುವುದಲ್ಲದೇ ವಿವಿಧ ಯೋಜನೆಗಳನ್ನು ರೂಪಿಸಿ ರಾಜ್ಯದ ಸರ್ವತೋಮುಖ ಅಭಿವೃದ್ಧಿ ಕಾರ್ಯದಲ್ಲು ಮುಂದಿದೆ ಎಂದು ಚಿಕ್ಕಮಗಳೂರು ವಿಧಾನ ಸಭಾ ಕ್ಷೇತ್ರದ ಶಾಸಕ ಹೆಚ್.ಡಿ ತಮ್ಮಯ್ಯ ಹೇಳಿದರು.
ಬೆಳವಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆಳವಾಡಿ ಗ್ರಾಮದ ರಸ್ತೆ ಮತ್ತು ಮಸೀದಿ ಅಭಿವೃದ್ಧಿಗೆ ಅಲ್ಪ ಸಂಖ್ಯಾತರ ಇಲಾಖೆ ಮತ್ತು ವಕ್ಫ್ ಬೋರ್ಡ್ ಇಲಾಖೆ ವತಿಯಿಂದ ೪೦ ಲಕ್ಷ ರೂ ವೆಚ್ಚದಲ್ಲಿ ಅಭಿವೃದ್ಧಿ ಕೆಲಸಗಳಿಗೆ ಶಂಕುಸ್ಥಾಪನೆ ನೆರೆವೇರಿಸಿ ಮಾತನಾಡಿ ಮುಖ್ಯ ಮಂತ್ರಿ ಸಿದ್ಧರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ರವರ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರಲ್ಲಿ ಚುನಾವಣೆ ಪೂರ್ವದಲ್ಲಿ ಘೋಷಿಸಿದ ಯೋಜನೆಗಳು ಎಂದರು
ಅನ್ನಭಾಗ್ಯ, ಗೃಹಲಕ್ಷ್ಮೀ, ಗೃಹಜ್ಯೋತಿ, ಶಕ್ತಿಯೋಜನೆ ಹಾಗೂ ಯುವನಿಧಿಯಂತಹ   ಪಂಚ ಗ್ಯಾರಂಟಿ ಯೋಜನೆಗಳನ್ನು ಕೇವಲ ೬ ತಿಂಗಳುಗಳಲ್ಲಿ ಜಾರಿಗೆ ತಂದು ಮಹಿಳಾ ಸಬಲೀಕರಣದೊಂದಿಗೆ ದೀನ ದಲಿತರನ್ನು ಹಸಿವು ಮುಕ್ತರನ್ನಾಗಿ ಮಾಡಿ ಅವರನ್ನು ಸಮಾಜದ ಮುಖ್ಯ ವಾಹಿನಿಗೆ ತರಲು ಶ್ರಮಿಸುತ್ತಿದೆ ಎಂದ ಅವರು ಕ್ಷೇತ್ರದ ಯಾವುದೇ ಗ್ರಾಮಕ್ಕೆ ಬೇಟಿ ನೀಡಿದರು ಅಲ್ಲಿರುವ ಷೋಷಿತ ಹಾಗೂ ಹಿಂದುಳಿದ ವರ್ಗಗಳ ಮಹಿಳೆಯರು ಸೇರಿದಂತೆ ಎಲ್ಲಾ ಮಹಿಳೆಯರು ಸಂತೋಷದಿಂದ ಸ್ವಾವಲಂಬಿಗಳಾಗಿ ತಮ್ಮ ಜೀವನವನ್ನು ನಿರ್ವಹಿಸುತ್ತಿದ್ದಾರೆ. ಮಹಿಳಾ ಸಬಲೀಕರಣವು ಸರ್ಕಾರದ ಧ್ಯೇಯ ಎಂದರು.
ಗ್ಯಾರಂಟಿ ಯೋಜನೆಗಳೊಂದಿಗೆ ಸರ್ಕಾರವು ವಿವಿಧ ಯೋಜನೆಗಳನ್ನು ರೂಪಿಸಿ ರಾಜ್ಯದ ಸರ್ವತೋಮುಖ ಅಭಿವೃದ್ಧಿ ಕಾರ್ಯಗಳನ್ನು ನಿರ್ವಹಿಸುತ್ತಿದೆ. ಕ್ಷೇತ್ರದ ಎಲ್ಲಾ ಗ್ರಾಮಗಳಲ್ಲಿಯು ಜನರು ರಸ್ತೆ ಹಾಗೂ ಸಮುದಾಯ ಭವನಗಳಿಗೆ ಅನುದಾನದ ಬೇಡಿಕೆ ಇಡುತ್ತಿದ್ದಾರೆ. ಮುಖ್ಯಮಂತ್ರಿಗಳು ನಮ್ಮ ಮನವಿ  ಮೇರೆಗೆ ೨೫ ಕೊಟಿ ರೂಗಳ ವಿಷೇಶ ಅನುದಾನವನ್ನು ನೀಡಿದ್ದಾರೆ.
ಆ ಅನುದಾನದಲ್ಲಿ ಸುಮಾರು ೩ ಕೋಟಿಗೂ ಅಧಿಕ ಅನುದಾನದಲ್ಲಿ ಬೆಳವಾಡಿ, ಕೆ.ಬಿ ಹಾಳ್ ಹಾಗೂ ಮಾಚೇನಹಳಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳಿಗಾಗಿ ಇಂದು ಶಂಕುಸ್ಥಾಪನೆ ನಡೆಸಲಾಗಿದೆ.  ಮಾಚೇನಹಳ್ಳಿ ತಾಂಡ್ಯದಿಂದ ಜಾವಗಲ್ ವರೆಗೂ ಸುಮಾರು ೫೦ ಲಕ್ಷ ರೂ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ನಿರ್ವಹಿಸಲಾಗುತ್ತಿದೆ. ಸಾರ್ವಜನಿಕರಿಗೆ ಹೆಚ್ಚು ಅಗತ್ಯವಿರುವ ಅಂಶಗಳಿಗೆ ಮೊದಲು ಆದ್ಯತೆ ನೀಡಿದ್ದು ಇದೇ ರೀತಿ ಹಂತ ಹಂತವಾಗಿ ಕ್ಷೇತ್ರದ ಎಲ್ಲಾ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಬಗರ್ ಹುಕ್ಕುಂ ಕಮಿಟಿ ಸದಸ್ಯರಾದ ಕೆಂಗೇಗೌಡ, ಶಂಕರ್ ನಾಯಕ್, ಅಮೀರ್ ಬೆಳವಾಡಿ, ಚಂದ್ರಶೇಖರ್, ಕೃಷ್ಣಮೂರ್ತಿ, ಹರೀಶ್, ನಾಗಣ್ಣ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
Foundation stone laid for development works at a cost of Rs 40 lakh by the Waqf Board Department
Facebook
X
WhatsApp
Telegram
Spread the love

ಚಿಕ್ಕಮಗಳೂರು:  ಕೇಂದ್ರಸರ್ಕಾರ ಸಂಸತ್‌ನಲ್ಲಿ ಆರ್ಥಿಕ ಬಿಲ್ ಸಲ್ಲಿಸುವಾಗ ೮ನೇ ವೇತನ ಆಯೋಗ ರಚನೆಯಾಗಿ ಕಾರ್ಯಾಚರಣೆಯಲ್ಲಿದ್ದು, ನಿವೃತ್ತ ಪಿಂಚಣಿದಾರರಿಗೆ ಪಿಂಚಣಿ, ಕುಟುಂಬ…

Spread the love

ಚಿಕ್ಕಮಗಳೂರು: ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಹಾಜರಾತಿ ಕಡಿಮೆಯಾಗುತ್ತಿರುವುದಕ್ಕೆ ಸರ್ಕಾರದ ವಿವಿಧ ವಸತಿ ಶಾಲೆಗಳಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ದೊರೆಯುತ್ತಿರುವುದು ಪ್ರಮುಖ…

Spread the love

ಚಿಕ್ಕಮಗಳೂರು:  ಕೇಂದ್ರಸರ್ಕಾರ ಸಂಸತ್‌ನಲ್ಲಿ ಆರ್ಥಿಕ ಬಿಲ್ ಸಲ್ಲಿಸುವಾಗ ೮ನೇ ವೇತನ ಆಯೋಗ ರಚನೆಯಾಗಿ ಕಾರ್ಯಾಚರಣೆಯಲ್ಲಿದ್ದು, ನಿವೃತ್ತ ಪಿಂಚಣಿದಾರರಿಗೆ ಪಿಂಚಣಿ, ಕುಟುಂಬ…

Spread the love

ಚಿಕ್ಕಮಗಳೂರು: ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಹಾಜರಾತಿ ಕಡಿಮೆಯಾಗುತ್ತಿರುವುದಕ್ಕೆ ಸರ್ಕಾರದ ವಿವಿಧ ವಸತಿ ಶಾಲೆಗಳಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ದೊರೆಯುತ್ತಿರುವುದು ಪ್ರಮುಖ…

[t4b-ticker]
Exit mobile version