ಚಿಕ್ಕಮಗಳೂರು: ೨೦೨೩-೨೪ನೇ ಸಾಲಿನಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆಯ ಅನುಷ್ಠಾನದಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಜಿಲ್ಲೆಯ ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗ, ತರೀಕೆರೆ ತಾಲ್ಲೂಕು ಪಂಚಾಯಿತಿ, ಬರಗೇನಹಳ್ಳಿ ಗ್ರಾಮ ಪಂಚಾಯಿತಿ ಹಾಗೂ ಬಿಂತ್ರವಳ್ಳಿ ಗ್ರಾಮ ಪಂಚಾಯಿತಿಯ ವೈಯಕ್ತಿಕ ಫಲಾನುಭವಿ ಹೊನ್ನಮ್ಮ ಅವರಿಗೆ ರಾಜ್ಯ ಮಟ್ಟದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಫೆ.೫ರಂದು ಬೆಂಗಳೂರಿನ ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಂಡಿದ್ದ ನರೇಗಾ ಹಬ್ಬದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಚಿವ ಪ್ರಿಯಾಂಕ್ ಖರ್ಗೆ, ಶಾಸಕ ರಿಜ್ವಾನ್ ಅರ್ಷದ್, ಪಂಚಾಯತ್ ರಾಜ್ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಉಮಾ ಮಹದೇವನ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅಂಜುಮ್ ಪರ್ವೇಜ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಆಯುಕ್ತ ಪವನ್ ಕುಮಾರ್ ಮಾಲಪಾಟಿ ಅವರು ಪ್ರಶಸ್ತಿ ಪ್ರದಾನ ಮಾಡಿದರು.
ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಕೀರ್ತನಾ ಎಚ್.ಎಸ್, ಉಪ ಕಾರ್ಯದರ್ಶಿ (ಅಭಿವೃದ್ಧಿ) ಕೃಷ್ಣ ನಾಯ್ಕ್, ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ರವಿ ಕುಮಾರ್, ತರೀಕೆರೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ದೇವೇಂದ್ರಪ್ಪ, ಸಹಾಯಕ ನಿರ್ದೇಶಕ ಯೋಗೇಶ್ ಇದ್ದರು.
Four awards for the district under the Mahatma Gandhi Narega scheme