ಚಿಕ್ಕಮಗಳೂರು: ಅಲ್ಲಂಪುರ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಕಮಲಾಕ್ಷಿ ಸೋಮಶೇಖರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ರವೀಶ್ ಘೋಷಿಸಿದರು.
ನಂತರ ನಡೆದ ಅಭಿನಂದನೆ ಸಮಾರಂಭದಲ್ಲಿ ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಟಿ. ರಾಜಶೇಖರ್ ನೂತನ ಅಧ್ಯಕ್ಷರಿಗೆ ಅಭಿನಂದನೆ ಸಲ್ಲಿಸಿ ಮಾತನಾಡಿ ಪಂಚಾಯಿತಿಯ ಸದಸ್ಯರು ಹಾಗೂ ಮಾಜಿ ಶಾಸಕರು ನಗರಕ್ಕೆ ಹೊಂದಿಕೊಂಡಿರುವ ಅಲ್ಲಂಪುರ ಗ್ರಾಮ ಪಂಚಾಯಿತಿ ಏಳಿಗೆಗಾಗಿ ಅನೇಕ ಯೋಜನೆಗಳನ್ನು ರೂಪಿಸಿ ಅಭಿವೃದ್ಧಿ ಕಾರ್ಯಗಳನ್ನು ನಿರ್ವಹಿಸಿದ್ದಾರೆ.
ಇದೀಗ ನೂತನವಾಗಿ ಆಯ್ಕೆಯಾಗಿರುವ ಅಧ್ಯಕ್ಷರು ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಗ್ರಾಮದ ಸಾರ್ವಜನಿಕರ ಸಹಮತವನ್ನು ಪಡೆದು ಪ್ರತಿಯೊಬ್ಬರ ಕುಂದು ಕೊರತೆಗಳನ್ನು ಆಲಿಸಿ ಸ್ಪಂಧಿಸುವುದರ ಜೊತೆಗೆ ಪಂಚಾಯಿತಿಯ ಅಭಿವೃದ್ಧಿಗಾಗಿ ಶ್ರಮಿಸಬೇಕು ಎಂದರು.
ಅಲ್ಲಂಪುರ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷೆ ಕಮಲಾಕ್ಷಿ ಸೋಮಶೇಖರ್ ಮಾತನಾಡಿ ನನ್ನನ್ನು ಅಧ್ಯಕ್ಷ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆ ಮಾಡಿರುವ ಪ್ರತಿಯೊಬ್ಬ ಸದಸ್ಯರಿಗೂ ಹಾಗೂ ಗ್ರಾಮಸ್ಥರಿಗೂ ವಿದೇಯಳಾಗಿರುತ್ತೇನೆ. ಪಂಚಾಯಿತಿ ವ್ಯಾಪ್ತಿಯಲ್ಲಿ ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರು, ಬೀದಿ ದೀಪ, ಹಾಗೂ ಸ್ವಚ್ಚತೆ ಸೇರಿದಂತೆ ಜನರ ಸಮಸ್ಯೆಗಳಿಗೆ ಸ್ಪಂದಿಸುವ ನನ್ನ ಜವಾಬ್ದಾರಿಯನ್ನು ವ್ಯವಸ್ಥಿತವಾಗಿ ನಿರ್ವಹಿಸುತ್ತೇನೆ ಎಂದು ತಿಳಿಸಿದರು.
ಎಪಿಎಂಸಿ ಮಾಜಿ ಅಧ್ಯಕ್ಷ ಶಿವಕುಮಾರ್ ಮಾತನಾಡಿ ಕಮಲಾಕ್ಷಿ ಸೋಮಶೇಕರ್ ಅವರು ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವುದು ಸ್ವಾಗತಾರ್ಹ. ಇವರ ಈ ಅವಧಿಯಲ್ಲಿ ಪಂಚಾಯಿತಿಯ ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ ಯಾವುದೇ ಕೊರತೆಯಾಗದಂತೆ ಕ್ರಮವಹಿಸಿ ಎಲ್ಲಾವರ್ಗದ ಜನರಿಗೂ ಮೂಲಭೂತ ಸೌಲಭ್ಯಗಳನ್ನು ಒದಗಿಸಿ ಅಧಿಕಾರಿಗಳು ಜೊತೆಗೂಡಿ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳ ಅಭಿವೃದ್ಧಿಗೆ ಸಹಕರಿಸಬೇಕು ಎಂದರು.
ಈ ಸಂದರ್ಭದಲ್ಲಿ ಅಲ್ಲಂಪುರ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾದ ದಾನೇಶ್, ಸದಸ್ಯರುಗಳಾದ ಅರ್ಪಿತ ಎ.ಎಂ, ಪೂರ್ಣಿಮಾ ಎಸ್, ವಸಂತಕುಮಾರ್, ಶಿವರಾಜ್, ಮಧುಸೂಧನ್ ರಾವ್, ಎ.ಟಿ ರಮೇಶ್, ಪದ್ಮಾಕ್ಷಿ, ಕೃಷ್ಣ, ಶಿಲ್ಪ ಸೇರಿದಂತೆ ಗ್ರಾಮ ಪಂಚಾಯಿತಿ ಅಧಿಕಾರಿ ಸಿಬ್ಬಂಧಿಗಳು ಹಾಗೂ ಸರ್ವಜನಿಕರು ಉಪಸ್ಥಿತರಿದ್ದರು.
Kamalakshi Somashekar elected as new president of Allampura Gram Panchayat